ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್ – ಕಹಳೆ ನ್ಯೂಸ್
ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಕರೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Vokkaliga seer Chandrashekar Swamiji ) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೈಯ್ಯದ್ ಅಬ್ಬಾಸ್ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್‌ಎಸ್ ಸೆಕ್ಷನ್ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ...