Saturday, November 23, 2024

ಕಡಬ

ಕಡಬದಕ್ಷಿಣ ಕನ್ನಡಸುದ್ದಿ

ಸುಬ್ರಹ್ಮಣ್ಯ: ಬಿಳಿನೆಲೆಯ ಮಹಿಳೆಯೋರ್ವರು ಬಸ್ಸಿನಿಂದ ಕೆಳಕ್ಕೆ ಬಿದ್ದು ಗಾಯ- ಕಹಳೆ ನ್ಯೂಸ್

ಕಡಬ: ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಚಾಲಕ ಬಸ್ಸು ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಕೆಳಕ್ಕೆ ಬಿದ್ದು ಗಾಯಗೊಂಡಿರುವ ಘಟನೆ ಸುಬ್ರಹ್ಮಣ್ಯ ಗ್ರಾಮದ ಬಿಲದ್ವಾರದ ಬಳಿ ನಡೆದಿದೆ. ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹೂವಪ್ಪ ಗೌಡರವರ ಪತ್ನಿ ವಸಂತಿ ಎಂ.(42ವ.)ಗಾಯಗೊAಡವರು. ಇವರು ತನ್ನ ಮಗಳೊಂದಿಗೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ (ಕೆಎ 19 ಎಫ್ 3247) ಪ್ರಯಾಣಿಸುತ್ತಿದ್ದವರು ಸುಬ್ರಹ್ಮಣ್ಯ ಬಿಲದ್ವಾರದ ಬಳಿ ಬಸ್ಸಿನ ನಿರ್ವಾಹಕ ಅಡಿವೆಪ್ಪ ಪಟಾಣಿರವರಲ್ಲಿ ತಿಳಿಸಿ ಇಳಿಯುತ್ತಿದ್ದಾಗ ನಿರ್ವಾಹಕ ಗಮನಿಸದೇ ಬಸ್ ಚಲಾಯಿಸಲು...
ಕಡಬದಕ್ಷಿಣ ಕನ್ನಡಸುದ್ದಿಸುಳ್ಯ

ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಯನ್ನು ಬೆನ್ನಟ್ಟಿ ತಿವಿದ ಕಾಡು ಹಂದಿ -ಕಹಳೆ ನ್ಯೂಸ್

ಕಡಬ: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಗೆ ಕಾಡುಹಂದಿ ತಿವಿದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಇಂದು ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಧಾಳಿ ನಡೆಸಿತೆನ್ನಲಾಗಿದೆ...
ಕಡಬಸುದ್ದಿ

ಕಡಬ: ಕುಡಿದ ಅಮಲಿನಲ್ಲಿ ಅವಾಂತರ ಸೃಷ್ಟಿಸಿದ ವಿಎ : ಕೆಎಸ್ ಆರ್ ಟಿಸಿ ಬಸ್ ಸೀಟ್ ಅಡಿಯಲ್ಲಿ ಸಕತ್ ನಿದ್ರೆ – ಕಹಳೆ ನ್ಯೂಸ್

ಕಡಬ: ಕುಡಿತದ ಚಟಕ್ಕಾಗಿ ಹಲವು ಬಾರಿ ಹಿರಿಯ ಅಧಿಕಾರಿಗಳಿಂದ ಛೀಮಾರಿ ಹಾಕಿಸಿಕೊಂಡಿದ್ದ ವಿಎ ಫೆ.20ರಂದು ಮತ್ತೆ ಕುಡಿದು ಅವಾಂತರ ಮಾಡಿರುವ ಘಟನೆ ಕಡಬದಲ್ಲಿ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿಎ ಕುಡಿದ ಅಮಲಿನಲ್ಲಿ ಬಸ್ ನಲ್ಲಿ ಬಿದ್ದುಕೊಂಡಿದ್ದಾನೆ. ಇದೆಲ್ಲಾ ನಡೆದದ್ದು, ಸುಬ್ರಹ್ಮಣ್ಯ- ಕಡಬ ಬಸ್ ನಲ್ಲಿ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ವಿಎ ನಾಗಸುಂದರ ಕುಡಿದು ಬಸ್ ಸೀಟ್ ಅಡಿಯಲ್ಲಿ ಮಲಗಿ...
ಕಡಬದಕ್ಷಿಣ ಕನ್ನಡಸುದ್ದಿ

ಸರಕಾರಿ ಜಮೀನಿನಲ್ಲಿರುವ ಗುಡಿಸಲು ತೆರವಿಗೆ ಆದೇಶ ; ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ ಕೌಕ್ರಾಡಿ ಗ್ರಾಮದ ವೃದ್ಧ ದಂಪತಿ! – ಕಹಳೆ ನ್ಯೂಸ್

