ಡೆಂಗ್ಯೂ ಜ್ವರಕ್ಕೆ ಯುವಕ ಬಲಿ- ಕಹಳೆ ನ್ಯೂಸ್
ಕಡಬ: ಏಕಕಾಲಕ್ಕೆ ಡೆಂಗ್ಯೂ ಮತ್ತು ಮಲೇರಿಯಾ ಜ್ವರ ಬಾಧಿಸಿ ಯುವಕನೋರ್ವ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕು ಕುಟ್ರುಪಾಡಿ ಗ್ರಾಮದ ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು ಕಲ್ಲೋಳಿಕಲ್ (31) ಮೃತಪಟ್ಟ ಯುವಕ. ಜ್ವರ ಕಾಣಿಸಿಕೊಂಡ ಕಾರಣ ಕಡಬದ ಖಾಸಗಿ ಮೆಡಿಕಲ್ ಸೆಂಟರ್‌ಗೆ ಚಿಕಿತ್ಸೆಗಾಗಿ ಆಗಮಿಸಿದ್ದರು. ಅಲ್ಲಿ ಪರೀಕ್ಷೆ ನಡೆಸಿದಾಗ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ನಂತರದಲ್ಲಿ ಮನೆಗೆ ಬಂದ ಬಳಿಕ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಮಾರನೇ ದಿನ ಆಸ್ಪತ್ರೆಗೆ...