ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರಿಂದ ಬೂತ್ ಬೂತ್ ಗಳಲ್ಲೂ ಮತ ಶಿಖಾರಿ ಆರಂಭ : “ಬೂತ್ ಕಡೆಗೆ ಸಮೃದ್ಧ ನಡಿಗೆ” ವಿನೂತನ ಕಾರ್ಯಕ್ರಮಕ್ಕೆ ಚಾಲನೆ – ಕಹಳೆ ನ್ಯೂಸ್
ಬೈಂದೂರು: ಲೋಕಸಭಾ ಚುನಾವಣ ಕಣ ರಂಗೇರುತಿದ್ದು, ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಮಂಗಳವಾರ ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಿ ಕಾರ್ಯಕರ್ತರ ಸಭೆ ನಡೆಸಿ ಹೊಸ ಸಂಚಲನ, ಚೈತನ್ಯ ತುಂಬಿದ್ದರು. ಇದರ ಮುಂದುವರಿದ ಭಾಗವಾಗಿ ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಯವರು ಬೂತ್ ಕಡೆಗೆ ಸಮೃದ್ಧ ನಡಿಗೆ ವಿಶೇಷ ಕಾರ್ಯಕ್ರಮದ ಮೂಲಕ ಮತ ಶಿಖಾರಿ ಬುಧವಾರದಿಂದ ಆರಂಭಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ನಿರೀಕ್ಷೆಗೂ...