58ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ಹಲವು ದಶಕಗಳ ಬೇಡಿಕೆಯಾಗಿದ್ದ ಕೊಂಗೂರಿಗೆ ರಸ್ತೆ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್
ಮಂಗಳೂರು : ಪದವು ಸೆಂಟ್ರಲ್ ವಾರ್ಡಿನ ಹಲವು ದಶಕಗಳ ಪ್ರಮುಖ ಬೇಡಿಕೆಯಾಗಿದ್ದ ಕೊಂಗೂರಿನಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು 58ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಕಳೆದ 65 ವರ್ಷಗಳಿಂದ ಇಲ್ಲಿನ ಸ್ಥಳೀಯರು ರಸ್ತೆಯಿಲ್ಲದೇ ಅನುಭವಿಸುತ್ತಿದ್ದ ತೊಂದರೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯ ಕಿಶೋರ್ ಕೊಟ್ಟಾರಿಯವರು ನಮ್ಮ ಗಮನಕ್ಕೆ ತಂದಿದ್ದರು. ಆದರೆ ಮುಖ್ಯವಾಗಿ ಈ ಪ್ರದೇಶವು ರೈಲ್ವೆ ಇಲಾಖೆಯ ವ್ಯಾಪ್ತಿಗೆ...