ಮಂಥನ ಬೇಸಿಗೆ ಶಿಬಿರ 6ನೇ ದಿನದ ಕಾರ್ಯಕ್ರಮ ಉದ್ಘಾಟನೆ; “ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭಾ ಅನಾವರಣಕ್ಕೆ ಸಹಕಾರಿ – ಬಿ.ಜಯಕರ ಶೆಟ್ಟಿ-ಕಹಳೆ ನ್ಯೂಸ್
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಮುಖ್ಯ ಆಯುಕ್ತಾಗಿರುವ ಶ್ರೀಯುತ ಬಿ.ಜಯಕರ ಶೆಟ್ಟಿ"ಮಕ್ಕಳು ಶಾಲೆಯಲ್ಲಿ ಪಠ್ಯದ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡರೆ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿರುವ...