Tuesday, November 26, 2024

ಬಂಟ್ವಾಳ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ವಿಟ್ಲ – ಹಣದ ವಿಚಾರದಲ್ಲಿ ಗಲಾಟೆ ; ಗಣೇಶ್ ಎಂಬ ಯುವಕನಿಗೆ ಮಾರಕಾಯುಧದಿಂದ ಆಲಿ ಎಂಬುವವ ದಾಳಿ ನಡೆಸಿದ ಆರೋಪ – ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ವಿಟ್ಲ : ವ್ಯಕ್ತಿಯೊಬ್ಬರಿಗೆ ಹಣದ ವಿಚಾರವಾಗಿ ಮಾರಕಾಯುಧದಿಂದ ದಾಳಿ ನಡೆಸಿದ ಘಟನೆ ಕೇಪು ಗ್ರಾಮದ ಎದುರುಕಜೆ ಎಂಬಲ್ಲಿ ನಡೆದಿದೆ. ಎದುರುಕಜೆ ನಿವಾಸಿ ಆಲಿ ಎಂಬಾತನು ಗಣೇಶ ಎಂಬವರಿಗೆ ಮಾರಕಾಯುಧದಿಂದ ದಾಳಿ ನಡೆಸಿದ್ದಾನೆ. ಆಲಿಯು ಸ್ಥಳೀಯರೊಂದಿಗೆ ಹಣಕಾಸಿನ ವಿಚಾರವಾಗಿ ಸುಮಾರು ಜನರಿಗೆ ಪಂಗನಾಮ ಹಾಕಿದ್ದಾನೆ. ಅಲ್ಲದೆ ಈತನ ಹಣಕಾಸಿನ ವಿಚಾರದಲ್ಲಿ ವಿಟ್ಲ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿರುತ್ತದೆ. ಗಣೇಶ ಎಂಬವರೊಂದಿಗೆ ಆಲಿಯು ವ್ಯವಹಾರ ಹೊಂದಿದ್ದು, ಗಣೇಶರವರಿಗೆ ನಾಳೆ ನಡೆಯುವ ಶುಭ ಕಾರ್ಯದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ – ಕಹಳೆ ನ್ಯೂಸ್

ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ಬಂಟ್ವಾಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಬಂಟ್ವಾಳ ತಾಲೂಕಿನ ಸಂಗಬೆಟ್ಟು, ಕುಕ್ಕಿಪಾಡಿ, ಇರ್ವತ್ತೂರು, ಬಡಗಕಜೆಕಾರು ಗ್ರಾಮ ಪಂಚಾಯತಿ ಹಾಗೂ ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ನೈನಾಡು ಪರಿಸರದಲ್ಲಿ ಮತದಾನ ಜಾಗೃತಿ ಅಭಿಯಾನ ಹಾಗೂ ಜಾಥಾ ನಡೆಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಕಾಂಬ್ಲೆ ಮಾತನಾಡಿ, ಮತದಾರರಲ್ಲಿ ಅರಿವು ಮೂಡಿಸುವ ಸಲುವಾಗಿ ಚುನಾವಣಾ ಆಯೋಗ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರಜಾಪ್ರಭುತ್ವದ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿದ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಅವರ ಆಶೀರ್ವಾದ ಪಡೆದರು....
ದಕ್ಷಿಣ ಕನ್ನಡಬಂಟ್ವಾಳ

