Sunday, January 19, 2025

ಕಾರ್ಕಳ

ಕಾರ್ಕಳಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಸಂಸದ ಕ್ಯಾ. ಚೌಟ ಒತ್ತಾಯ– ಕಹಳೆ ನ್ಯೂಸ್

ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.  ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್,  ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದು, ಇಂತಹ ವಿಕೃತ ಕೃತ್ಯ ಖಂಡನೀಯ. ಈ ದುರುಳರ ಕೃತ್ಯದಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದು, ಕರಾವಳಿಯಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎನ್ನುವುದಕ್ಕೆ  ಈ ಪ್ರಕರಣವೇ ಜ್ವಲಂತ ಸಾಕ್ಷಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.   ಕರಾವಳಿ ಭಾಗದಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದ್ದು, ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದೆ ಹಾಗೂ ಅದರಿಂದ ರಾಷ್ಟ್ರೀಯ ಭದ್ರತೆಗೆ ಆತಂಕ ಸೃಷ್ಟಿಸಿ ಕಾನೂನು ವ್ಯವಸ್ಥೆಯನ್ನು ಬುಡುಮೇಲು ಮಾಡುತ್ತಿರುವ ಬಗ್ಗೆ ಇತ್ತೀಚೆಗೆ ಸಂಸತ್ತಿನಲ್ಲಿಯೂ ಧ್ವನಿಯೆತ್ತಿದ್ದು, ಇದನ್ನು ಮಟ್ಟ ಹಾಕಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸದನದಲ್ಲಿ ಮನವಿ ಮಾಡಿದ್ದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.   ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂದಾಗಿದೆ. ಗೃಹ ಇಲಾಖೆ ಈ ಕೂಡಲೇ ಎಚ್ಚೆತ್ತುಕೊಂಡು ಕಾರ್ಕಳದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಗುರಿಪಡಿಸುವುದಕ್ಕೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ....
ಕಾರ್ಕಳಕ್ರೈಮ್ಸುದ್ದಿ

ಯುವತಿ ಮೇಲೆನ ಅತ್ಯಾಚಾರ ಅಮಾನುಷ, ಖಂಡನೀಯ: ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ- ಕಹಳೆ ನ್ಯೂಸ್

ಕಾರ್ಕಳ; ಶ್ರಮ ಜೀವಿ ಸಮಾಜ ಭೋವಿ ಸಮುದಾಯದ ಬಡ ಯುವತಿಯೋರ್ವಳಿಗೆ ಮತ್ತು ಭರಿಸುವಂತ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ. ಇದೊಂದು ಪೈಶಾಚಿಕ ಕೃತ್ಯ ಎಂದು ಘಟನೆಯನ್ನು ಮಾಜಿ ಸಚಿವ, ಶಾಸಕ ವಿ ಸುನಿಲ್ ಕುಮಾರ್ ಕಟು ಶಬ್ದಗಳಿಂದ ಟೀಕಿಸಿದ್ದಾರೆ. ಯುವತಿಯನ್ನು ಪುಸಲಾಯಿಸಿ ಅಮಲು ಪದಾರ್ಥದೊಂದಿಗೆ ಕಾರಿನಲ್ಲಿ ಸುಮಾರು ದೂರ ಪಳ್ಳಿ ತನಕ ಕರೆದೊಯ್ದು ಅಮಲು ಪದಾರ್ಥ ನೀಡಿ ಈ ಕೃತ್ಯ ನಡೆಸಿದ್ದಾರೆ ಎಂದರೆ...
ಕಾರ್ಕಳಕ್ರೈಮ್ಸುದ್ದಿ

ಕಾರ್ಕಳ : ಯುವತಿ ಅಪಹರಿಸಿ ಗ್ಯಾಂಗ್ ರೇ*ಪ್..? ಪ್ರಕರಣ : ಇಬ್ಬರ ಬಂಧನ – ಕಹಳೆ ನ್ಯೂಸ್

ಕಾರ್ಕಳ : ಹಿಂದೂ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಬೆಳಗ್ಗೆ ಕಾರಿನಲ್ಲಿ ಕರೆದೊಯ್ದು ಬಳಿಕ ಸಂಜೆ ವಾಪಸ್‌ ಕರೆ ತಂದು ಮನೆಯ ಬಳಿ ಬಿಟ್ಟು ಹೋದ ಘಟನೆ ಕಾರ್ಕಳದಲ್ಲಿ ಆ.23ರಂದು ನಡೆದಿದೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಯ್ಯಪ್ಪನಗರ ಸಮೀಪದ ಯುವತಿಯ ಮನೆಯ ಬಳಿಯಿಂದ ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಸಂಜೆ ವೇಳೆಗೆ ಮನೆ ಸಮೀಪ ಯುವತಿಯನ್ನು ಯುವಕ ಕಾರಿನಲ್ಲಿ ತಂದು ಬಿಟ್ಟ...
ಕಾರ್ಕಳಬೈಂದೂರುಸುದ್ದಿ

ವಾರಾಹಿ ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಗುರುರಾಜ್ ಗಂಟಿಹೊಳೆ-ಕಹಳೆ ನ್ಯೂಸ್

