ಮಂಗಳೂರು : ವಿಶ್ವವಿದ್ಯಾನಿಲಯದ ಆರ್ಥಿಕ ಶ್ವೇತಪತ್ರ ಬಿಡುಗಡೆಗೆ ಹರೀಶ್ ಆಚಾರ್ಯ ಆಗ್ರಹ-ಕಹಳೆ ನ್ಯೂಸ್
ಮಂಗಳೂರು ವಿಶ್ವವಿದ್ಯಾನಿಲಯವು ಹಲವಾರು ತಿಂಗಳುಗಳಿಂದ ತೀವ್ರ ಆರ್ಥಿಕ ಅಡಚಣೆಯಿಂದ ಸುದ್ದಿಯಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ವೇತನವಿಲ್ಲದೆ ಪರದಾಡುತಿದ್ದಾರೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಭವಿಷ್ಯನಿಧಿ ಖಾತೆಗಳಿಗೆ ಬಾಕಿಯಿರುವ ಮೊಬಲಗನ್ನೂ ಹೊಂದಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ವಿಶ್ವವಿದ್ಯಾನಿಲಯ ಇದೆ. ಸಾರ್ವಜನಿಕ ವಲಯದಲ್ಲಿ ವಿಶ್ವವಿದ್ಯಾನಿಲಯದ ಹಣಕಾಸು ನಿರ್ವಹಣೆ ಹಾಗೂ ಆರ್ಥಿಕ ಶಿಥಿಲತೆಯ ಬಗ್ಗೆ ಗಂಭೀರವಾದ ಪ್ರಶ್ನೆಗಳು ಮೂಡಿದೆ. ಈ ಸಂದೇಹಗಳು ನಿವಾರಣೆಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯವು ತನ್ನ ಆರ್ಥಿಕ...