ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ – ಕಹಳೆ ನ್ಯೂಸ್
ಮಂಗಳೂರು : ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ...