ಕಾರು ಮತ್ತು ದ್ವಿಚಕ್ರವಾನ ಮುಖಾಮುಖಿ ಡಿಕ್ಕಿ -ಕಹಳೆ ನ್ಯೂಸ್
ಕುಂದಾಪುರ: ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಕಾರು ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತಪಟ್ಟ ದ್ವಿಚಕ್ರ ವಾಹನ ಸವಾರರನ್ನು ರಾಜೀವ ಶೆಟ್ಟಿ (55) ಹಾಗೂ ಸುಧೀರ ದೇವಾಡಿಗ (35) ಎಂದು ಗುರುತಿಸಲಾಗಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಎಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ...