ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿಯನ್ನು ಅನುಷ್ಠಾನಗೊಳಿಸಿ ; ಶಾಸಕ ಕಾಮತ್-ಕಹಳೆ ನ್ಯೂಸ್
ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು. ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಸುಮಾರು ಹತ್ತು ಸಾವಿರದಷ್ಟು ಇರುವ ರಿಕ್ಷಾ ಚಾಲಕರು ಸಮಸ್ಯೆ...