Recent Posts

Monday, November 25, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಆಡಳಿತ ಸೌಧದಲ್ಲಿ ತಾಲೂಕು ಕಚೇರಿಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ – ಕಹಳೆ ನ್ಯೂಸ್

ಬಂಟ್ವಾಳ : ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಬಂಟ್ವಾಳ ಆಡಳಿತ ಸೌಧದಲ್ಲಿ ತಾಲೂಕು ಕಚೇರಿಯ ಎಲ್ಲಾ ಸಿಬ್ಬಂದಿಗಳಿಗೆ ತಹಶೀಲ್ದಾರ್ ಡಿ.ಅರ್ಚನಾ ಭಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಸಮಾಜದಲ್ಲಿ ಬಾಲಕಾರ್ಮಿಕರು ಅಥವಾ ಕಿಶೋರ ಕಾರ್ಮಿಕರು ಕಂಡು ಬಂದಲ್ಲಿ ಅವರ ರಕ್ಷಣೆಗೆ ಮುಂದಾಗಬೇಕು, ಮಕ್ಕಳನ್ನು ತೊಡಗಿಸಿಕೊಂಡವರು ಮತ್ತು ಮಕ್ಕಳ ಪೋಷಕರಿಗೆ ಅಗತ್ಯ ತಿಳುವಳಿಕೆ ನೀಡಿ ಮಕ್ಕಳನ್ನು ರಕ್ಷಿಸಬೇಕು ಎಂದು ತಿಳಿವಳಿಕೆ ನೀಡಿದರಲ್ಲದೆ, ಮಕ್ಕಳ ರಕ್ಷಣೆ ಕುರಿತಾಗಿ ಎಲ್ಲರೂ ಜಾಗೃತರಾಗಿರಬೇಕೆಂದರು. ಉಪತಹಶೀಲ್ದಾರರಾದ ದಿವಾಕರ್,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯೊಂದರ ಕಂಪೌಂಡ್ ಜರಿದು ಬಿದ್ದು ಪಾದಾಚಾರಿಗಳಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ಮನೆಯೊಂದರ ಕಂಪೌಂಡ್ ಜರಿದು ಬಿದ್ದು ಪಾದಾಚಾರಿಗಳಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುರಸಭಾ ವ್ಯಾಪ್ತಿಯ ಗುಡ್ಡೆಯಂಗಡಿ ಎಂಬಲ್ಲಿ ಜೂನ್ 11 ರಂದು ಮಧ್ಯ ರಾತ್ರಿ ವೇಳೆ ನಡೆದಿದೆ. ಗುಡ್ಡೆಯಂಗಡಿ ನಿವಾಸಿಗಳಾದ ಮಹಮ್ಮದ್ ಸಾಧಿಕ್, ಮಹಮ್ಮದ್ ರಫೀಕ್ ಎಂಬವರು ಗಾಯಗೊಂಡವರಾಗಿದ್ದು, ಇಬ್ಬರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಗಾಗಿ ದಾಖಲಾಗಿದ್ದಾರೆ. ಅದರಲ್ಲಿ ಮಹಮ್ಮದ್ ಸಾಧಿಕ್ ಅವರಿಗೆ ಗಂಭೀರವಾಗಿ ಗಾಯವಾಗಿದ್ದು ಈಗಾಗಲೇ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಗುಡ್ಡೆಯಂಗಡಿ ಅಬ್ದುಲ್ ರಹಮಾನ್ ಎಂಬವರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕಕ್ಕೆ ಬೇಟಿ ನೀಡಿ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ – ಕಹಳೆ ನ್ಯೂಸ್

ಬಂಟ್ವಾಳ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಂದು ಬೆಳಿಗ್ಗೆ ಕಲ್ಲಡ್ಕ ಕ್ಕೆ ಬೇಟಿ ನೀಡಿ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು, ಗುತ್ತಿಗೆದಾರರಿಗೆ ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ. ಕಲ್ಲಡ್ಕ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ ಮಾಡುವ ಕಾಮಗಾರಿ ಭರದಿಂದ ಸಾಗುತ್ತಿದೆಯಾದರೂ ವಾಹನ ಸಂಚಾರಕ್ಕೆ ಅನುಕೂಲವಾದ ಸರ್ವೀಸ್ ರಸ್ತೆ ನಿರ್ಮಿಸದೆ ವಾಹನ ಸವಾರರು ಕೆಸರು ಮಿಶ್ರಿತ ಹೊಂಡಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಇದೀಗ ಮಳೆಗಾಲ ಆರಂಭವಾಗಿದ್ದು,ವಾಹನ ಸವಾರರು ಬಹಳಷ್ಟುತೊಂದರೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮನೆಗೆ ನುಗ್ಗಿ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ : ಹಾಸನ ಮೂಲದ ವ್ಯಕ್ತಿ ಬಂಧನ – ಕಹಳೆ ನ್ಯೂಸ್

