Recent Posts

Monday, January 20, 2025

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಉಮೇಶ್ ಗೌಡ ನಿಧನ-ಕಹಳೆ ನ್ಯೂಸ್

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ರವರು ಅನಾರೋಗ್ಯದಿಂದ ನಿಧನರಾದರು. ಕೃಷಿಕರಾಗಿರುವ ಉಮೇಶ್ ರವರಿಗೆ ಸೆ.೨೬ರಂದು ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರೂ ಅಲ್ಲಿ ಅವರು ಚಿಕಿತ್ಸೆ ಸ್ಪಂಧಿಸದೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭಿಸಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ರಾಯಿ ರಾಕೇಶ್ ಜತ್ತನ್ ಇವರ ಮನೆಯಲ್ಲಿ ಜರಾಗಿದ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13 ನೇ ಮಾಲಿಕೆ – ಕಹಳೆ ನ್ಯೂಸ್

ಬಂಟ್ವಾಳ : ತ್ರಿಭಾಷಾ ಸೂತ್ರದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ ಎಂದು ಪ್ರತಿಪಾದಿಸಿ, ಮಹಿಳೆಯರಿಗೆ ಕರಕುಶಲ ಸ್ವಾವಲಂಬಿ ಬದುಕು ಕಟ್ಟುವಲ್ಲಿ ಉತ್ತೇಜನ ನೀಡಿದ ನಾರಾಯಣ ಗುರುಗಳು ಜಗದ ಪರಿವರ್ತನೆಯ ಹರಿಕಾರರು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರಾ ವಿವರಿಸಿದರು. ಅವರು ಬಂಟ್ವಾಳ ತಾಲೂಕಿನ ರಾಯಿ ರಾಕೇಶ್ ಜತ್ತನ್ ಇವರ ಮನೆಯಲ್ಲಿ ಜರಾಗಿದ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13 ನೇ ಮಾಲಿಕೆಯಲ್ಲಿ ಮಾತನಾಡಿದರು ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೊಡಂಕಾಪುವಿನ ಪ್ರೌಢಶಾಲಾ ಸಭಾಂಗಣದಲ್ಲಿ ಸೆ.29ರಂದು ನಡೆಯುವ ಪೂರ್ವಭಾವಿ ಸಭೆಯ ಕುರಿತು ನಡೆದ ಪತ್ರಿಕಾಗೋಷ್ಟಿ – ಕಹಳೆ ನ್ಯೂಸ್

ಬಂಟ್ವಾಳ: ಮೊಡಂಕಾಪುವಿನಲ್ಲಿರುವ ದೀಪಿಕಾ ಪ್ರೌಢಶಾಲೆಗೆ 60 ವರ್ಷಗಳಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೊಡಂಕಾಪು ವಿದ್ಯಾಭಿವೃದ್ಧಿ ಸಮಿತಿ ಸೆ.29ರಂದು ಭಾನುವಾರ 10.30ಕ್ಕೆ ಪ್ರೌಢಶಾಲಾ ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿಗಳ, ಪೋಷಕರ, ನಿವೃತ್ತ ಶಿಕ್ಷಕರ ಹಾಗೂ ಸಮಾಜದ ಎಲ್ಲರನ್ನೂ ಸೇರಿಸಿಕೊಂಡು ಪೂರ್ವಭಾವಿ ಸಭೆಯನ್ನು ಆಯೋಜಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರೌಢಶಾಲೆಯ ಸಂಚಾಲಕ ಹಾಗೂ ವಿದ್ಯಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಂ.ಫಾ.ವಲೇರಿಯನ್ ಡಿಸೋಜ ತಿಳಿಸಿದರು. 60ರ ಸಂಭ್ರಮಾಚರಣೆ, ಹಿಂದೆ ಮಾಡಿದ ಸಾಧನೆ ಜೊತೆ, ವಿದ್ಯಾಸಂಸ್ಥೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು,...
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಇನ್ನಿಲ್ಲ -ಕಹಳೆ ನ್ಯೂಸ್

ಬಂಟ್ವಾಳ : ಪಾಣೆಮಂಗಳೂರು ನಿವಾಸಿ, ಜ್ಯೊತಿ ಬೀಡಿ ಸಂಸ್ಥೆ ಮಾಲೀಕ, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘ ದ ಅಧ್ಯಕ್ಷ ಬಿ.ರಘು ಸಪಲ್ಯ(76) ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರು ಇದ್ದಾರೆ. ಆರ್ ಎಸ್ ಎಸ್ ಹಿರಿಯ ಕಾರ್ಯ ಕರ್ತರಾಗಿ, ವೃತ್ತಿಯಲ್ಲಿ ಟೈಲರ್ ಆಗಿ, ತುರ್ತು ಪರಿಸ್ಥಿತಿ ವಿರುದ್ದ ಹೋರಾಟಗಾರರಾಗಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ, ನೂರಾರು ಮಂದಿಗೆ ಉದ್ಯೋಗದಾತರಾಗಿ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 23ನೇ ವರ್ಷದ ನವದಂಪತಿ ಸಮಾವೇಶ -ಕಹಳೆ ನ್ಯೂಸ್

ಕಲ್ಲಡ್ಕ :ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ದಂಪತಿಗಳಿಗೆ ಆಯೋಜಿಸಿದ ಕಾರ್ಯಕ್ರಮ ನವದಂಪತಿ ಸಮಾವೇಶವು ತಳಿರು ತೋರಣಗಳಿಂದ ಅಲಂಕೃತಗೊಂಡ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಕುಟುಂಬ ಪ್ರಭೋದನ್ ಸಹಸಂಯೋಜಕರಾದ ಶ್ರೀ ಸುಬ್ರಾಯ ನಂದೋಡಿ ಮತ್ತು ಶ್ರೀಮತಿ ಜಯಲಕ್ಷ್ಮೀ ನಂದೋಡಿ ಹಿರಿಯ ದಂಪತಿಗಳಾಗಿ ಉಪಸ್ಥಿತರಿದ್ದು, ಪ್ರಭು ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ ಮಾಡಿ ಪುಷ್ಪಾರ್ಚನೆಗೈಯ್ಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ತಮ್ಮ ಜೀವನದ ಅನುಭವನಗಳನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜುನಲ್ಲಿ ಸ್ವಚ್ಛತಾ ಹೀ ಸೇವಾ 2024 ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ : ದಿನಾಂಕ 26-09-2024 ರಂದು ಶ್ರೀರಾಮ ಪ್ರಥಮದರ್ಜೆ ಕಾಲೇಜು ಕಲ್ಲಡ್ಕ ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆದಾಯ ತೆರಿಗೆ ಇಲಾಖೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ 2024 ಕಾರ್ಯಕ್ರಮ ಸಾಧನಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಕುರಿತಾಗಿ ಮಾತನಾಡಿದ ಆದಾಯ ತೆರಿಗೆ ಇಲಾಖೆಯ ನಿರ್ದೇಶಕ ಶ್ರೀ ಸ್ವರೂಪ್ ಮಾರ್ನವ ಇವರು ಕಾಲೇಜಿನ ವಾತಾವರಣ ಮತ್ತು ವಿದ್ಯಾರ್ಥಿಗಳ ಶಿಸ್ತಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಚಿತ್ವ ಎಂಬ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಸಿರೋಡು – ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಅಂಡರ್ ಪಾಸ್ ನ ಮೇಲಿನಿಂದ ಸರ್ವೀಸ್ ರಸ್ತೆಗೆ ಬೀಳುತ್ತಿರುವ ಬೆಂಕಿಯುಂಡೆಗಳು – ಕಹಳೆ ನ್ಯೂಸ್

ಬಂಟ್ವಾಳ: ಬಿಸಿರೋಡು - ಅಡ್ಡಹೊಳೆವರೆಗೆ ನಡೆಯುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಮೆಲ್ಕಾರ್ ನಲ್ಲಿ ಅಂಡರ್ ಪಾಸ್ ನ ಮೇಲಿನಿಂದ ಸರ್ವೀಸ್ ರಸ್ತೆಗೆ ಬೆಂಕಿಯುಂಡೆಗಳು ಬೀಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದ್ದು, ಅಜಾಗರೂಕತೆಯಿಂದ ಮಾಡುವ ಕಾಮಗಾರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿವೆ. ಮೆಲ್ಕಾರ್ ನಲ್ಲಿ ಅಂಡರ್ ಪಾಸ್ ಕಾಮಗಾರಿ ಭರದಿಂದ ಸಾಗುತ್ತಿದ್ದು, ರಸ್ತೆಯ ಎರಡು ಸೈಡ್ ಗಳಿಗೆ ರಕ್ಷಣಾ ಬೇಲಿ ಅಂದರೆ ತಡೆ ಬೇಲಿಯನ್ನು ನಿರ್ಮಿಸಲು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಂಗಳೂರು ತಾಲೂಕು ಕೊಳವೂರು ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ – ಕಹಳೆ ನ್ಯೂಸ್

ಅಪ್ರತಿಮ ಸಂಘಟಕ, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನವಾದ ಇಂದು ಭಾರತೀಯ ಜನತಾ ಪಾರ್ಟಿ ಕೊಳವೂರು ಶಕ್ತಿ ಕೇಂದ್ರದ ವತಿಯಿಂದ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಎಡಪದವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹಾಬಲ ಸಾಲ್ಯಾನ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಕೊಳವೂರು ಶಕ್ತಿ ಕೇಂದ್ರ ಅಧ್ಯಕ್ಷರಾದ ಸತೀಶ್...
1 19 20 21 22 23 155
Page 21 of 155