Sunday, November 24, 2024

ಮಂಗಳೂರು

ಉಡುಪಿದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್ ; ನಾಳೆಯೂ ( ಜೂ.28 ) ದ.ಕ.ದಲ್ಲಿ ಶಾಲೆಗಳಿಗೆ ರಜೆ, ಉಡುಪಿಯಲ್ಲಿ ರಜೆ ಇಲ್ಲ – ಕಹಳೆ ನ್ಯೂಸ್

ಮಂಗಳೂರು/ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 28 ಶುಕ್ರವಾರದಂದು ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಘೋಷಿಸಿದೆ. ಜೂನ್ 27ರಂದು ಕೂಡ ಭಾರೀ ಮಳೆಯಿಂದಾಗಿ ಶಾಲೆಗಳಿಗೆ ರಜೆ ನೀಡಲಾಗಿತ್ತು.ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದ್ದು, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಉಡುಪಿಯಲ್ಲಿ ರಜೆ ಇಲ್ಲ: ಡಿಸಿ ಉಡುಪಿಯಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು ವಕೀಲರ ಸಂಘದ ಸದಸ್ಯರಾದ ಶ್ರೀ ಜಯಪ್ರಕಾಶ್ ಹಾಗೂ ಶ್ರೀಮತಿ ಸ್ವಾತಿ ಇವರ ಮೇಲೆ ವೆಲೇರಿಯನ್ ಮೆಂಡೋನ್ಸ ಎಂಬುವನು ಹಲ್ಲೆ ಮಾಡಿದ್ದು ಈಗಾಗಲೇ ಆತನ ಮೇಲೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿದ್ದು, ಆರೋಪಿಯ ಮುಲಾಜಿಗೆ ಪೊಲೀಸರು ಈವರೆಗೂ ಆತನ ಯಾವುದೇ ಕ್ರಮ ಕೈಗೊಳ್ಳದೆ ಹಿನ್ನೆಲೆಯಲ್ಲಿ, ಮಂಗಳೂರು ವಕೀಲರ ಸಂಘದ ಸದಸ್ಯರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಶ್ರೀ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಿಕ್ಷಾ ತೊಳೆಯುತಿದ್ದ ವೇಳೆ ವಿದ್ಯುತ್ ತಂತಿ ಕಡಿದು ಬಿದ್ದು ಚಾಲಕ ಸಹಿತ ಇಬ್ಬರು ದುರ್ಮರಣ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅವ್ಯಾಹತವಾಗಿ ಗಾಳಿ ಮಳೆ ಸುರಿಯುತ್ತಿದ್ದು ಅಲ್ಲ್ಲಲ್ಲಿ ಅನಾಹುತಕ್ಕೆ ಕಾರಣವಾಗಿದೆ. ಮಂಗಳೂರು ನಗರದ ರೋಸಾರಿಯೊ ಶಾಲೆಯ ಬಳಿ ಇಬ್ಬರು ರಿಕ್ಷಾ ಚಾಲಕರು ವಿದ್ಯುತ್ ತಂತಿ ತಗಲಿ ಮೃತಪಟ್ಟ ಘಟನೆ ಗುರುವಾರ ನಸುಕಿನ ಜಾವ ಸಂಭವಿಸಿದೆ. ರಿಕ್ಷಾ ತೊಳೆಯುತಿದ್ದ ವೇಳೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು ಮೃತರನ್ನು ಹಾಸನ ಮೂಲದ ರಾಜು ಮತ್ತು ಕಡಬ ವ್ಯಾಪ್ತಿಯ ರಾಮಕುಂಜದ ದೇವರಾಜ್ ಎಂದು ತಿಳಿದು ಬಂದಿದೆ.ಇವರು...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ನಾಳೆ (ಜೂನ್ 27) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು,ಜೂ 26 : ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಕಂಪೌಂಡ್ ಕುಸಿದು ನಾಲ್ವರು ಮೃತಪಟ್ಟ ಪ್ರಕರಣ: ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ – ಕಹಳೆ ನ್ಯೂಸ್

ಮಂಗಳೂರು: ನಗರದ ಹೊರ ವಲಯದ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ಇಂದು ಮುಂಜಾನೆ ಒಂದೇ ಕುಟುಂಬದ ನಾಲ್ವರು ಗೋಡೆ ಕುಸಿದು ಸಾವನ್ನಪ್ಪಿದ್ದು, ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಯುಟಿ ಖಾದರ್ ಅವರು ಸರ್ಕಾರದಿಂದ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದಷ್ಟು ಬೇಗ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯ ಉದ್ಘಾಟನೆ -ಕಹಳೆ ನ್ಯೂಸ್

ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದರು, ಶಾರದ ಯಕ್ಷಗಾನ ಮಂಡಳಿ ಪೆರ್ಮುದೆ ಇದರ ಅಧ್ಯಕ್ಷರಾದ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ನುಡಿದರು. ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ವೈಜ್ನಾನಿಕವಾಗಿ ಕಿರು ಜೆಟ್ಟಿ ಕಾಮಗಾರಿ ನಡೆಸಲು ಸೂಚನೆ: ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಪಣಂಬೂರು: ಮಂಗಳವಾರ ಕಿರು ಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮೀನುಗಾರರ ಅಭಿಪ್ರಾಯ ಸಂಗ್ರಹಿಸಿದರಲ್ಲದೆ , ಸಂಬAಧ ಆಧಿಕಾರಿಗಳಿಗೆ ಸೂಚನೆ ನೀಡಿ ಸಮರ್ಪಕ ಕಾಮಗಾರಿ ಆದೇಶ ನೀಡಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ವಋತು ಬಂದರು ಆಗಿ ಮೀನುಗಾರಿಕೆ ವರ್ಷಪೂರ್ತಿ ನಡೆಯುವಂತಾಗಬೇಕು ಎಂಬ ನಿಟ್ಟಿನಲ್ಲಿ ಈ ಕಿರು ಜೆಟ್ಟಿ ನಿರ್ಮಾಣಗೊಳ್ಳಬೇಕಿದೆ. ಈಗಿರುವ ಬ್ರೇಕ್ ವಾಟರ್ ಉದ್ದಕ್ಕಿಂತ ಅಂದಾಜು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆ : ಆಕ್ರೋಶ ವ್ಯಕ್ತಪಡಿಸಿದ ಶಾಸಕ ವೇದವ್ಯಾಸ ಕಾಮತ್– ಕಹಳೆ ನ್ಯೂಸ್

ರಾಜ್ಯದಲ್ಲಿ ಅಗತ್ಯ ವಸ್ತುಗಳ ದರ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಕಂಗಾಲಾಗುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮಾತ್ರ ತನ್ನ ಪಾಡಿಗೆ ತಾನು ಜನರನ್ನು ದೋಚುವುದರಲ್ಲಿ ನಿರತವಾಗಿದ್ದು ಅದರ ಮುಂದುವರಿದ ಭಾಗವಾಗಿ ಸರ್ಕಾರ ಈಗ ಹಾಲಿಗೆ ಏಕಾಏಕಿ 2 ರೂ ಏರಿಸಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಣ್ಣಿಗೆ ಕಂಡದ್ದೆಲ್ಲದರ ಬೆಲೆ ಏರಿಸುವುದರಲ್ಲಿ ಹಠಕ್ಕೆ ಬಿದ್ದಿರುವಂತೆ ವರ್ತಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅತ್ತ ರೈತರ ಬದುಕಿಗೂ ಉಪಕಾರಿಯಾಗಿಲ್ಲ, ಬಡವರ ಬದುಕಿಗೂ...
1 22 23 24 25 26 41
Page 24 of 41