Breaking News : ಬಂಟ್ವಾಳದಲ್ಲಿ ಕರ್ತವ್ಯನಿರತ ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡಸಿದ ಅಬ್ದುಲ್ ಸಲಾಂ – ಕಹಳೆ ನ್ಯೂಸ್
ಬಂಟ್ವಾಳ : ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದ್ದ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೋಲೀಸರ ಮೇಲೆಯೇ ಹಲ್ಲೆ ನಡೆದ ಪ್ರಕರಣ ವರದಿಯಾಗಿದೆ. ಸಲಾಂ ಎಂಬ ವ್ಯಕ್ತಿ ಮಾರಕಾಯುಧದಿಂದ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಏನಿದು ಘಟನೆ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣಾ...