Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬೋಳಂತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಯೋಜನೆಯ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲಡ್ಕ ವಲಯದ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಬೋಳಂತೂರಿನ ಜ್ಯೋತಿ ಫ್ರೆಂಡ್ಸ್ ಸರ್ಕಲ್ ಹತ್ತಿರ ಇರುವ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪುಷ್ಪ ರಿಬ್ಬನ್ ಕಟ್ ಮಾಡಿ ಸೇವಾ ಕೇಂದ್ರವನ್ನು ಉದ್ಘಾಟಿಸಿದರು. ಬೋಳಂತೂರು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಾ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಶ್ರೀ ಕ್ಷೇತ್ರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್‍ಗೆ ನುಗ್ಗಿ ಪಕ್ಕದ ಕಂದಕಕ್ಕೆ ಉರುಳಿದ ಕಾರು- ಕಹಳೆ ನ್ಯೂಸ್

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿರುವ ಹೊಟೇಲಿಗೆ ನುಗ್ಗಿ ಬಳಿಕ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿರುವ ಹೊಟೇಲ್‍ಗೆ ನುಗ್ಗಿದ ಪರಿಣಾಮ, ಹೊಟೇಲ್ ಮಾಲಕ ಗಂಭೀರ ಗಾಯಗೊಂಡಿದ್ದು, ಮೂವರು ಹೊಟೇಲ್ ಸಿಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡಿರುವ ಹೊಟೇಲ್ ಮಾಲಕರಾದ ರಿಯಾಝ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ: ಕಾರು-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ : ಮಹಿಳೆ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ. ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(70) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಟೋ ಚಾಲಕರಾದ ಭೋಜ ಮೂಲ್ಯ ಗಾಯಗೊಂಡಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಪಾಯವಾಗಿಲ್ಲ. ಈ ಬಗ್ಗೆ ಬಂಟ್ವಾಳ ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಫೆ.5ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಬಿ.ಸಿ ರೋಡಿನ ಗೀತಾಂಜಲಿ ಸಬಾ ಭವನದಲ್ಲಿ ನಡೆಯಿತು. ಕಾರ್ಯಕ್ರವನ್ನು ಉದ್ಘಾಟಿಸಿ, ಬಳಿಕ ಮಾತನಾಡಿದ ನಿವೃತ್ತ ಯೋಧರು ಇಂಡಿಯಾನಾ ಹಾಸ್ಪಿಟಲ್ ಮಂಗಳೂರು ಇಲ್ಲಿಯ ಫಿಸಿಯೋಥೆರಫಿ ವಿಭಾಗದ ಮುಖ್ಯಸ್ಥರಾದ ಡಾ. ವೆಂಕಟೇಶ್ ಕುಂಪಲ ವಿದ್ಯಾರ್ಥಿ ಪರಿಷತ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿ ಪರಿಷತ್ ವತಿಯಿಂದ ಡಾ. ವೆಂಕಟೇಶ್ ಕುಂಪಲರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಎಬಿವಿಪಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕನಪಾಡಿ – ದೇವಂದಬೆಟ್ಟು ರಸ್ತೆ ಡಾಮರೀಕರಣಕ್ಕೆ ಗುದ್ದಲಿಪೂಜೆ- ಕಹಳೆ ನ್ಯೂಸ್

ಬಂಟ್ವಾಳ : ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ದೇವಸ್ಥಾನದ ವತಿಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳ ಬೇಡಿಕೆಯನ್ನು ಒಳಗೊಂಡ ಮನವಿಯನ್ನು ಶಾಸಕ ರಾಜೇಶ್ ನಾಯ್ಕ್ ಅವರಿಗೆ ಸಲ್ಲಿಸಲಾಗಿತ್ತು. ಅದರಲ್ಲಿ ಬ್ರಹ್ಮಕಲಶ ಸಂದರ್ಭ ವಾಹನಗಳಿಗೆ ಏಕಮುಖ ಸಂಚಾರ ಕಲ್ಪಿಸುವ ಸಲುವಾಗಿ ದೇವಂದಬೆಟ್ಟು-ಕನಪಾಡಿ-ಮಾಡಂಗೆ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಬೇಕಾಗಿ ವಿನಂತಿಸಲಾಗಿತ್ತು. ಈ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು 15 ಲಕ್ಷ ರೂ ಅನುದಾನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಂದೂ ಜಾಗರಣ ವೇದಿಕೆ ನಡೆಸಿದ ಬೃಹತ್ ಹೋರಾಟಕ್ಕೆ ಜಯ; ಶ್ರೀ ಕಾರಿಂಜೇಶ್ವರ ಸನ್ನಿದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿದ್ದ ಎಲ್ಲಾ ಕೋರೆಗಳು ಸ್ಥಗಿತ ; ಅಧಿಕೃತ ಮಾಹಿತಿ ನೀಡಿದ ಇಲಾಖೆ – ಕಹಳೆ ನ್ಯೂಸ್

ಬಂಟ್ವಾಳ : ಕಾರಿಂಜ ಶ್ರೀ ಕಾರಿಂಜೇಶ್ವರ ಸನ್ನಿದಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿದ್ದ ಎಲ್ಲಾ ಕೋರೆಗಳು ಸ್ಥಗಿತಗೊಂಡಿದೆ ಎಂದು ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಕೆಲ ಸಮಯಗಳಿಂದ ಬಾರೀ ಸುದ್ದಿಯಾಗಿದ್ದ ಕಾರಿಂಜದ ಅಕ್ರಮ ಕಲ್ಲು ಗಣಿಗಾರಿಕೆಗೆ ಬ್ರೇಕ್ ಬಿದ್ದಿದೆ. ಈ ಭಾಗದಲ್ಲಿ ಮೂರು ಜನರಿಗೆ ಸೇರಿದ ಕಪ್ಪು ಕಲ್ಲಿನ ಕೋರೆ ಕಾರ್ಯಚರಿಸುತ್ತಿದ್ದು, ಪ್ರಸ್ತುತ ಅದನ್ನು ಕೂಡ ನಿಲ್ಲಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ತಿಂಗಳ ಹಿಂದೆ ವ್ಯಕ್ತಿಯೋರ್ವರು ಪರವಾನಿಗೆ ರಹಿತವಾಗಿ ಅಕ್ರಮ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಡಿದ್ದುಣ್ಣೋ ಮಹಾರಾಯ | ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ ; ತಲೆಮರೆಸಿಕೊಂಡ ಆರೋಪಿ ಬಾಷಿತ್ ಅಂದರ್..! ತಡವಾಗಿಯಾದ್ರು ಬಲೆ ಬೀಸಿ ಬೋನಿಗೆ ಹಾಕಿದ ಖಾಕಿಪಡೆ – ಕಹಳೆ ನ್ಯೂಸ್

ಮುಸ್ಲಿಂ ವರನಿನಿಂದ ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ; ಬಾಷಿತ್'ನನ್ನು ಬಂಧಿಸಿದ ಪೊಲೀಸ್ ಪಡೆ..! ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ವಿವಾಹದಂದು ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ಧರಿಸಿದ್ದು ಕರಾವಳಿಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈತನ ಬಂಧನವಾಗಿದೆ ಎಂದು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ. 1 ತಿಂಗಳಿಂದ ಪೆÇಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡ ಆರೋಪಿ ಬಾಷಿತ್ ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಕರ್ನಾಟಕ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಬ್ರಹ್ಮಕಲಶ ಆಮಂತ್ರಣ ಗೀತೆ ಟೀಸರ್ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಕಳ್ಳಿಗೆ ಗ್ರಾಮ ಬಂಟ್ವಾಳ ತಾಲೂಕು ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಫೆ.6ರಂದು ಬ್ರಹ್ಮಕಲಶ ಆಮಂತ್ರಣ ಗೀತೆ ಟೀಸರ್ ಬಿಡುಗಡೆಗೊಳ್ಳಲಿದೆ. ಇಡೀ ತುಳುನಾಡಿನಾದ್ಯಂತ ಸಂಚಲನ ಸೃಷ್ಟಿಸಿದ ಕರಿಯಜ್ಜೆ ಖ್ಯಾತಿಯ ತುಳುನಾಡ ಕಲಶ ಜಿಎಸ್ ಗುರುಪುರ ರಚನೆಯಿಂದ ಇದೀಗ ಮೂಡಿ ಬರುತ್ತಿರುವಂತಹ ದೇವಂದಬೆಟ್ಟು ಬ್ರಹ್ಮಕಲಶ ಆಮಂತ್ರಣ ಗೀತೆಯೊಂದಿಗೆ ಮತ್ತೊಂದು ಭಕ್ತಿ ಪ್ರಧಾನ ಹಾಡು ಮುಂದಿನ ವಾರ ತೆರೆಕಾಣಲಿದೆ. ಖ್ಯಾತ ಗಾಯಕಿ ಕು. ಚೈತ್ರಾ ಗಾಣಿಗ...
1 101 102 103 104 105 147
Page 103 of 147