ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ -ಕಹಳೆ ನ್ಯೂಸ್
ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ ಬಿಜೆಪಿ ಹಿರಿಯ ಮುಖಂಡ ಮತ್ತೂರಿನ ಎಂ.ಬಿ.ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ತೆರಳುತ್ತಿದ್ದ ವೇಳೆ ಭಾನುಪ್ರಕಾಶ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. 2009 ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಅವರು, 2013-19...