ತೌಕ್ತೆ ಚಂಡಮಾರುತ ಎಫೆಕ್ಟ್ | ಉಡುಪಿ ಜಿಲ್ಲೆಯಾದ್ಯಂತ ಭಾರಿ ಅವಾಂತರ ; ಕೃಷಿಕ ಸಾವು – ಕಹಳೆ ನ್ಯೂಸ್
ಉಡುಪಿ: ಅರಬ್ಬೀ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದಿಂದ ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಭಾರಿ ಮಳೆ ಬಿದ್ದಿದೆ. ಹೀಗಾಗಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಕಾಪು ತಾಲೂಕಿನಲ್ಲಿ ವಿದ್ಯುತ್ ತಂತಿ ಕೆಳಗೆ ಬಿದ್ದು ವಿದ್ಯುತ್ ತಗುಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬ್ರಹ್ಮಾವರ ತಾಲೂಕಿನಲ್ಲಿ 4 ಮನೆಗಳಗೆ, ಬೈಂದೂರು ತಾಲೂಕಿನಲ್ಲಿ 3 ಮನೆಗಳಿಗೆ, 5 ತಾತ್ಕಾಲಿಕ ಶೆಡ್‍ಗಳಿಗೆ ಹಾಗೂ ಉಡುಪಿ ತಾಲೂಕಿನಲ್ಲಿ 1 ಮನೆಗೆ ಭಾಗಶಃ ಹಾನಿಯಾಗಿದೆ. ಜಿಲ್ಲೆಯಾದ್ಯಂತ...