ಕುಡ್ಲದ ಪಿಲಿಪರ್ಬ-2024ರ ಚಪ್ಪರ ಮುಹೂರ್ತ ಕಾರ್ಯಕ್ರಮ-ಕಹಳೆ ನ್ಯೂಸ್
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶ್ರೀ ಡಿ.ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2024"ರ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಗುರುವಾರ ಮುಂಜಾನೆ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, "ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ...