ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಮತ್ತು ಪೋಷಕರ ನಡುವಿನ ಬಾಂಧವ್ಯವು ಪ್ರಮುಖ ಪಾತ್ರ ವಹಿಸುತ್ತದೆ- ಸಂಗೀತ ಶರ್ಮ ಪಿ ಜಿ -ಕಹಳೆ ನ್ಯೂಸ್
ಬಂಟ್ವಾಳ : ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಮತ್ತು ಪೋಷಕರ ನಡುವಿನ ಬಾಂಧವ್ಯವು ಪ್ರಮುಖ ಪಾತ್ರ ವಹಿಸುತ್ತದೆ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಶಾಲೆಯ ಶೈಕ್ಷಣಿಕ ಮತ್ತು ಭೌತಿಕ ಅಭಿವೃದ್ಧಿಗಳಿಗೆ ನಿರಂತರವಾಗಿ ಶ್ರಮಿಸಿದಾಗ ಸರ್ವರೀತಿಯ ಬೆಳವಣಿಗೆ ಸಾಧ್ಯವಾಗುತ್ತದೆ. ಸಂಸ್ಕಾರಯುತ ಶಿಕ್ಷಣದಿಂದ ವಿದ್ಯಾರ್ಥಿಗಳ ಭಾವನಾತ್ಮಕ ಸದೃಢ ಬೆಳವಣಿಗೆಗೆ ಅವಕಾಶ ದೊರಕುತ್ತದೆ. ಶಾಲೆಗಳು ಗ್ರಾಮದ ಸರ್ವಧರ್ಮಿಯ ಕೇಂದ್ರವಾಗಿದ್ದು ಅದರ ಬೆಳವಣಿಗೆ ಊರಿನ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ.ಎಂದು ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತ...