Sunday, January 19, 2025

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ನಾಗವಳಚ್ಚಿಲ್‌ನ ವೃದ್ಧ ರೊಬ್ಬರು ನ. 5ರಂದು ಮನೆಯಿಂದ ಹೊರ ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದು, ಅದೇ ದಿನ ಉಳ್ಳಾಲದ ರೈಲು ಹಳಿಯಲ್ಲಿ ಮೃತದೇಹ ವೊಂದು ಪತ್ತೆಯಾಗಿದೆ. ನಾಗವಳಚ್ಚಿಲ್ ನಿವಾಸಿ ಉಗ್ಗಪ್ಪ ಪೂಜಾರಿ (70) ಮೃತಪಟ್ಟವರು ಎಂದು ತಿಳಿದು ಬಂದಿದೆ. ನ. 5ರಂದು ಪಾಣೆಮಂಗಳೂರಿನ ಬ್ಯಾಂಕ್ ಶಾಖೆಯೊಂದಕ್ಕೆ ಹೋಗಿ ತನ್ನ ವೃದ್ಧಾಪ್ಯ ವೇತನದ ಹಣವನ್ನು ಡ್ರಾ ಮಾಡಿಕೊಂಡು ಮನೆಗೆ ಬಂದಿದ್ದರು. ಬಳಿಕ ಸೊಸೆಗೆ ಕರೆ ಮಾಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪುಟಾಣಿ ದಿಶ್ಯಾಂತ್ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದು, ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಮಾಡಿ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಶ್ರೀ ರುಕ್ಮಯ ಪೂಜಾರಿ, ಪಂಚಾಯತ್ ಉಪಾಧ್ಯಕ್ಷೆ ರಂಜಿನಿ,ಸದಸ್ಯ ವಿಠಲ ನಾಯ್ಕ, ಬಂಟ್ವಾಳ ರಬ್ಬರ್ ಮತ್ತು ಜೇನು ವ್ಯವಸಾಯ ಸಂಘದ ಉಪಾಧ್ಯಕ್ಷ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಬ್ಲಾಕ್-ಕಹಳೆ ನ್ಯೂಸ್

ವಿಟ್ಲ: ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ನ.13ರ ಬುಧವಾರ ರಾತ್ರಿ ಬಂದ ಭಾರೀ ಮಳೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ಲಾರಿ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದ ಮಂಗಳೂರು-ಪುತ್ತೂರು ಸಂಪರ್ಕ ಕಡಿತಗೊಂಡಿದೆ. ಪುತ್ತೂರು ಕಡೆಯಿಂದ ಬರುವ ವಾಹನ ವಿಟ್ಲ ಮೂಲಕ ಮತ್ತು ಮಂಗಳೂರು ಕಡೆಯಿಂದ ಬರುವ ವಾಹನಗಳು ಮಾಣಿ ಮೂಲಕ ಬದಲಿ ರಸ್ತೆ ಮೂಲಕ ತೆರಳಿದೆ. ಹೆದ್ದಾರಿಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಕಂದಾಯ ನಿರೀಕ್ಷಕರಿಗೆ ಅವಾಚ್ಯವಾಗಿ ಬೈದು ಟೇಬಲ್‌ ಗ್ಲಾಸ್‌ ಒಡೆದು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ : ಆರೋಪಿಗಳಾದ ಹರೀಶ್ ಕಲ್ಮಲೆ ಮತ್ತು ಧನಂಜಯ ವಿರುದ್ದ ಪ್ರಕರಣ ದಾಖಲು-ಕಹಳೆ ನ್ಯೂಸ್

ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಕಂದಾಯ ನಿರೀಕ್ಷರಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ, ಟೇಬಲ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಪಡಿಸಿದ ಘಟನೆ ನ. 11 ರಂದು ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿಗಳಾದ ಹರೀಶ್ ರೈ ಕಲ್ಮಲೆ ಮತ್ತು ಧನಂಜಯ ಪಾದೆ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಟ್ಲದಲ್ಲಿರುವ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಪ್ರಶಾಂತ ಶೆಟ್ಟಿ ಕಂದಾಯ ನಿರೀಕ್ಷಕರು ಎಂಬವರು ಕೆ ಗಿರೀಶ್‌ ಶೆಟ್ಟಿರವರ ಜೊತೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನ.16ರಂದು ಪಡಿಬಾಗಿಲು ಶಾಲಾ ನೂತನ ವಿವೇಕ ತರಗತಿ ಕೊಠಡಿ ಹಾಗೂ ಎಂ ಆರ್ ಪಿ ಎಲ್ ಸಂಸ್ಥೆಯ ಅನುದಾನದಿಂದ ನಿರ್ಮಾಣವಾದ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಪಡಿಬಾಗಿಲು ಇಲ್ಲಿ ನೂತನವಾಗಿ ನಿರ್ಮಾಣವಾದ ವಿವೇಕ ತರಗತಿ ಕೊಠಡಿ ಹಾಗೂ ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ನಿರ್ಮಾಣವಾದ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನ.16ರಂದು ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ ವಹಿಸಲಿದ್ದು, ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಅನುದಾನದ ಚೆಕ್ ಹಸ್ತಾಂತರ – ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ.2 ಲಕ್ಷ ಮಂಜುರಾಗಿದ್ದು, ಸದರಿ ಚೆಕ್ಕನ್ನು ವಿಟ್ಲ ಶ್ರೀ ಯೋಗೀಶ್ವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಗುರು ಶ್ರದ್ಧಾನಾಥಾಜಿ ಮಠಾಧೀಶರಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾಧಿಕಾರಿ ರಮೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಯಶವಂತ್ ವಿಟ್ಲ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಜೀರ್ಣೋದ್ಧಾರ ಸಂಕಲ್ಪ ಪ್ರಶ್ನಾ ಚಿಂತನೆ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆ ಇದರ ಜೀರ್ಣೋದ್ಧಾರ ಪ್ರಯುಕ್ತ ಪ್ರಶ್ನಾ ಚಿಂತನೆ ದೇವಸ್ಥಾನದಲ್ಲಿ ನ. 11 ರಂದು ಸೋಮವಾರ ಬೆಳಿಗ್ಗೆ ಸಿಂಹ ರಾಶಿ ಲಗ್ನದಲ್ಲಿ ನೆರವೇರಿತು. ದೇವಸ್ಥಾನವು ಪೆರಾಜೆ , ಮಾಣಿ, ಅರೆಬೆಟ್ಟು ಸೀಮಾ ಗ್ರಾಮಗಳಿಗೆ ಸಂಬಂಧಪಟ್ಟಿದೆ. ಮಂಗಳೂರು ಬೆಂಗಳೂರು ಮತ್ತು ಮಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಗಳ ಮಧ್ಯೆ ಇರುವ ದೇವಾಲಯ ಮಾಣಿ,ಬುಡೋಳಿ,ನೇರಳಕಟ್ಟೆಯಿಂದ ಸಮಾನ ದೂರದ ಸಾದಿಕುಕ್ಕು ಪರಿಸರದಲ್ಲಿದೆ. ಕೆದಿಲ, ಕಡೇಶ್ವಾಲ್ಯ, ಬರಿಮಾರು, ಬಾಳ್ತಿಲ, ವೀರಕಂಭ, ಅನಂತಾಡಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಗುರುದೀಪ ರಾಜೇಶ್ ಸುವರ್ಣ ರವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 20ರ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಮನುಷ್ಯನ ಅಂತಃಶಕ್ತಿ ಹೆಚ್ಚಿದಂತೆ ಅವನ ಆತ್ಮವಿಶ್ವಾಸವು ಹೆಚ್ಚುತ್ತದೆ. ನಾರಾಯಣ ಗುರುಗಳ ಪ್ರಖಾಂಡ ಪಾಂಡಿತ್ಯ ಅವರ ವಿರೋಧಿಗಳನ್ನು ನಿಸ್ತೇಜರನ್ನಾಗಿಸಿತ್ತು. ಅವರು ಪ್ರತಿಪಾದಿಸಿದ ಮೌನಕ್ರಾಂತಿ ಇಂದಿನ ಯುವಪೀಳಿಗೆಗೆ ದಾರಿದೀಪವಾಗಬೇಕು ಎಂದು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ.ತುಕರಾಮ ಪೂಜಾರಿ ತಿಳಿಸಿದರು. ಅವರು  ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಗುರುದೀಪ ರಾಜೇಶ್ ಸುವರ್ಣ ರವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 20 ರ...
1 9 10 11 12 13 155
Page 11 of 155