ಕಡಬ: ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ನ್ಯಾಯಾಲಯದಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಕೌಕ್ರಾಡಿಯ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ! ರಾಧಮ್ಮ-ಮುತ್ತುಸ್ವಾಮಿ ದಂಪತಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸರಕಾರಿ ಜಾಗದಲ್ಲಿ 6 ವರ್ಷಗಳಿಂದ ವಾಸವಾಗಿದ್ದಾರೆ. ಚಿತ್ರದುರ್ಗದಲ್ಲಿ ಹುಟ್ಟಿ ಬೆಳೆದಿರುವ ಅವರು 6 ವರ್ಷಗಳ ಹಿಂದೆ ಕೆಲಸಕ್ಕಾಗಿ ಆಗಮಿಸಿ, ಕೌಕ್ರಾಡಿಯಲ್ಲೇ ಕೂಲಿ ಕೆಲಸ ಮಾಡುತ್ತಾ ನೆಲೆಸಿ ತಮ್ಮದೇ ಮನೆ ಬೇಕೆಂಬ ಕನಸು ಕಂಡು ತಾವು ಕೂಡಿಟ್ಟ...
ಕಡಬದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿ

ನೆಲ್ಯಾಡಿ, ಕಡಬ, ಉಪ್ಪಿನಂಗಡಿಯಲ್ಲಿ ನಕಲಿ ಚಿನ್ನವಿಟ್ಟು ಸಾಲಪಡೆದ ತಂಡ ಸಹಕಾರಿ ಸಂಘಗಳಿಗೆ ಲಕ್ಷಗಟ್ಟಲೆ ವಂಚನೆ – ಕಹಳೆ ನ್ಯೂಸ್

ಕಡಬ/ನೆಲ್ಯಾಡಿ/ಉಪ್ಪಿನಂಗಡಿ: ನೆಲ್ಯಾಡಿಯಲ್ಲಿರುವ ಸಹಕಾರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಸಾಲ ಪಡೆದ ತಂಡವು ಅದೇ ರೀತಿಯಲ್ಲಿ ಉಪ್ಪಿನಂಗಡಿಯ ಸಹಕಾರಿ ಸಂಘ,ಅಲಂಕಾರು ಸಹಕಾರಿ ಸಂಘಗಳಲ್ಲೂ ನಕಲಿ ಚಿನ್ನ ಅಡವಿಟ್ಟು ಲಕ್ಷಗಟ್ಟಲೆ ಹಣ ದೋಚಿದ ಪ್ರಕರಣ ಬೆಳಕಿಗೆ ಬಂದಿದೆ. ಮೊದಲು ಇದೇ ಆರೋಪಿಗಳು ಜ. 27 ರಂದು ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಸಂಘದಲ್ಲಿ ಅಡಮಾನವಿರಿಸಿ, 1.40 ಲಕ್ಷ ರೂ.ವನ್ನು ಸಾಲವಾಗಿ...
ಆರೋಗ್ಯಕಡಬದಕ್ಷಿಣ ಕನ್ನಡಸುದ್ದಿ

ಡೆಂಗ್ಯೂ ಜ್ವರಕ್ಕೆ ಯುವಕ ಬಲಿ- ಕಹಳೆ ನ್ಯೂಸ್

ಕಡಬ: ಏಕಕಾಲಕ್ಕೆ ಡೆಂಗ್ಯೂ ಮತ್ತು ಮಲೇರಿಯಾ ಜ್ವರ ಬಾಧಿಸಿ ಯುವಕನೋರ್ವ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕು ಕುಟ್ರುಪಾಡಿ ಗ್ರಾಮದ ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಮೃತಪಟ್ಟ ಯುವಕ. ಜ್ವರ ಕಾಣಿಸಿಕೊಂಡ ಕಾರಣ ಕಡಬದ ಖಾಸಗಿ ಮೆಡಿಕಲ್ ಸೆಂಟರ್‌ಗೆ ಚಿಕಿತ್ಸೆಗಾಗಿ ಆಗಮಿಸಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ನಂತರದಲ್ಲಿ ಮನೆಗೆ ಬಂದ ಬಳಿಕ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ...
ಕಡಬಸುದ್ದಿಸುಬ್ರಹ್ಮಣ್ಯ

ಒಂದೇ ದಿನದಲ್ಲಿ ಕುಮಾರ ಪರ್ವತಾರೋಹಣ ಮಾಡಿದ 1,000ಕ್ಕೂ ಹೆಚ್ಚು ಟ್ರೆಕ್ಕಿಂಗ್ ಉತ್ಸಾಹಿಗಳು : ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಟ್ರೆಕ್ಕಿಂಗ್ ನಿಷೇಧ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆಬ್ರವರಿ 1ರಿಂದ ನಿಷೇಧಿಸಲಾಗಿದೆ. ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಸದ್ಯ ಜಿಲ್ಲಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ...
ಕಡಬದಕ್ಷಿಣ ಕನ್ನಡರಾಜ್ಯಶಿಕ್ಷಣಸುದ್ದಿ

ಜ.13: ಪೇಜಾವರ ಹಿರಿಯ ಶ್ರೀಗಳ ಹುಟ್ಟೂರು ರಾಮಕುಂಜಕ್ಕೆ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ..! ” ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ” ವಿಶೇಷ ಉಪನ್ಯಾಸ – ಕಹಳೆ ನ್ಯೂಸ್

ಅವರು ಜ.13ರಂದು ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ’ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ಕೆ.ಎಸ್.ರಾಧಾಕೃಷ್ಣ ಅವರು ತಿಳಿಸಿದ್ದಾರೆ....
1 2 3 4 5 11
Page 3 of 11