ಮೂರು ತಿಂಗಳು ನಡೆದ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ  :  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರೀ ) ಬಂಟ್ವಾಳ ಇದರ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ,ಬಂಟ್ವಾಳ ವಲಯದ ಮೂಡ ನಡುಗೊಡು ನವಜ್ಯೋತಿ ಜ್ಞಾನ ವಿಕಾಸ ಕೇಂದ್ರದಡಿಯಲ್ಲಿ ಮೂರು ತಿಂಗಳ ಉಚಿತ ಟೈಲರಿಂಗ್ ತರಬೇತಿ ನಡೆಸಿದ್ದು ಇದರ ಸಮಾರೋಪ ಸಮಾರಂಭ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಪೂವಪ್ಪ ಮೆಂಡನ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲ್ಲೂಕಿನ ಯೋಜನಾಧಿಕಾರಿ ಮಾಧವ...
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(15) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಮಂಡಲದ ಕಾರ್ಯಕರ್ತರ ಸಮಾವೇಶ : “ಯುವ ಸಮುದಾಯ ಸಂಪೂರ್ಣವಾಗಿ ಪ್ರಧಾನಿಮೋದಿಯವರ ಪರವಾಗಿದ್ದು, ಗೆಲುವು ನಿಶ್ವಿತ” : ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಯುವ ಸಮುದಾಯ ಸಂಪೂರ್ಣವಾಗಿ ಪ್ರಧಾನಿಮೋದಿಯವರ ಪರವಾಗಿದ್ದು, ಗೆಲುವು ನಿಶ್ವಿತವಾಗಿದ್ದು, ಗೆಲುವಿನ ಅಂತರವನ್ನು ಹೆಚ್ಚು ಮಾಡಲು ಬಂಟ್ವಾಳದ ಕಾರ್ಯಕರ್ತರು ಶಕ್ತಿ ನೀಡುತ್ತಾರೆ ಎಂಬ ನಂಬಿಕೆಯಿದ್ದು, ಮುಂದಿನ ದಿನಗಳು ಬಿಜೆಪಿಯ ದಿನಗಳಾಗುತ್ತದೆ, ಈ ಬಗ್ಗೆ ಯಾವುದೇ ಸಂಶಯಬೇಡ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು . ಅವರು ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಮಂಡಲದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಪ್ರತಿಯೊಂದು ಮತವನ್ನು ಬಿಜೆಪಿಯ ಮತವಾಗಿ ಮಾರ್ಪಾಡು ಮಾಡುವುದರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ಪೊಯಿತಾಜೆ ಎಂಬಲ್ಲಿ ನಡೆದಿದೆ. ನರಿಕೊಂಬು ಗ್ರಾಮದ ಬೀರಕೋಡಿ ನಿವಾಸಿ ಯೋಗೀಶ್ ಪೂಜಾರಿ ಅವರ ಪುತ್ರ ಆನುಶ್ (20) ಮೃತಪಟ್ಟ ಯುವಕ. ಆದಿತ್ಯವಾರ ರಜಾದಿನವಾದ ಕಾರಣ ಅನುಶ್ ಸೇರಿ ಒಟ್ಟು 4 ಮಂದಿ ತಮ್ಮ ಮತ್ತು ಸ್ನೇಹಿತರ ಜೊತೆಯಲ್ಲಿ ನದಿಗೆ ಈಜಲು ತೆರಳಿದ್ದರು. ತಮ್ಮ ರೂಪೇಶ್ ಸ್ನೇಹಿತರಾದ ಕಿಸಾನ್ , ಅನೀಶ್ ಜೊತೆಯಲ್ಲಿ ತೆರಳಿದ್ದ....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

6 ದಿನಗಳ ಹಿಂದೆ ಕಾಣೆಯಾಗಿದ್ದ ಸರಕಾರಿ ಅಧಿಕಾರಿ ಪಟ್ರಮೆ ನದಿಯಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ: ಕಳೆದ ಆರು ದಿನಗಳ ಹಿಂದೆ ಕಾಣೆಯಾಗಿದ್ದ ಸರಕಾರಿ ಆದಿಕಾರಿಯೋರ್ವನ ಮೃತದೇಹ ಇಂದು ಸಂಜೆ ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ. ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿ ಲಕ್ಮೀನಾರಾಯಣ ಅವರು ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಬಗ್ಗೆ ಮಾ.27. ರಂದು ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿದ್ದ ಇವರು ಮಾ.27 ರಂದು ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದವರು ಪೋನ್...
1 56 57 58 59 60 147
Page 58 of 147