Sunday, November 24, 2024

ಬಂಟ್ವಾಳ

ಬಂಟ್ವಾಳ

ಬಂಟ್ವಾಳ: 20ರಂದು ಕನ್ನಡ ಭವನ, ರಂಗ ಮಂದಿರ ಲೋಕಾರ್ಪಣೆ; 21ರಂದು ತಾಲೂಕು ಮಟ್ಟದ 21ನೇ ಕನ್ನಡ ಸಾಹಿತ್ಯ ಸಮ್ಮೇಳನ-ಕಹಳೆ ನ್ಯೂಸ್

ಬಂಟ್ವಾಳ : ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಕೈಕುಂಜೆಯಲ್ಲಿ ರೂ 1 ಕೋಟಿ ವೆಚ್ಚದಲ್ಲಿ ನಿರ್ಮಾಣಿಸಲಾದ ನೂತನ 'ಕನ್ನಡ ಭವನ' ಮತ್ತು ಸಾರ್ವಜನಿಕ ರಂಗಮಂದಿರ ಇದೇ 21ರಂದು ಲೋಕಾರ್ಪಣೆಗೊಳ್ಳಲಿದ್ದು, 21ರಂದು ತಾಲ್ಲೂಕು ಮಟ್ಟದ 21ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬಂಟ್ವಾಳ ಕಸಾಪ ಅಧ್ಯಕ್ಷ ಕೆ.ಮೋಹನ ರಾವ್ ಅವರು ಬಿ.ಸಿ.ರೋಡಿನಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಿರಿಯ ಸಾಹಿತಿ ಡಾ.ಸುರೇಶ ನೆಗಳಗುಳಿ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನ ಯಶಸ್ವಿಗೊಳಿಸಲು...
ಬಂಟ್ವಾಳ

ಬಂಟ್ವಾಳ ತಾಲೂಕಿನ ನಿವಾಸಿ ಜೀವನ ಬಂಗೇರ ಇವರ ಅನಾರೋಗ್ಯದ ಚಿಕಿತ್ಸೆಗೆ ನೆರವಿನ ಚೆಕ್ಕನ್ನು ಹಸ್ತಾಂತರಿಸಿದ ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್-ಕಹಳೆ ನ್ಯೂಸ್

ಬಂಟ್ವಾಳ :  ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ರಾಮಲ್ ಕಟ್ಟೆ ನಿವಾಸಿ ಜೀವನ ಬಂಗೇರ ಇವರ ಅನಾರೋಗ್ಯದ ಚಿಕಿತ್ಸೆಗೆ , ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ನೆರವಿನ ಚೆಕ್ಕನ್ನು ಹಸ್ತಾಂತರಿಸಿದರು....
ಬಂಟ್ವಾಳ

ಗ್ರಾಮೀಣ ಪ್ರತಿಭೆಗಳಿಗೆ ಸರ್ಕಾರದ ನೆರವು ಅಗತ್ಯ; ಮಾಜಿ ಸಚಿವ ನಾಗರಾಜ ಶೆಟ್ಟಿ-ಕಹಳೆ ನ್ಯೂಸ್

ಬಂಟ್ವಾಳ : ಪ್ರಸಕ್ತ ಸ್ಪರ್ಧಾತ್ಮಕ ಸಮಾಜದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಸರ್ಕಾರವು ಸ್ಪಂದಿಸಿ ತ್ವರಿತ ನೆರವು ಮತ್ತಿತರ ಮೂಲಭೂತ ಸೌಕರ್ಯ ಒದಗಿಸಿದಾಗ ಅವರಿಂದ ಅಪ್ರತಿಮ ಸಾಧನೆ ಮೂಡಿ ಬರುತ್ತದೆ ಎಂದು ಮನ್ ದೇವ್ ಎಜುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ , ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ. ಇಲ್ಲಿನ ಸಿದ್ಧಕಟ್ಟೆಯಲ್ಲಿ ಗುಣಶ್ರೀ ವಿದ್ಯಾಲಯ ಮತ್ತು ನಾಗರಿಕರ ವತಿಯಿಂದ ಶುಕ್ರವಾರ ನಡೆದ ರಾಷ್ಟ್ರೀಯ ಕ್ರೀಡಾ ಸಾಧಕಿ ರಮ್ಯಶ್ರೀ ಜೈನ್ ಇವರಿಗೆ ಅಭಿನಂದನೆ...
ಬಂಟ್ವಾಳ

ಸಮಾನ ಮನಸ್ಕ ಸಂಘಟನೆಗಳ ಸಭೆ ; ಬ್ರಹ್ಮರಕೂಟ್ಲುವಿನಲ್ಲಿ ಬೃಹತ್ ಹೆದ್ದಾರಿ ತಡೆಗೆ ನಿರ್ಧಾರ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಇಲ್ಲಿನ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಸಾಮಾಜಿಕ ಸಂಘಟನೆಗಳ ಬೆಂಬ¯ದೊಂದಿಗೆ ಬ್ರಹ್ಮರಕೂಟ್ಲು ಟೋಲ್ ಗೇಟ್ ಶಾಶ್ವತವಾಗಿ ತೆರವುಗೊಳಿಸುವಂತೆ ಒತ್ತಾಯಿಸಿ ಬೃಹತ್ ಹೆದ್ದಾರಿ ತಡೆಯನ್ನು ಮಾ.9 ರಂದು ನಡೆಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ತೀರ್ಮಾನ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಡಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಹಾಗೂ ಹಿರಿಯ...
ಬಂಟ್ವಾಳ

ಚಿಂತಾಜನಕ ಸ್ಧಿತಿಯಲ್ಲಿದ್ದ ತಾಯಿ, ತಾಯಿಗಿಂತ ಮೊದಲೇ ಪ್ರಾಣ ಬಿಟ್ಟ ಮಗ..! ‘ಕ್ಷಮಿಸು ಅಮ್ಮಾ’- ಕಹಳೆ ನ್ಯೂಸ್

ಬಂಟ್ವಾಳ : ಚಿಂತಾಜನಕ ಸ್ಧಿತಿಯಲ್ಲಿರುವ ತಾಯಿಯನ್ನ ಉಳಿಸಲಾಗೋದಿಲ್ಲ ಅನ್ನೋ ಕಾರಣಕ್ಕೆ, ತಾಯಿಗಿಂತ ಮೊದಲು ನನ್ನ ಪ್ರಾಣ ಹೋಗಲಿ ಎಂದು ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಆನಂತಾಡಿ ಪಂತಡ್ಕ ನಿವಾಸಿ ನೀರಜ್ ಮೃತ ದುರ್ಥೈವಿ. ನೀರಜ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಕೆ,ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದರು, ಆದ್ರೆ ವೈದ್ಯರು ಇವರನ್ನ ಮನೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ. ಇದರಿಂದಾಗಿ ತಾಯಿಯನ್ನ ಉಳಿಸೋದಿಕ್ಕೆ ಆಗೋದಿಲ್ಲ...
ಬಂಟ್ವಾಳ

ಬಂಟ್ವಾಳ ತಾಲೂಕಿನಲ್ಲಿ ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ 14 ವರ್ಷದ ಬಾಲಕ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಚೆರ್ಕಳ ಎಂಬಲ್ಲಿ 9ನೇ ತರಗತಿಯ ವಿದ್ಯಾರ್ಥಿಯೋರ್ವ ಹೆತ್ತವರು ಬೈದರು ಎಂಬ ಸಣ್ಣ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆಗೈದ ಬಾಲಕನನ್ನು 14 ವರ್ಷದ ಹರ್ಷಿತ್ ಎಂದು ಗುರುತಿಸಲಾಗಿದ್ದು, ಈತ ಜಾತ್ರೆಯಿಂದ ಬರುವಾಗ ತಡವಾಗಿದ್ದಲ್ಲದೇ, ತಂಗಿಗೆ ಐಸ್ ಕ್ರೀಂ ಕೂಡಾ ತಂದಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿ ಹೆತ್ತವರು ಜೋರು ಮಾಡಿದ್ದರು. ಇದೇ ಕಾರಣವನ್ನು ನೆಪ ಮಾಡಿಕೊಂಡು ಮಾನಸಿಕವಾಗಿ ನೊಂದು ಮನೆಯ ಕೋಣೆಯೊಂದರಲ್ಲಿ...
ಬಂಟ್ವಾಳ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಪರಿಹಾರದ ಚೆಕ್ ಹಸ್ತಾಂತರಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಪರಿಹಾರದ ಚೆಕ್‍ಗಳನ್ನು ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ತಮ್ಮ ಕಚೇರಿಯಲ್ಲಿ ವಿತರಿಸಿದರು. ಹಾಗೂ ಪಾಣೆಮಂಗಳೂರು, ಬಂಟ್ವಾಳ ,ವಿಟ್ಲ ಹೋಬಳಿಯ ಒಟ್ಟು ರೂ.10,97,000 ಮೌಲ್ಯದ ಚೆಕ್‍ಗಳನ್ನು ಶಾಸಕರು ಸಂತ್ರಸ್ತರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ. ಸದಸ್ಯರಾದ ಕಮಲಾಕ್ಷಿ ಪೂಜಾರಿ, ತಾ.ಪಂ. ಸದಸ್ಯರಾದ ರಮೇಶ್ ಕುಡ್ಮೇರು, ಪ್ರಭಾಕರ ಪ್ರಭು, ಗೀತಾ ಚಂದ್ರಶೇಖರ ಪೂಜಾರಿ, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ದಿವಾಕರ...
ಬಂಟ್ವಾಳ

ಮಂಗಳೂರಿನಲ್ಲಿ ಇಂದು ದಯಾನಂದ ಕತ್ತಲ್ ಸಾರ್ ಅವರ ಕಾರಿಗೆ ಮೀನಿನ ಲಾರಿ ಡಿಕ್ಕಿ-ಕಹಳೆ ನ್ಯೂಸ್

ಬಂಟ್ವಾಳ : ಮಂಗಳೂರಿನಲ್ಲಿ ಮುಂಜಾನೆ ವೇಳೆ ಲಾರಿ ಮತ್ತು ಕಾರಿನ ನಡುವೆ ಅಪಘಾತ ನಡೆದ ಘಟನೆ ನಡೆದಿದೆ. ಈ ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ವತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 5.15 ರ ಸುಮಾರಿಗೆ ನಂತೂರು ಜಂಕ್ಷನ್ ಬಳಿ ಮೀನಿನ ಲಾರಿ ದಯಾನಂದ ಕತ್ತಲ್ ಸಾರ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ದಯಾನಂದ ಕತ್ತಲ್ ಅವರು ತಮ್ಮ...
1 131 132 133 134 135 147
Page 133 of 147