ಮಂಗಳೂರಿನಲ್ಲಿ ಎ.14ರಂದು ನರೇಂದ್ರ ಮೋದಿ ರೋಡ್ ಶೋ ; ಯಾವ ರಸ್ತೆಯಲ್ಲಿ ರೋಡ್ ಶೋ.!? – ಕಹಳೆ ನ್ಯೂಸ್
ಮಂಗಳೂರು, ಏ 11 : ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು....