ಕಾರ್ಕಳ ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ ; ಪ್ರಕರಣ ದಾಖಲು- ಕಹಳೆ ನ್ಯೂಸ್
ಕಾರ್ಕಳ, ಸೆ.30 : ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಮೆರಿಕಾದಲ್ಲಿ ನೆಲೆಸಿರುವ ಲಲಿತಾ ರಾವ್ ಅವರ ಪತಿ ಅಶೋಕ್ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಜು.13ರಂದು ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಕಾರ್ಕಳದಲ್ಲಿ ಸಾವನ್ನಪ್ಪಿದ್ದರು. ಇವರ ಪತ್ನಿ ಮತ್ತು ಮಕ್ಕಳು ಕೋವಿಡ್ ಲಾಕ್‌ಡೌನ್‌ನಿಂದ ಮೃತರ ಅಂತ್ಯಸಂಸ್ಕಾರಕ್ಕೆ ಅಮೆರಿಕಾ ದಿಂದ ಕಾರ್ಕಳಕ್ಕೆ ಬರಲು ಸಾಧ್ಯವಾಗಿರಲಿಲ್ಲ....