ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿ ಶೀರೂರು ಶ್ರೀಪಾದರು ಸ್ಪರ್ಧೆ ಖಚಿತ
ಮಲ್ಪೆ: ಬಿಜೆಪಿಯಿಂದ ಅಭ್ಯರ್ಥಿಯ ಸಮೀಕ್ಷೆ ನಡೆಯುತ್ತಿದೆ. ಆ ಪಕ್ಷದಿಂದ ಟಿಕೆಟ್ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಇದ್ದೇನೆ. ಒಂದೊಮ್ಮೆ ಬಿಜೆಪಿ ಟಿಕೆಟ್ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಂತೂ ನಿಶ್ಚಿತ ಎಂದು ಉಡುಪಿ ಶೀರೂರು ಮಠಾಧೀಶ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳು ಪುನರುಚ್ಚರಿಸಿದ್ದಾರೆ. ಅವರು ರವಿವಾರ ಜನರಲ್ಲಿ ಮತ ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡುವ ಪೂರ್ವಭಾವಿಯಾಗಿ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಬಳಿಕ...