ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಹಾಗೂ ವಾರ್ಷಿಕ ಸಂಚಿಕೆ ರಾಮಧ್ವನಿ ಬಿಡುಗಡೆ – ಕಹಳೆ ನ್ಯೂಸ್
ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಅತಿಥಿಗಳಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ನಂತರ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಇವರು ಚುನಾವಣಾ ವರದಿವಾಚನ ನಡೆಸಿದರು. ಶ್ರೀರಾಮನ ಮೂರ್ತಿಗೆ ಪುಷ್ಪಾರ್ಚನೆ ಹಾಗೂ ಕ್ಷೀರಾಭಿಷೇಕ ಮಾಡುವುದರ ಮೂಲಕ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕ್ಯಾ. ಶ್ರೀ ಬ್ರಿಜೇಶ್ ಚೌಟ ಅವರು ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲ ಕೃಷ್ಣ...