ಬಂಟ್ವಾಳ: ಹಾಸನ ಮೂಲದ ವ್ಯಕ್ಯಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್11 ರಂದು ಕಲ್ಲಡ್ಕ ದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಲ್ಲಡ್ಕ ಸಮೀಪದ ಬೊಂಡಾಲ ಎಂಬಲ್ಲಿನ ಸಂತ್ರಸ್ತ ಮಹಿಳೆ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯ ಸ್ವಂತ ಊರು ಹಾಸನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೆರ್ಲ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ) ದೇವಸ್ಥಾನದಲ್ಲಿ ನಡೆದ 1801 ನೇ ಮದ್ಯವರ್ಜನ ಶಿಬಿರ – ಕಹಳೆ ನ್ಯೂಸ್

ಪೆರ್ಲ : ಮಧ್ಯ ವ್ಯಸನ ಬಿಟ್ಟು ಹೊಸ ಜೀವನ ಕಟ್ಟಿಕೊಳ್ಳಿ, ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಎಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಇಡಿಯಡ್ಕದ ಮುಖ್ಯ ಅರ್ಚಕರಾದ ಕೃಷ್ಣರಾಜ್ ಪುಣಿಂಚಿತ್ತಾಯ ಶುಭ ಹಾರೈಸಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಮಂಜೇಶ್ವರ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಮಂಜೇಶ್ವರ ತಾಲೂಕು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುಕ್ಕೆರೋಡಿ ಅಡಿಕೆ ಸುಲಿಯುವ ಫ್ಯಾಕ್ಟರಿಯಿಂದ ಸಮಸ್ಯೆ : ಇವತ್ತೂರು ಗ್ರಾ.ಪಂ. ನಿರ್ಣಯದ ವಿರುದ್ಧ ಪ್ರತಿಭಟನೆ- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಕುಕ್ಕೆರೋಡಿ ಎಂಬಲ್ಲಿ ನಡೆಸುತ್ತಿರುವ ಪರವಾನಿಗೆ ಅವಧಿ ಮೀರಿದ ಯಾಂತ್ರೀಕೃತ ಅಡಿಕೆ ಸುಲಿಯುವ ಘಟಕವನ್ನು ಸ್ಥಗಿತಗೊಳಿಸುವಂತೆ ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದರೂ ಘಟಕವನ್ನು ಯಥಾಸ್ಥಿತಿ ಮುಂದುವರೆಸಲು ಗ್ರಾ.ಪಂ.ಆಡಳಿತ ಕೈಗೊಂಡ ನಿರ್ಣಯದ ವಿರುದ್ಧ ಗ್ರಾಮಸ್ಥರು ಗ್ರಾ.ಪಂ.ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇರ್ವತ್ತೂರು ಗ್ರಾ.ಪಂ.ನ ಕುಕ್ಕೆರೋಡಿ ವ್ಯಾಪ್ತಿಯ ಸದಸ್ಯ ಸುಧಿ0ದ್ರ ಶೆಟ್ಟಿ ಮತ್ತು ಸ್ಥಳೀಯ ಪ್ರಮುಖರಾದ ಜಯಚಂದ್ರ ಪೂಜಾರಿ ಅವರ ನೇತೃತ್ವದಲ್ಲಿ ಪ್ರತಿಭಟನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ಹಸ್ತಾಂತರ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರೀ )ವಿಟ್ಲ ಇದರ ಸಾಲೆತ್ತೂರ್ ವಲಯದ ಸಜಿಪ ಮೂಡ ಎ ಕಾರ್ಯಕ್ಷೇತ್ರದ ಮಿತ್ತಮಜಲು ಬಾಗಿ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್, ನಂದಾವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮೋಹನ್ ದಾಸ್ ಪೂಜಾರಿ,ಸಾಲೆತ್ತೂರ್ ವಲಯ ಮೇಲ್ವಿಚಾರಕರಾಕಿ ಸವಿತಾ,ಸಜಿಪ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಾಂಗ್ರೆಸ್ ಬೆಂಬಲಿತ ಮತೀಯ ಶಕ್ತಿಗಳ ಅಟ್ಟಹಾಸಕ್ಕೆ ಕಡಿವಾಣ ಯಾವಾಗ..? : ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ : ಕ್ಯಾಪ್ಟನ್ ಬ್ರಿಜೇಶ್ ಚೌಟ- ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪ್ರತಿಕ್ರಯಿಸಿ "ಜಿಲ್ಲೆಯಲ್ಲಿ ಇದೇ ಮಾದರಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದು ರಾಜ್ಯ ಸರಕಾರ ಏನು ಮಾಡುತ್ತಿದೆ" ಎಂದು ಪ್ರಶ್ನಿಸಿದ್ದಾರೆ. ತಮ್ಮ ಪಕ್ಷದ...
1 38 39 40 41 42 147
Page 40 of 147