ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ, ನನ್ನ ಪೂರ್ಣ ಬೆಂಬಲವಿದೆ ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ-ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಲಹೆ ನೀಡಿದ್ದು, ಇದಕ್ಕೆ ತಮ್ಮ ಕಡೆಯಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿರುವ ಲಿಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿದ್ದ ಅವರಿಗೆ, ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿನ ಸಾಮರ್ಥ್ಯವನ್ನು...