ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಪತ್ತೆ-ಕಹಳೆ ನ್ಯೂಸ್
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಆತನನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್...