Saturday, November 23, 2024

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಹಳೆಯಂಗಡಿಯಲ್ಲಿ ನಡೆದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣೆ ಸಮಿತಿ , ಶಿಕ್ಷಕರ ಕಲ್ಯಾಣ ನಿಧಿ ಇದರ ಸಂಯುಕ್ತ ಆಶ್ರಯದಲ್ಲಿ ಹಳೆಯಂಗಡಿಯಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ, ಮುಲ್ಕಿ ಮೂಡಬಿದ್ರೆ ಕ್ಷೇತ್ರದ...
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆನರಾ ಶಿಕ್ಷಣ ಸಂಸ್ಥೆಗಳು-ಕೆನರಾ ಸ್ಪೋರ್ಟ್ಸ್ ಅಕಾಡೆಮಿ ಉದ್ಘಾಟನೆ – ಕಹಳೆ ನ್ಯೂಸ್

ಮಂಗಳೂರು : ವಿದ್ಯಾರ್ಥಿ ಸಮುದಾಯದಲ್ಲಿ ಕ್ರೀಡೆಯ ಆಸಕ್ತಿಯನ್ನು ಬೆಳೆಸಿ ಉತ್ತೇಜನ ನೀಡುವ ಮಹತ್ವಕಾಂಕ್ಷೆಯ ನಿರ್ಧಾರವನ್ನು ಕೆನರಾ ಶಿಕ್ಷಣ ಸಂಸ್ಥೆ ಮಾಡಿರುವುದು ಅತ್ಯಂತ ಶ್ಲಾಘನೀಯ. ತಾನು ಕೂಡ ಈ ಶಿಕ್ಷಣ ಸಂಸ್ಥೆಯಲ್ಲಿ ತನ್ನ ಹೈಸ್ಕೂಲ್ ಜೀವನವನ್ನು ಕಳೆದಿದ್ದೇನೆ ಎಂಬುದು ಹೆಮ್ಮೆಯ ಸಂಗತಿ.ಇಂದು ಕ್ರೀಡೆಗೆ ಅತ್ಯಂತ ಹೆಚ್ಚಿನ ಮಹತ್ವ ಇದ್ದು ಕಠಿಣ ಪರಿಶ್ರಮ ಮತ್ತು ಇಚ್ಛಾಶಕ್ತಿಯಿಂದ ಅತ್ಯುನ್ನತ ಸ್ಥಾನವನ್ನು ಈ ಕ್ಷೇತ್ರದಲ್ಲಿ ಗಳಿಸಬಹುದು ಎಂದು ಭಾರತದ ಅತ್ಯುತ್ತಮ ಕ್ರೀಡಾಪಟು ಎಂ ಆರ್ ಪೂವಮ್ಮ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೇಂದ್ರ ಸರ್ಕಾರದಿಂದ ದ.ಕ. ಪ್ರಮುಖ ರಸ್ತೆಗಳ ಅಭಿವೃದ್ದಿಗೆ 42 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾ.ಚೌಟ ಅವರು, ಕೇಂದ್ರ ಸರ್ಕಾರವು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿ ಈ ಅನುದಾನ ನೀಡಿದ್ದು, ಜಿಲ್ಲಾ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಚೆಕ್ ಬೌನ್ಸ್ ಪ್ರಕರಣ : ಕಿರುತೆರೆ ನಟಿ ಪದ್ಮಜಾ ರಾವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದ ಮಂಗಳೂರು ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು, ಆ.27 : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ಕೈ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ...
ಮಂಗಳೂರುಸುದ್ದಿ

ಪಿಎಂ ಸೂರ್ಯಘರ್ ಯೋಜನೆ ಕುಟುಂಬಗಳನ್ನು ವಿದ್ಯುತ್ ಬಳಕೆ ಹಾಗೂ ಆರ್ಥಿಕವಾಗಿ ಸ್ವಾವಲಂಬಿಯಾಗಿಸುತ್ತದೆ: ಸಂಸದ ಕ್ಯಾ.ಚೌಟ- ಕಹಳೆ ನ್ಯೂಸ್

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ‘ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ‘(ಪಿಎಂ ಸೂರ್ಯ ಗೃಹ - ಉಚಿತ ವಿದ್ಯುತ್) ಯೋಜನೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಂಡಿದ್ದು, ಈ ಯೋಜನೆಯ ಫಲಾನುಭವಿಗೆ ಮಂಗಳೂರಿನಲ್ಲಿ ಇಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಬ್ಸಿಡಿ ಪತ್ರವನ್ನು ವಿತರಿಸಿದರು. 'ಇನರ್ಜಿಯ ಸೋಲಾರ್ ಕಂಪನಿ'ಯ ಸಹಯೋಗದಲ್ಲಿ ಅನುಷ್ಟಾನಗೊಂಡಿರುವ 'ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ' ಯೋಜನೆಯ 100ನೇ ಫಲಾನುಭವಿಯಾದ...
ದಕ್ಷಿಣ ಕನ್ನಡಮಂಗಳೂರು

ಕೆನರಾ ನಂದಗೋಕುಲ್ ಕೊಡಿಯಾಲ್ ಬೈಲ್, ಪದವಿನಂಗಡಿ ಹಾಗೂ ಕೆನರಾ ಇಂಟರ್ನ್ಯಾಷನಲ್ ಶಾಲೆ ಆಶ್ರಯದಲ್ಲಿ ಅಷ್ಟಮಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ಇಂದು ಕೆನರಾ ನಂದಗೋಕುಲ್ ಕೊಡಿಯಾಲ್ ಬೈಲ್ ಮತ್ತು ಪದವಿನಂಗಡಿ ಶಾಖೆ ಹಾಗೂ ಕೆನರಾ ಇಂಟರ್ನ್ಯಾಷನಲ್ ಶಾಲೆಯ ಆಶ್ರಯದಲ್ಲಿ ಶ್ರೀ ಸುಧೀಂದ್ರ ಸಭಾಂಗಣದಲ್ಲಿ ಅಷ್ಟಮಿ ಉತ್ಸವದ ಶುಭಕಾಮನೆಯೊಂದಿಗೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯು ಮನಮುಟ್ಟಿದ ಭಜನೆಯೊಂದಿಗೆ ಪ್ರಾರಂಭಗೊಂಡು, ಮಕ್ಕಳು ಮುದ್ದು ಕೃಷ್ಣ ಮತ್ತು ರಾಧೆಯ ವೇಷದಲ್ಲಿ ಕಣ್ಮನಸಿಗೆ ಹತ್ತಿದ ನೃತ್ಯ ಪ್ರದರ್ಶಿಸಿದರು. ಇದಕ್ಕೆ ಹೆಚ್ಚಾಗಿ ಮಕ್ಕಳಿಂದ ಕೃಷ್ಣನ ಹಾಡುಗಳ ಮೇಲೆ ನೃತ್ಯ ಪ್ರದರ್ಶನ ನಡೆಯಿತು. ನಂತರ, ಕೃಷ್ಣ ಕಥೆಯ...
ಕಾರ್ಕಳಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಸಂಸದ ಕ್ಯಾ. ಚೌಟ ಒತ್ತಾಯ– ಕಹಳೆ ನ್ಯೂಸ್

ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.  ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್,  ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದು, ಇಂತಹ ವಿಕೃತ ಕೃತ್ಯ ಖಂಡನೀಯ. ಈ ದುರುಳರ ಕೃತ್ಯದಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದು, ಕರಾವಳಿಯಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎನ್ನುವುದಕ್ಕೆ  ಈ ಪ್ರಕರಣವೇ ಜ್ವಲಂತ ಸಾಕ್ಷಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.   ಕರಾವಳಿ ಭಾಗದಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದ್ದು, ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದೆ ಹಾಗೂ ಅದರಿಂದ ರಾಷ್ಟ್ರೀಯ ಭದ್ರತೆಗೆ ಆತಂಕ ಸೃಷ್ಟಿಸಿ ಕಾನೂನು ವ್ಯವಸ್ಥೆಯನ್ನು ಬುಡುಮೇಲು ಮಾಡುತ್ತಿರುವ ಬಗ್ಗೆ ಇತ್ತೀಚೆಗೆ ಸಂಸತ್ತಿನಲ್ಲಿಯೂ ಧ್ವನಿಯೆತ್ತಿದ್ದು, ಇದನ್ನು ಮಟ್ಟ ಹಾಕಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸದನದಲ್ಲಿ ಮನವಿ ಮಾಡಿದ್ದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.   ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂದಾಗಿದೆ. ಗೃಹ ಇಲಾಖೆ ಈ ಕೂಡಲೇ ಎಚ್ಚೆತ್ತುಕೊಂಡು ಕಾರ್ಕಳದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಗುರಿಪಡಿಸುವುದಕ್ಕೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಫಿಜ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ಭಾರತದ ಮೊಟ್ಟಮೊದಲ ಬಾಹ್ಯಾಕಾಶ ದಿನದ ಆಚರಣೆ- ಕಹಳೆ ನ್ಯೂಸ್ 

ಮಂಗಳೂರಿನ ಪ್ರತಿಷ್ಠಿತ ಫಿಜ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ತಾರೀಕು 23 ಆಗಸ್ಟ್ 2024 ರಂದು ಭಾರತದ ಮೊಟ್ಟ ಮೊದಲ "ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ" (Maiden National Space Day) ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಆಸ್ಟ್ರೋ ಕಿಡ್ಸ್ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಅಗಸ್ಟ್ 25ರವರೆಗೆ ನಡೆಸಲಾಗುವುದು. "ಆಸ್ಟ್ರೋ ಕಿಡ್ಸ್ ಎಂಬುದು ವಿಶೇಷವಾದ ಪ್ರದರ್ಶನ. ನಮ್ಮ ರಾಷ್ಟ್ರದ ಇಸ್ರೋ ತಯಾರಿಸಿದ , ಗಗನಕ್ಕೆ ಕಳಿಸಿಕೊಟ್ಟ ಬಾಹ್ಯಾಕಾಶ ರಾಕೆಟ್ ಗಳನ್ನು ಮತ್ತು ಸೆಟಲೈಟ್...
1 13 14 15 16 17 41
Page 15 of 41