Sunday, January 19, 2025

ಕಡಬ

ಕಡಬ

ಕಡಬದ ಕೈಕಂಬದಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ಶೌಚಾಲಯದಲ್ಲಿ ಬಂಧಿ-ಕಹಳೆ ನ್ಯೂಸ್

ಕಡಬ : ಕಡಬದ ಕೈಕಂಬದಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಸಾಕು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ನಡೆದಿದೆ. ಈ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದ್ದು, ಸಾಕುನಾಯಿಯು ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮನೆಯ ಹೊರಗಿದ್ದ ಶೌಚಾಲಯವನ್ನು ಹೊಕ್ಕಿದ್ದು, ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿದೆ. ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ...
ಕಡಬ

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೆನ್ನಪ್ಪ ಅವರು ನಾಪತ್ತೆ-ಕಹಳೆ ನ್ಯೂಸ್

ಕಡಬ : ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟನ ಅಂಚೆಯ ತಿಮ್ಮಡ್ಕ್ ಮನೆಯ ನಿವಾಸಿ 75 ವರ್ಷದ ಚೆನ್ನಪ್ಪ ಅವರು ಕಾಣೆಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣಾಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ....
ಕಡಬ

ಕಡುಬಡತನದಲ್ಲಿ ಕಮರಿರುವ ರಾಜೇಶ್ ಕುಟುಂಬಕ್ಕೆ ಆರ್ಥಿಕ ಸಹಾಯ ಬೇಕಾಗಿದೆ-ಕಹಳೆ ನ್ಯೂಸ್

ಬೆಳಂದೂರು: ಕಡಬ ತಾಲೂಕು ಬೆಳಂದೂರು ಗ್ರಾಮದ ಪಟ್ಟೆ ಎಂಬಲ್ಲಿನ ದಿವಂಗತ ಮಾಯಿಲಪ್ಪ ಗೌಡ ಎಂಬವರ ಒಬ್ಬನೇ ಮಗ ರಾಜೇಶ್ (30 ವರ್ಷ) 4 ದಿನಗಳ ಹಿಂದೆ ಬೈಕ್ ಅಪಘಾತದಲ್ಲಿ ಎಡಗಾಲು ಮುರಿದು ಮುಖ ಮತ್ತು ತಲೆಗೆ ಗಂಭೀರ ಗಾಯಗಳಾಗಿ ಮಂಗಳೂರಿನ ಎ ಜೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುಮಾರು 6 ವರ್ಷಗಳಿಂದ ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿರುವ 55 ವರ್ಷದ ತಾಯಿ ಸೀತಮ್ಮ ಚಿಕಿತ್ಸೆಯ ಎಲ್ಲಾ ಖರ್ಚುವೆಚ್ಚಗಳನ್ನು...
ಕಡಬ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡುವ ಮೂಲಕ ಹೆಚ್ಚು ಸ್ಥಾನವನ್ನು ಪಡೆದುಕೊಂಡಿದೆ;ಎ.ಐ.ಸಿ.ಸಿ ಕಾರ್ಯದರ್ಶಿ ಐವನ್ ಡಿಸೋಜಾ-ಕಹಳೆ ನ್ಯೂಸ್

ಕಡಬ: ಎ.ಐ.ಸಿ.ಸಿ ಕಾರ್ಯದರ್ಶಿ ಐವನ್ ಡಿಸೋಜಾ ಅವರು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರುಪಯೋಗ ಮಾಡುವ ಮೂಲಕ ಹೆಚ್ಚು ಸ್ಥಾನವನ್ನು ಪಡೆದುಕೊಂಡಿದೆ ಎಂದು ಆರೋಪಿಸಿದರು. ಹಾಗರಯೇ ರಾಜ್ಯದಲ್ಲಿ ಒಟ್ಟು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸೀಟುಗಳು ಲಭ್ಯವಾಗಿದ್ದು, ಆಡಳಿತಾರೂಢ ಬಿಜೆಪಿಗೆ ಎಚ್ಚರಿಕ್ಕೆ ಗಂಟೆಯಾಗಿದೆ. ದಕ್ಷಿಣ ಕನ್ನಡ ಮತ್ತು ಕೆಲವು ಕಡೆ ಬಿಜೆಪಿಗೆ ಹೆಚ್ಚು ಸೀಟು ಲಭ್ಯವಾಗಿದೆ. ಇದು ವಿರೋಧ ಪಕ್ಷದ ಮೇಲೆ ದಬ್ಬಾಳಿಕೆ ಮಾಡಿ ಅಧಿಕಾರ ದುರುಪಯೋಗದ ಮೂಲಕ ಅಧಿಕಾರ...
ಕಡಬ

ಶಾಲೆಗೆಂದು ತೆರಳಿದ ಹೈಸ್ಕೂಲ್ ವಿದ್ಯಾರ್ಥಿನಿ ಕಡಬದಲ್ಲಿ ನಾಪತ್ತೆ – ಕಹಳೆ ನ್ಯೂಸ್

ಕಡಬ: ಶಾಲೆಗೆಂದು ತೆರಳಿದ ಹೈಸ್ಕೂಲ್ ವಿಧ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಮರ್ದಾಳದಲ್ಲಿ ನಡೆದಿದೆ. ನಾಪತ್ತೆಯಾಗಿರುವ ಬಾಲಕಿ ಐತ್ತೂರು ಗ್ರಾಮದ ಬೆತ್ತೋಡಿ ಸಿ.ಆರ್.ಸಿ ಕಾಲನಿಯ ನಿವಾಸಿ ಜಗದೀಶ ಎಂಬವರ ಪುತ್ರಿ 16 ವರ್ಷದ ನರ್ಮದಾ ಬಿ.ಜೆ ಎಂದು ತಿಳಿದು ಬಂದಿದೆ. ಈಕೆ ಮರ್ದಾಳದ ಹೈಸ್ಕೂಲ್ ವಿಧ್ಯಾರ್ಥಿನಿಯಾಗಿದ್ದು, ಬುಧವಾರ ಶಾಲೆಗೆಂದು ತೆರಳಿದವಳು, ಮನೆಗೆ ಬಾರದ ಕಾರಣ ಅಧ್ಯಾಪಕರಲ್ಲಿ ವಿಚಾರಿಸಿದಾಗ ಶಾಲೆಗೆ ರಜೆ ಇರುವುದಾಗಿ ತಿಳಿಸಿದ್ದಾರೆ. ನಾಪತ್ತೆಯಾಗಿರುವ ಮಗಳನ್ನು ಹುಡುಕಿಕೊಡುವಂತೆ ಬಾಲಕಿಯ ತಂದೆ...
ಕಡಬ

ಕಡಬದ ಇಚ್ಲಂಪಾಡಿ ಗ್ರಾಮದ ಕೊರಮೇರಿನಲ್ಲಿ ಅನಾಥ ಶವ ಪತ್ತೆ- ಕಹಳೆ ನ್ಯೂಸ್

ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ಅನಾಥ ಶವ ನಿನ್ನೆ ಪತ್ತೆಯಾಗಿದೆ. ಸುಮಾರು ೪೫ ರಿಂದ ೫೦ ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ವಾರಸುದಾರರು ಯಾರಾದರೂ ಇದ್ದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವ0ತೆ ಪೊಲೀಸರು ತಿಳಿಸಿದ್ದಾರೆ....
ಕಡಬ

ಕಡಬ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ನಿಧನ-ಕಹಳೆ ನ್ಯೂಸ್

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಕಡಬದ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ಮೃತಪಟ್ಟಿದ್ದಾರೆ. ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ರಂಗದಲ್ಲಿ ಸೇವೆ ಸಲ್ಲಿಸಿದ್ದ ಖಾದರ್ ಸಾಹೇಬ್ ಕಲ್ಲುಗುಡ್ಡೆ ಹಲವು ವರ್ಷಗಳಿಂದ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು ತೀವ್ರ ಅನಾರೋಗ್ಯಕ್ಕೊಳಗಾದ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.  ...
ಕಡಬ

ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮ ನಾಯ್ಕ್ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಒಮಾನ ಅವರಿಂದ ಪತ್ರಿಕಾ ಪ್ರಕಟಣೆ-ಕಹಳೆ ನ್ಯೂಸ್

ಕಡಬ: ಕಡಬ ಪೊಲೀಸ್ ಠಾಣಾಧಿಕಾರಿ ರುಕ್ಮ ನಾಯ್ಕ್ ಹಾಗು ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಒಮಾನ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಡಿಸೆಂಬರ್ 22 ಮತ್ತು 27 ರವರೆಗೆ ಎರಡು ಹಂತಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆ ಪ್ರಯುಕ್ತ ಕಡಬ ಠಾಣಾ ವ್ಯಾಪ್ತಿಯ ಹಾಗು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೋವಿ ಹೊಂದಿರುವ ಕೃಷಿಕರು ತಮ್ಮ ಕೋವಿಗಳನ್ನೂ ಡಿಸೆಂಬರ್ 5ನೇ ತಾರೀಕಿನೊಳಗೆ ಡೆಪಾಸಿಟ್ ಮಾಡುವಂತೆ ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ....
1 12 13 14 15 16
Page 14 of 16