Sunday, November 24, 2024

ಬಂಟ್ವಾಳ

ಬಂಟ್ವಾಳ

ಕಲ್ಲಡ್ಕದ ಪೂರ್ಲಿಪ್ಪಾಡಿಯಲ್ಲಿ ನಿನ್ನೆ ಖಾಲಿ ಗ್ಯಾಸ್ ಟ್ಯಾಂಕರ್ ಮತ್ತು ಕಂಟೈನರ್ ನಡುವೆ ಅಪಘಾತ-ಕಹಳೆ ನ್ಯೂಸ್

ಬಂಟ್ವಾಳ : ಸೂರಿಕುಮೇರುವಿನಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸುಮಾರು 10 ಗಂಟೆ ವಾಹನ ಸಂಚಾರ ಅಡಚಣೆಯ ಸಮಸ್ಯೆಯ ಬೆನ್ನಲ್ಲೇ ಕಲ್ಲಡ್ಕದಲ್ಲಿ ನಿನ್ನೆ ರಾತ್ರಿ ಮತ್ತೊಂದು ಅಪಘಾತ ನಡೆದಿದೆ. ಈ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಿನ್ನೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಖಾಲಿಯಾಗಿರುವ ಅನಿಲ ಟ್ಯಾಂಕರ್ ಹಾಗೂ ಬೆಂಗಳೂರು ಕಡೆ ಹೋಗುತ್ತಿದ್ದ ಕಂಟೈನರ್ ನಡುವೆ ಅಪಘಾತ ಸಂಭವಿಸಿದ್ದು, ಇದರ ಪರಿಣಾಮ ಕೆಲ ಕಾಲ ನಿನ್ನೆ ರಾತ್ರಿ ಆತಂಕದ...
ಬಂಟ್ವಾಳ

ಪಂಜಿಕಲ್ಲು ಗ್ರಾಮದ ಕೋಲ್ದೋಡಿ ನಿವಾಸಿ ಕೇಶವ ಪೂಜಾರಿ ನಾಪತ್ತೆ-ಕಹಳೆ ನ್ಯೂಸ್

ಬಂಟ್ವಾಳ : ವ್ಯಕ್ತಿಯೊಬ್ಬರು ಮದುವೆಗೆ ಹೋಗುವುದಾಗಿ ಹೇಳಿ ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ. ಇವರು ಪಂಜಿಕಲ್ಲು ಗ್ರಾಮದ ಕೋಲ್ದೋಡಿ ನಿವಾಸಿ 36 ವರ್ಷದ ಕೇಶವ ಪೂಜಾರಿ ಎಂದು ತಿಳಿದುಬಂದಿದೆ. ಅವರು ಇಂಟರ್‍ಲಾಕ್ ಕೆಲಸ ಮಾಡಿಕೊಂಡಿದ್ದು, ಜನವರಿ 3ರಂದು ಬೆಳಗ್ಗೆ 10.30ಕ್ಕೆ ಮದುವೆಗೆಂದು ತೆರಳಿದ್ದಾರೆ. ಬಳಿಕ ಮರಳಿ ಮನೆಗೆ ಬಂದಿಲ್ಲ. ಹಾಗಾಗಿ ನೆರೆಕರೆಯವರು, ಸಂಬಂಧಿಕರ ಮನೆಯಲ್ಲಿ ಹುಡುಕಿದರೂ ಅವರು ಪತ್ತೆಯಾಗಿಲ್ಲ. ಈ ಹಿಂದೆಯೂ ಅವರು 3-4 ಬಾರಿ ಇದೇ ರೀತಿ ಮನೆ...
ಬಂಟ್ವಾಳ

ಸೂರಿಕುಮೇರಿನಲ್ಲಿ ಮತ್ತೆ ಗ್ಯಾಸ್ ಟ್ಯಾಂಕರ್ ಪಲ್ಟಿ, ಹೆದ್ದಾರಿ ಸಂಚಾರ ಬ್ಲಾಕ್; ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿ-ಕಹಳೆ ನ್ಯೂಸ್

ಬಂಟ್ವಾಳ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಮಸೀದಿ ಮುಂಭಾಗದಲ್ಲಿ ಇಂದು ಬೆಳಗ್ಗೆ ಸುಮಾರು 3 ರಿಂದ 4 ಗಂಟೆ ಮಧ್ಯೆ ಗ್ಯಾಸ್ ಟ್ಯಾಂಕರ್ ಒಂದು ರಸ್ತೆ ಮಧ್ಯಕ್ಕೆ ಉರುಳಿಬಿದ್ದ ಘಟನೆ ನಡೆದಿದೆ. ಈ ಪರಿಣಾಮ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಘಟನೆಯಲ್ಲಿ ಗ್ಯಾಸ್ ಲೀಕ್ ಆಗದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಅದರೂ ಮುಂಜಾಗರೂಕತಾ ಕ್ರಮವಾಗಿ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ....
ಬಂಟ್ವಾಳ

ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ಉದ್ಘಾಟನೆ; ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶನಿವಾರ ಕರ್ನಾಟಕ ಕೇರಳದ ಗಡಿಭಾಗ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಲಂಟೈನ್ ಡಿಸೋಜ, ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿ, ಕನ್ಯಾನ ಭಾಗದ ಚುನಾಯಿತ ಗ್ರಾಮ ಪಂಚಾಯಿತ್ ಸದಸ್ಯರು ಮತ್ತು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು....
ಬಂಟ್ವಾಳ

ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರ ಬ್ರಹ್ಮಕಲಶೋತ್ಸವದ ಇಂದು ಪೂರ್ವಭಾವಿ ಸಭೆ-ಕಹಳೆ ನ್ಯೂಸ್

ಬಂಟ್ವಾಳ : ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಈಗಾಗಲೇ ದೇವಿಯ ಗರ್ಭಗುಡಿ, ಜುಮಾದಿ ಬಂಟ ದೈವದ ಗುಡಿ, ನಾಗ ದೇವರ ಪಂಚಸಾನಿಧ್ಯ ಸಹಿತ ಹಲವಾರು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿದೆ. ಹಾಗೂ ಬ್ರಹ್ಮಕಲಶೋತ್ಸವದಕ್ಕೆ ದಿನ ನಿಗದಿಯಾಗಿದ್ದು, ಈ ಕುರಿತು ಸಮಾಲೋಚನಾ ಸಭೆ ಇಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ. ಈ ಸಭೆಗೆ ಊರ ಪರವೂರ ಹಲವಾರು ಗಣ್ಯರು...
ಬಂಟ್ವಾಳ

ಬಂಟ್ವಾಳ ತಾಲೂಕಿನ ಹಲವೆಡೆ ಇಂದು ಪಲ್ಸ್ ಪೋಲಿಯೋ ಅಭಿಯಾನ –ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ವೈದ್ಯಾಧಿಕಾರಿ ಡಾ. ದೀಪಾ ಪ್ರಭು ಅವರು ತಾಲೂಕಿನಲ್ಲಿ ಇಂದಿನಿಂದ ಸವಜಾತ ಶಿಶುವಿನಿಂದ 5 ವರ್ಷ ಒಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವ ಸಿದ್ಧತೆ ಆರೋಗ್ಯ ಇಲಾಖೆಯಿಂದ ನಡೆದಿದೆ ಎಂದು ಹೇಳಿದ್ದಾರೆ. ಅಲ್ಲದೇ ತಾಲೂಕಿನಲ್ಲಿ ಒಟ್ಟು 30.352 ಮಕ್ಕಳಿಗೆ ಲಸಿಕೆ ಹಾಕಲು 190 ಬೂತುಗಳನ್ನು ಸಿದ್ಧತೆ ಮಾಡಲಾಗಿದ್ದು, ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು. ಹಾಗೂ ಪ್ರಯಾಣ ಬೆಳೆಸುವ ಸಾರ್ವಜನಿಕರಿಗೆ ಮತ್ತಷ್ಟು ಸಹಕಾರ ಆಗುವಂತೆ ಪುದು, ಬಿ.ಸಿ.ರೋಡ್...
ಬಂಟ್ವಾಳ

ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡಿಕರೆ ಕಂಬಳಕ್ಕೆ ಇಂದು ಗಣ್ಯರ ಮೂಲಕ ಅದ್ಧೂರಿ ಚಾಲನೆ-ಕಹಳೆ ನ್ಯೂಸ್

ಬಂಟ್ವಾಳ: ಸಿದ್ಧಕಟ್ಟೆ ಸಮೀಪದ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ‘ವೀರ-ವಿಕ್ರಮ' ಜೋಡುಕರೆ ಬಯಲು ಕಂಬಳ ಇಂದು ಚಾಲನೆ ಪಡೆದಿದ್ದು, ಈ ಬಾರಿ ಜಿಲ್ಲಾ ಕಂಬಳ ಸಮಿತಿ ಪ್ರಕಟಿಸಿದ ಒಟ್ಟು ೧೦ ಕಂಬಳ ಕೂಟಗಳ ಪೈಕಿ ಇದು ಪ್ರಥಮ ಕಂಬಳ. ಶ್ರೀ ಮಹಿಷಮರ್ದಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟಕ್ಕೆ ಬೆಳಿಗ್ಗೆ ೭ ಗಂಟೆಗೆ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಚಾಲನೆ ನೀಡಿದ್ದು, ಪ್ರಧಾನ ಅರ್ಚಕ ಪ್ರಕಾಶ್...
ಬಂಟ್ವಾಳ

ಬಂಟ್ವಾಳ ತಾಲೂಕು ಕುಲಾಲ ಸುಧಾಕರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾಕರ ಸಂಘ (ರಿ) ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ಕಾರ್ಯಕ್ರಮ ಬಿ.ಸಿ.ರೋಡಿನ ಪೊಸಳ್ಳಿಯಲ್ಲಿರುವ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಜಯಂತಿ ಗಂಗಾಧರ್ ಅಧ್ಯಕ್ಷತೆಯನ್ನು ವಹಿಸಿದ್ದು, ಸುಮಾರು 48 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 18 ವಿದ್ಯಾರ್ಥಿಗಳಿಗೆ ನಿರಂತರ ವಿದ್ಯಾರ್ಥಿ ವೇತನ, 9 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಇನ್ನು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಮೂಲ್ಯರ...
1 132 133 134 135 136 147
Page 134 of 147