ಲೋಕಸಭಾ ಚುನಾವಣೆ ; ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಮುತ್ತ ನಿಷೇಧಾಜ್ಞೆ ಜಾರಿ – ಕಹಳೆ ನ್ಯೂಸ್
ಮಂಗಳೂರು, ಮಾ 28: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮಾ.28ರಿಂದ ಏ.8ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಈ ಆದೇಶ ಹೊರಡಿಸಿದ್ದಾರೆ. ಮಾ.28ರಿಂದ ಏ.8ರವರೆಗೆ, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ...