Sunday, January 19, 2025

ಮಡಿಕೇರಿ

ಕೊಡಗುಮಡಿಕೇರಿಸುದ್ದಿ

ಮಡಿಕೇರಿ-ಮಂಗಳೂರು ರಸ್ತೆ ಬದಿಯಲ್ಲಿ ಭೂಕುಸಿತ ; ಆರು ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ | ಆತಂಕ, ಕತ್ತಲೆಯಲ್ಲಿ ಕೊಡಗು..! – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾಗಮಂಡಲ, ನಾಪೋಕ್ಲು, ಮಡಿಕೇರಿ, ಸುಂಟಿಕೊಪ್ಪ ಮತ್ತು ಸೋಮವಾರಪೇಟೆ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಕತ್ತಲೆಯಲ್ಲಿ ಕೊಡಗು: ಸ್ಥಳಕ್ಕೆ ಮಡಿಕೇರಿ ತಹಶೀಲ್ದಾರ್ ಮಹೇಶ್ ಭೇಟಿ...
ಕೊಡಗುದಕ್ಷಿಣ ಕನ್ನಡಮಡಿಕೇರಿಸುದ್ದಿ

ಮತ್ತೆ ಅಪಾಯದಲ್ಲಿದೆ ಮಡಿಕೇರಿ – ಮಂಗಳೂರು ಹೈವೇ ; ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ – ಕಹಳೆ ನ್ಯೂಸ್

ಮಡಿಕೇರಿ: ಮೈಸೂರು – ಬಂಟ್ವಾಳ ರಾಷ್ಟ್ರೀಯ ರಸ್ತೆ ಮಾರ್ಗದಲ್ಲಿ ಮತ್ತೆ ಕುಸಿತ ಸಂಭವಿಸಿದೆ. ಜೋಡುಪಾಲ ಸಮೀಪ ಇರುವ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಕಂಡುಬಂದಿದ್ದು, ಇದು ಇನ್ನಷ್ಟು ಅಪಾಯಕಾರಿಯಾಗುವ ಸಂಭವ ಇದೆ. ಇತ್ತೀಚೆಗೆ ಸುರಿದ ಮಳೆಯ ಪರಿಣಾಮದಿಂದ ಕೆಳ ಭಾಗದಿಂದ ರಸ್ತೆ ಕುಸಿತಕ್ಕೆ ಒಳಗಾಗುತ್ತಿದೆ. ನಿರಂತರವಾಗಿ ಭಾರೀ ವಾಹನಗಳು ಸಂಚಾರ ಮುಂದುವರಿಸಿದಲ್ಲಿ ಹಾಗೂ ಮತ್ತೆ ಮಳೆ ಬಂದಲ್ಲಿ ಈ ರಸ್ತೆ ಸಂಪೂರ್ಣ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆಯಿದೆ. ಈ ಹಿಂದೆ ಮಳೆಗಾಲದ...
ಮಡಿಕೇರಿ

ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ- ಕಹಳೆನ್ಯೂಸ್

ಮಡಿಕೇರಿ : ಇತ್ತೀಚೆಗೆ ಸುರಿದ ಮಳೆಯ ಪರಿಣಾಮ ಮಡಿಕೇರಿ-ಮಂಗಳೂರು ರಸ್ತೆ ಮಾರ್ಗದಲ್ಲಿ ಬರುವ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಕಂಡುಬಂದಿದ್ದು, ಇನ್ನಷ್ಟು ಅಪಾಯಕಾರಿಯಾಗುವ ಸಾಧ್ಯತೆ ಇದೆ. ಕೆಳ ಭಾಗದಿಂದ ರಸ್ತೆ ಕುಸಿತಕ್ಕೆ ಒಳಗಾಗುತ್ತಿದ್ದು ನಿರಂತರವಾಗಿ ಭಾರೀ ವಾಹನಗಳ ಸಂಚಾರ ಹಾಗೂ ಮತ್ತೆ ಮಳೆ ಬಂದಲ್ಲಿ ಈ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ರಸ್ತೆ ಅಪಾಯಕಾರಿ ಪರಿಸ್ಥಿತಿಗೆ ಬಂದಿರುವುದನ್ನು ಗಮನಿಸಿದ ಸಾರ್ವಜನಿಕರಾದ ನಂದ ಮತ್ತಿತರರು...
ಮಡಿಕೇರಿ

ಹಾರಂಗಿ ಹಿನ್ನೀರಿನಲ್ಲಿ ಸ್ನಾನಕ್ಕಿಳಿದ ಮೊಮ್ಮಗ ಮುಳುಗಿ ಮೃತ್ಯು ; ಮೊಮ್ಮಗನ ಮೃತದೇಹ ಕಂಡು ಅಜ್ಜಿ ಹೃದಯಾಘಾತದಿಂದ ಸಾವು-ಕಹಳೆ ನ್ಯೂಸ್

ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಹೊಸತೋಟದಲ್ಲಿ ಹಾರಂಗಿ ಹಿನ್ನೀರಿನಲ್ಲಿ ಸ್ನಾನಕ್ಕಿಳಿದು ಮೃತಪಟ್ಟ ಮೊಮ್ಮಗನ ಮೃತದೇಹ ಕಂಡು ಅಜ್ಜಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ರಮ್ಲಾನ್ ಎಂಬವವರ ಪುತ್ರ 18 ವರ್ಷದ ಮುಬಾಶೀರ್ ಗುರುವಾರ ಬೆಳಗ್ಗೆ ಸ್ನಾನ ಮಾಡಲೆಂದು ಹಾರಂಗಿ ಹಿನ್ನೀರಿಗೆ ಇಳಿದಿದ್ದು, ಬಳಿಕ ಕಾಣೆಯಾಗಿದ್ದ. ಆತನ ಮೃತದೇಹ ಶುಕ್ರವಾರ ಬೆಳಗ್ಗೆ ಹಾರಂಗಿ ಹಿನ್ನೀರಿನಲ್ಲಿ ದೊರೆತಿದೆ. ಈ ವೇಳೆ ಮೊಮ್ಮಗನ ಮೃತದೇಹ ಕಂಡು ಆತನ ಅಜ್ಜಿ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ....
ಮಡಿಕೇರಿ

ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಮತ್ತು ನಾವಿಕ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಣೆ-ಕಹಳೆ ನ್ಯೂಸ್

ಮಡಿಕೇರಿ : ಸಮಾಜದಲ್ಲಿ ಸಹಾಯದ ನಿರೀಕ್ಷೆಯಲ್ಲಿರುವ ವರ್ಗವಿರುವಂತೆ ಸಹಾಯದ ಹಸ್ತ ಚಾಚಲು ಸಿದ್ಧವಾಗಿರುವ ವರ್ಗವೂ ಇರುತ್ತದೆ. ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯದಲ್ಲಿ ನಿರಂತರವಾಗಿ ತೊಡಗುತ್ತಿದ್ದು ವಿದ್ಯಾರ್ಥಿಗಳು ಇದರ ಸಹಾಯವನ್ನು ಪಡೆದುಕೊಂಡು ಪ್ರಗತಿ ಸಾಧಿಸಬೇಕೆಂದು ರೋಟರಿ ಸಂಸ್ಥೆಯ ಅಧ್ಯಕ್ಷ ಪಿ.ಟಿ.ಗಣಪತಿ ಕರೆ ನೀಡಿದರು. ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಮತ್ತು ನಾವಿಕ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು. ನಾವಿಕ...
ಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಚಿನ್ನಾಭರಣ ಪ್ರೀಯರಿಗೆ ಗುಡ್ ನ್ಯೂಸ್ ; ಅಗಸ್ಟ್ 17 ರಿಂದ 20ರವರೆಗೆ ಮುಳಿಯ ಜುವೆಲ್ಸ್ ನಲ್ಲಿ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಕೋರ್ಟು ರಸ್ತೆಯಲ್ಲಿರುವ, ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ದಿನಾಂಕ 17 ಅಗಸ್ಟ್‍ನಿಂದ 20ರವರೆಗೆ ಚಿನ್ನಾಭರಣಗಳ ಉಚಿತ ಸೇವಾ ಶಿಬಿರ ನಡೆಯಲಿರುವುದು. ನುರಿತ ಕುಶಲ ಕರ್ಮಿಗಳಿಂದ ತುಂಡಾದ ಆಭರಣಗಳ ಜೋಡಣೆ ಹಾಗೂ ವ್ಯವಸ್ಥಿತ ರೀತಿಯ ರಿಪೇರಿ ಹಾಗೂ ಹಳೆಯ ಆಭರಣಗಳನ್ನು ಉಚಿತವಾಗಿ ತೊಳೆದು ಪಾಲಿಶ್ ಮಾಡಿ ಕೊಡಲಾಗುವುದು, ಮತ್ತು ನಿಮ್ಮ ಅಮೂಲ್ಯ ಆಭರಣಗಳ ಸಂರಕ್ಷಣೆ ಬಗ್ಗೆ ಉಚಿತ ಸಲಹೆ ಮತ್ತು ಮಾಹಿತಿ ನೀಡಲಾಗುವುದು. ಈ ಸೇವೆಯೂ...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನಲ್ಲಿ ಧಾರಾಕಾರ ಮಳೆ ; ಇದೂವರೆಗೆ 52 ಪ್ರದೇಶಗಳಲ್ಲಿ ಪ್ರವಾಹ – 14 ಪ್ರದೇಶದಲ್ಲಿ ಭೂಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇದೂವರೆಗೆ ಜಿಲ್ಲೆಯ 52 ಪ್ರದೇಶಗಳಲ್ಲಿ ಪ್ರವಾಹ, 14 ಪ್ರದೇಶಗಳಲ್ಲಿ ಭೂಕುಸಿತವಾಗಿದೆ. 591 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 9 ಪರಿಹಾರ ಕೇಂದ್ರಗಳಿಗೆ 591 ಜನರ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಭೂಕುಸಿತದಿಂದಾಗಿ 8 ಕಡೆ ರಸ್ತೆ ಸಂಚಾರ ಕಡಿತಗೊಂಡಿದೆ ಎಂದು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ವಿರಾಜಪೇಟೆ ತಾಲೂಕಿನಲ್ಲಿರುವ ಅರಮೇರಿ ಕಳಂಚೇರಿ ಮಠ ಕಳೆದ ಬಾರಿಯೂ ಪ್ರವಾಹದಲ್ಲಿ ಮುಳುಗಿತ್ತು. ಸದ್ಯ ಜಿಲ್ಲೆಯಲ್ಲಿ...
ಮಡಿಕೇರಿ

ತಲಕಾವೇರಿಯಲ್ಲಿ ಭಾರಿ ಭೂಕುಸಿತ : ಪ್ರಧಾನ ಅರ್ಚಕರ ಕುಟುಂಬವೇ ನಾಪತ್ತೆ-ಕಹಳೆ ನ್ಯೂಸ್

ಮಡಿಕೇರಿ: ಮಡಿಕೇರಿಯಲ್ಲಿ ಕಳೆದ ಹಲವು ದಿನಗಳಿಂದಾ ಭಾರಿ ಮಳೆಯಾಗುತ್ತಿದ್ದು, ಕಳೆದ ಬಾರಿಯಂತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದೀಗ ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್, ಅವರ ಪತ್ನಿ, ಆನಂದತೀಥ೯ ಮತ್ತು ಇಬ್ಬರು ಅಚ೯ಕರು ನಾಪತ್ತೆಯಾಗಿದ್ದಾರೆ. ತಲಕಾವೇರಿ ಪುಣ್ಯ ಕ್ಷೇತ್ರ ಬಳಿಯಲ್ಲಿ ಭೂಕುಸಿತದಿಂದಾಗಿ ಎರಡು ಮನೆಗಳು ಸಂಪೂಣ೯ ಮಣ್ಣುಪಾಲಾಗಿವೆ, ಮಣ್ಣಿನಡಿ ಸಿಲುಕಿರುವವರ ರಕ್ಷಣೆಗೆ ಸ್ಥಳೀಯರೊಂದಿಗೆ ವಿಪತ್ತು ನಿರ್ವಹಣಾ ಪಡೆ ಕೂಡ...
1 5 6 7
Page 7 of 7