Saturday, January 18, 2025

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಬಿಳಿಯೂರಿನ ತಿಪ್ಪಕೋಡಿ ಮನೆಯಂಗಳದಲ್ಲಿ ಜ.22ರಂದು ಶ್ರೀ ಶನೀಶ್ವರ ಮಹಾತ್ಮೆ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಉಪ್ಪಿನಂಗಡಿ : ಬಿಳಿಯೂರಿನ ತಿಪ್ಪಕೋಡಿ ಬಾಲಕೃಷ್ಣ ಮಹಾಬಲ ರೈ ಯವರ ಮನೆಯಂಗಳದಲ್ಲಿ ಜ.22ರ ಸಂಜೆ 6 ಗಂಟೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ಶನೀಶ್ವರ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಅಪರಾಹ್ನ 3.30ರಿಂದ 5.30ರವರೆಗೆ ಶ್ರೀ ದುರ್ಗಾ ಮಹಾಲಕ್ಷ್ಮೀ ಭಜನಾ ಮಂಡಳಿ ಶ್ರೀಧಾಮ ಮಾಣಿಲದವರಿಂದ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ ಶ್ರೀ ದೇವಿಯ ಪ್ರಸಾದ ರೂಪವಾಗಿ ಅನ್ನಸಂತರ್ಪಣೆ ನಡೆಯಲಿದೆ....
ಸುದ್ದಿಸುಳ್ಯ

ಸುಳ್ಯ: ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ-ಕಹಳೆ ನ್ಯೂಸ್

ಸುಳ್ಯ: ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕೊಲೆಗೈದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ, ಕೃಷಿಕ ರಾಮಚಂದ್ರ ಗೌಡ ಅಲಿಯಾಸ್ ಚಂದ್ರ (54) ಎಂದು ತಿಳಿದು ಬಂದಿದೆ. ಅವರ ಪತ್ನಿ ವಿನೋದ (43) ಹತ್ಯೆಗೊಳಗಾದವರು ಎಂದು ತಿಳಿದು ಬಂದಿದೆ. ತನ್ನದೇ ಲೈಸನ್ಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೋಟೆಕಾರು ಬ್ಯಾಂಕ್ ದರೋಡೆಯಿಂದ ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯದ ಕಾನೂನು-ಸುವ್ಯವಸ್ಥೆಯ ಸತ್ಯ ದರ್ಶನ: ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ಸಿಎಂ ಸಿದ್ದರಾಮಯ್ಯನವರು ಮಂಗಳೂರಿನಲ್ಲಿರುವಾಗಲೇ ಹಾಡಹಗಲೇ ದುಷ್ಕರ್ಮಿಗಳು ಬ್ಯಾಂಕ್ ದರೋಡೆ ನಡೆಸುವ ಮೂಲಕ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಎಷ್ಟಮಟ್ಟಿಗೆ ಹದಗೆಟ್ಟು ಹೋಗಿದೆ ಎಂಬುದರ ಸತ್ಯ ದರ್ಶನದ ಅರಿವು ಕಾಂಗ್ರೆಸ್ ಸರ್ಕಾರಕ್ಕೆ ಆಗಿದ್ದು, ಇದೊಂದು ಅತ್ಯಂತ ಆತಂಕ ಹಾಗೂ ನಾಚಿಕೆ ಗೇಡಿನ ವಿಚಾರ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ಗೆ ದುಷ್ಕರ್ಮಿಗಳ ಗ್ಯಾಂಗ್ ಹಾಡಹಗಲೇ ನುಗ್ಗಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ಹಣ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ.09ರಿಂದ ಫೆ.11ರವರೆಗೆ ಕುಂಜೂರುಪಂಜದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ನೇಮೋತ್ಸವ – ಕಹಳೆ ನ್ಯೂಸ್

ಶ್ರೀ ದುರ್ಗಾ ಭಜನಾ ಮಂದಿರ (ರಿ.) ಕುಂಜೂರುಪಂಜ ಇದರ 22ನೇ ವರ್ಷದ ವಾರ್ಷಿಕೋತ್ಸವ ಮತ್ತು ನೂತನವಾಗಿ ನಿರ್ಮಿಸಿರುವ ಗ್ರಾಮದೈವಗಳಾದ ಇರುವೆರ್ ಉಳ್ಳಾಕುಲು ಇದರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವವು ಫೆ.09ರಿಂದ ಫೆ.11ರವರೆಗೆ ನಡೆಯಲಿದೆ. ಫೆ.09ರಂದು ಹೊರಕಾಣಿಕೆ ನಡೆದು, ಫೆ.10ರಂದು ಬೆಳಿಗ್ಗೆ ಗಂಟೆ 8-48ರ ಮೀನ ಲಗ್ನದ ಶುಭ ಮುಹೂರ್ತದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ವೇದಮೂರ್ತಿ ಶ್ರೀ ಉದಯ ನಾರಾಯಣ ಕಲ್ಲೂರಾಯರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೋಟೆಕಾರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ-ಕಹಳೆ ನ್ಯೂಸ್

ಮಂಗಳೂರು: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ...
ಕಡಬಶಿಕ್ಷಣಸುದ್ದಿ

ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿಗಳ ಸಾಧನೆ-ಕಹಳೆ ನ್ಯೂಸ್

ಕಡಬ : ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ, ಭಾರತ ಸಂಸ್ಕೃತಿ ಪ್ರತಿಷ್ಠಾನವು ನವೆಂಬರ್ 16 ರಂದು ನಡೆಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿನ 8 ಮತ್ತು 9ನೇ ತರಗತಿಯ 13 ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ. ರಾಮಾಯಣ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕವನ್ನು ಸುಮಂತ್ ಕೆ.ಪಿ. (9ನೇ ತರಗತಿ), ಪ್ರಥಮ ಸ್ಥಾನ,ಚಂದ್ರಮೌಳಿ ಬಿ. (8ನೇ ತರಗತಿ), ದ್ವಿತೀಯ ಸ್ಥಾನ, ಪ್ರಯಾಗ್ ಪಿ.ವಿ. (9ನೇ ತರಗತಿ),...
ಕಡಬಸಂತಾಪಸುದ್ದಿ

ಬೈಕ್ ನಿಯಂತ್ರಣತಪ್ಪಿ ಅಪ್ರಾಪ್ತ ಬಾಲಕ ಮೃತ್ಯು- ಕಹಳೆ ನ್ಯೂಸ್

ಕಡಬ: ಬೈಕ್ ನಲ್ಲಿ ಬರುತ್ತಿದ್ದ ಅಪ್ರಾಪ್ತ ಬಾಲಕನೋರ್ವ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಮೃತಪಟ್ಟ ಘಟನೆ ಜ.17 ರ ಮುಂಜಾನೆ ಕಡಬದ ಪೇರಡ್ಕದಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಮೃತ ಬಾಲಕ. ಪೇರಡ್ಕದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಬಾಲಕ ಶುಕ್ರವಾರ ಮುಂಜಾನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ಬರುತ್ತಿದ್ದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ಆಂಗ್ಲಮಾಧ್ಯಮ ಶಾಲಾ ಕಛೇರಿ ವಿಕ್ರಮಾದಿತ್ಯದ ಉದ್ಘಾಟನಾ ಸಮಾರಂಭ: ಕಹಳೆ ನ್ಯೂಸ್

ಬಂಟ್ವಾಳ: ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಕಛೇರಿ ವಿಕ್ರಮಾದಿತ್ಯದ ಉದ್ಘಾಟನಾ ಸಮಾರಂಭವು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ  ಎಡನೀರು ಮಠ, ಕಾಸರಗೋಡು ಇವರ ದಿವ್ಯ ಹಸ್ತದಿಂದ ನೆರವೇರಿತು. ಮೊದಲಿಗೆ ಗಣಪತಿ ಹೋಮವು ಶ್ರೀ ಸೂರ್ಯ ನಾರಾಯಣ ಭಟ್ ಕಶೆಕೋಡಿ ಇವರ ನೇತೃತ್ವದಲ್ಲಿ ನಡೆಯಿತು. ಕುಮಾರಿ ಪದ್ಮಶ್ರೀ ಪ್ರಾರ್ಥಿಸಿದರು. ಉದ್ಘಾಟನಾ ಸಮಾರಂಭದ ಆಶೀರ್ವಚನದಲ್ಲಿ ಸ್ವಾಮೀಜಿಯವರು ಯಾವುದೇ ಸಂಸ್ಕಾರ ವಿಲ್ಲದ ವಿದ್ಯೆ ಪರಿಮಳವಿಲ್ಲದ ಪುಷ್ಪದಂತೆ ಹಾಗೂ ರುಚಿ ಇಲ್ಲದ ಹಣ್ಣಿನಂತೆ ಎನ್ನುತ್ತಾ...
1 2 3 643
Page 1 of 643