ಬಂಟ್ವಾಳ : ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ -ಕಹಳೆ ನ್ಯೂಸ್
ಕಳೆದ ಇಪ್ಪತ್ತೈದು ವರ್ಷಗಳಿಗಿಂತಲೂ ಅಧಿಕ ಕಾಲ ಪತ್ರಕರ್ತರಾಗಿ ಬಂಟ್ವಾಳದಿಂದ ಕರ್ತವ್ಯದಲ್ಲಿದ್ದ ಹಿರಿಯ ಪತ್ರಕರ್ತ ಕಲ್ಲಡ್ಕ ಸಮೀಪ ಅಮ್ಟೂರು ಪೂವಳ ನಿವಾಸಿ ಸೂರ್ಯನಾರಾಯಣ ರಾವ್ ಪೂವಳ (51) ಅಲ್ಪಕಾಲದ ಅಸೌಖ್ಯದ ಬಳಿಕ ಶುಕ್ರವಾರ ಬೆಳಗಿನ ಜಾವ ತನ್ನ ಮನೆಯಲ್ಲಿ ನಿಧನ ಹೊಂದಿದರು. ತಾಯಿ, ಪತ್ನಿ ಸಹಿತ ಅಪಾರ ಬಂಧು, ಮಿತ್ರರನ್ನು ಅವರು ಅಗಲಿದ್ದಾರೆ. ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದರು. ಮುಂಗಾರು...