“ಬೈಂದೂರು ಉತ್ಸವ 2024″ರ ಲಾಂಛನ ಬಿಡುಗಡೆ ; ಕ್ರಿಯಾಶೀಲ ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ – ಸಂಸದ ಬಿ.ವೈ.ರಾಘವೇಂದ್ರ -ಕಹಳೆ ನ್ಯೂಸ್
ಬೈಂದೂರು: ಕ್ರಿಯಾಶೀಲ ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಸಾಕ್ಷಿಯಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಅವರು ಸೋಮವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದ ಸಂಸದ ಬಿ.ವೈ.ರಾಘವೇಂದ್ರ, ಬಳಿಕ ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ನವೆಂಬರ್ 1ರಿಂದ 3ರವರೆಗೆ ಬೈಂದೂರಿನ ಗಾಂಧೀ ಮೈದಾನದಲ್ಲಿ ಆಯೋಜಿಸಿರುವ ಬೈಂದೂರು...