ಬೈಂದೂರು: ವಾರಾಹಿ ಯೋಜನೆಗೆ ಸಂಬAಧಿಸಿದAತೆ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಆಗಲಿರುವ ಉಪಯೋಗ ಮತ್ತು ಯೋಜನೆ ಬೈಂದೂರಿನ ಗ್ರಾಮಗಳಿಗೆ ಸಮರ್ಪಕವಾಗಿ ಬಾರದೇ ಇರುವ ಬಗ್ಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಗ್ರಾಮಸ್ಥರ ಸಮ್ಮುಖದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬುಧವಾರ ವಾರಾಹಿ ಕಚೇರಿಯಲ್ಲಿ ನಡೆದ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯಲ್ಲಿ ಬೈಂದೂರು ಕ್ಷೇತ್ರದ ಗ್ರಾಮಗಳಿಗೆ ವಾರಾಹಿ ನೀರುಣಿಸಲು ಇರುವ ಯೋಜನೆಗಳ ಬಗ್ಗೆ ಶಾಸಕರು ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದಾಗ, ಈವರೆಗೂ ಯಾವುದೇ...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಕಾರ್ಕಳ : ಬಸ್ಸಿನಿಂದ ಎಸೆಯಲ್ಪಟ್ಟು ವಿದ್ಯಾರ್ಥಿ ಮೃ*ತ್ಯು.!!-ಕಹಳೆ ನ್ಯೂಸ್

ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಪರಶುರಾಮ ಥೀಮ್ ಪಾರ್ಕ್ ವಿವಾದ ; ನ್ಯಾಯಲಯದ ಅದೇಶ ಇದ್ದರೂ ಪ್ರಕರಣ ದಾಖಲಿಸಿ, ಕಾಮಗಾರಿ ನಡೆಸಲು ಅಡ್ಡಿ ಪಡಿಸುತ್ತಿದ್ದ ಕಾಂಗ್ರೆಸ್ ಸರಕಾರಕ್ಕೆ ಹೈಕೋರ್ಟ್ ಶಾಕ್..!! ಪೋಲೀಸರ ತನಿಖೆಗೆ ತಡೆ – ಕಾಮಗಾರಿ ಪೂರ್ಣಗೊಳಿಸಲು ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಸದ್ದುಮಾಡಿದ್ದ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿವಿಧದಲ್ಲಿ ಮಹತ್ವದ ಘಟನೆ ನಡೆದಿದೆ. ಸದ್ರಿ ಕಾಮಗಾರಿಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುಲು ಶಿಲ್ಪಿ ಹಾಗೂ ನಿರ್ಮಿತಿ ತಂಡಕ್ಕೆ ಮತ್ತು ಜಿಲ್ಲಾಧಿಕಾರಿಗಳಿಗೆ ಈ ಹಿಂದೆಯೇ ನ್ಯಾಯಾಲಯವು ಸೂಚಿಸಿತ್ತು., ಆದೇಶದಂತೆ ಕಾಮಗಾರಿ ನಡೆಸಲು ಮುಂದಾದಾಗ ಸ್ಥಳೀಯ ಮುನಿಯಾಲ್ ಉದಯ ಶೆಟ್ಟಿ ಎಂಬ ಕಾಂಗ್ರೆಸ್ ಪುಡಾರಿಯ ನೇತೃತ್ವದಲ್ಲಿ ಅಡ್ಡಿ ಪಡಿಸುವ ಪ್ರಕ್ರಿಯೆಯ ನಡೆದದ್ದು ಗೊತ್ತೇ, ಇದೆ. ನಂತರ ಇತ್ತಿಚೆಗೆ ಪೋಲಿಸ್ ಇಲಾಖೆಯೂ ಕಾಂಗ್ರೆಸ್...
ಕಾರ್ಕಳಸುದ್ದಿ

ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾದ ವಿವಿದ ಅಭಿವೃದ್ದಿ ಕಾಮಗಾರಿಗಳ ತಡೆ ಹಿಡಿದಿರುವ ಬಾಕಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ – ಕಹಳೆ ನ್ಯೂಸ್

ಕಾರ್ಕಳ : ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯ 2022-23ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡಿ ಬಿಡುಗಡೆ ಮಾಡಿದ್ದ ಸುಮಾರು ರೂ.75.00 ಕೋಟಿಗೂ ಅಧಿಕ ಮೊತ್ತದ ಅನುದಾನವನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದ್ದು, ತಡೆ ಹಿಡಿದಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ...
ಉಡುಪಿಕಾರ್ಕಳಸುದ್ದಿ

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ದಬ್ಬಾಳಿಕೆ ಆರೋಪಿಸಿ ಬಿಜೆಪಿ ಪ್ರತಿಭಟನೆ ; ಉದಯಕುಮಾರ್ ಶೆಟ್ಟಿ ಆಟಾಟೋಪಗಳು, ದ್ವೇಷ ರಾಜಕೀಯ ಮುಂದುವರಿದಲ್ಲಿ ಮನೆಗೆ ಮುತ್ತಿಗೆ ಎಚ್ಚರಿಕೆ, ಬಿಜೆಪಿ ಆಕ್ರೋಶ-ಕಹಳೆ ನ್ಯೂಸ್

ಉಡುಪಿ :ಕಾರ್ಕಳದ ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದು, ಪ್ರಸ್ತುತ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪ್ರತಿಮೆ ನಿರ್ಮಿಸಿದ ಶಿಲ್ಪಿಯ ಬೆಂಗಳೂರು ಮನೆಗೆ ತೆರಳಿ ಕಾಂಗ್ರೆಸ್ ನ ಮುಖಂಡರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಇಂದು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷರಾದ ನವೀನ್ ನಾಯಕ್ ಮಾತನಾಡಿ ಪರಶುರಾಮ...
1 2 3 4 5 6
Page 3 of 6