ಕೋಟೆಕಾರು ಬ್ಯಾಂಕ್ ದರೋಡೆಯಿಂದ ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯದ ಕಾನೂನು-ಸುವ್ಯವಸ್ಥೆಯ ಸತ್ಯ ದರ್ಶನ: ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್
ಮಂಗಳೂರು: ಸಿಎಂ ಸಿದ್ದರಾಮಯ್ಯನವರು ಮಂಗಳೂರಿನಲ್ಲಿರುವಾಗಲೇ ಹಾಡಹಗಲೇ ದುಷ್ಕರ್ಮಿಗಳು ಬ್ಯಾಂಕ್ ದರೋಡೆ ನಡೆಸುವ ಮೂಲಕ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಎಷ್ಟಮಟ್ಟಿಗೆ ಹದಗೆಟ್ಟು ಹೋಗಿದೆ ಎಂಬುದರ ಸತ್ಯ ದರ್ಶನದ ಅರಿವು ಕಾಂಗ್ರೆಸ್ ಸರ್ಕಾರಕ್ಕೆ ಆಗಿದ್ದು, ಇದೊಂದು ಅತ್ಯಂತ ಆತಂಕ ಹಾಗೂ ನಾಚಿಕೆ ಗೇಡಿನ ವಿಚಾರ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ಗೆ ದುಷ್ಕರ್ಮಿಗಳ ಗ್ಯಾಂಗ್ ಹಾಡಹಗಲೇ ನುಗ್ಗಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ಹಣ...