ನಡುರಾತ್ರಿ ಪ್ರಿಯತಮೆಯನ್ನು ಭೇಟಿಯಾಗಲು ಬಂದ ಲವ್ವರ್ : ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಯುವತಿ ಮನೆಯವರು – ಕಹಳೆ ನ್ಯೂಸ್
ಬಂಟ್ವಾಳ: ಪ್ರಿಯತಮೆಯನ್ನು ಭೇಟಿಯಾಗಲು ನಡುರಾತ್ರಿ ಬಂದ ಯುವಕನನ್ನು ಯುವತಿಯ ಸಂಬಂಧಿಕರು ಮತ್ತು ಸ್ಥಳೀಯರು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ನಡೆದಿದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಜಿಪ ಕಂಚಿನಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು ಸದ್ಯ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಕುರಿತು ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...