Wednesday, November 27, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್- ಕಹಳೆ ನ್ಯೂಸ್

ಬಂಟ್ವಾಳ : ಬಿಸಿರೋಡಿನಿಂದ ಅಡ್ಡಹೊಳೆವರೆಗೆ ನಡೆಯುವ ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ದೂರನ್ನು ಆಲಿಸಿದ ಅವರು ಕೆಲವೊಂದು ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈತ ಸಂಘ ಹಾಗೂ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬೆಳಿಗ್ಗೆ ಬಿಸಿರೋಡಿನಿಂದ ಗುಂಡ್ಯವರೆಗೆ ವೀಕ್ಷಿಸಲು ಅಧಿಕಾರಿಗಳ ಜೊತೆ ತೆರಳಿದರು. ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣ ಗುರುವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯನ್ನು ವೀಕ್ಷಣೆ ನಡೆಸಿದ ಬಳಿಕ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಅಡ್ಯನಡ್ಕದಲ್ಲಿ ಹೈಡ್ರಾಮ…! ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟನೆಂದು ಯುವಕನ ಮನೆ ಮುಂದೆ ಯುವತಿಯ ಪ್ರತಿಭಟನೆ – ಕಹಳೆ ನ್ಯೂಸ್

ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕೂತ ವಿಚಿತ್ರ ಘಟನೆ ನಡೆದಿದೆ. ಯುವತಿಯನ್ನು ಮನವೂಲಿಸಲು ವಿಫಲರಾದ ವಿಟ್ಲ ಪೆÇಲೀಸರು ರಾತ್ರಿ ಆಕೆಯನ್ನು ಠಾಣೆಗೆ ಕರೆದೊಯಿದ್ದಾರೆ. ಉತ್ತರ ಭಾರತದ ಜಲಂದರ್ ಮೂಲದ ಯುವತಿ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮ ಬೆಳೆದು, ಹಣಕಾಸಿನ ವ್ಯವಹಾರಗಳೂ ನಡೆದಿದೆ ಎನ್ನಲಾಗಿದೆ. ಮಂಗಳವಾರ...
ಕ್ರೈಮ್ಬಂಟ್ವಾಳಸುದ್ದಿ

ಅಕ್ರಮ ಮರಳುಗಾರಿಕೆ ಪ್ರಕರಣ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 18 ಮಂದಿ ಆರೋಪಿಗಳನ್ನ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೋಲೀಸರು – ಕಹಳೆ ನ್ಯೂಸ್

ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಬಿಡುಗಡೆಗೊಂಡ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 247/2017 ಕಲಂ 379 & 34 IPC ಮಾನ್ಯ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ.ಸಿ ನಂಬ್ರ 1266/2018 ರ ಆರೋಪಿತರು ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ಬಲಿಯಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಿದ ಸಂವಿಧಾನ ಜಾಗೃತಿ ಜಾಥ – ಕಹಳೆ ನ್ಯೂಸ್

ಸಂವಿಧಾನ ಜಾಗೃತಿ ಜಾಥ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಿತು. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಂತೋμï ಕುಮಾರ್ ಜಾಥವನ್ನು ಉದ್ಘಾಟಿಸಿದರು. ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಶ್ರೀ ಮತಿ ಬಿಂದಿಯೋ ಇವರು ಸಂವಿಧಾನ ಪೀಠಿಕೆ ಓದಿದರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ .ಮೋಹಿನಿ ಹಾಗೂ ಪಿಡಿಒ ಹರೀಶ್. ಪಂಚಾಯತ್ ಸದಸ್ಯರು .ಅಂಗನವಾಡಿ ಕಾರ್ಯಕರ್ತೆ. ಆಶಾ ಕಾರ್ಯಕರ್ತರು ಸಿಎಚ್ ಓ ಸಾರ್ವಜನಿಕರು ಉಪಸ್ಥಿತರಿದ್ದು, ಜಾಗೃತಿ ಜಾಥವನ್ನು ಯಶಸ್ವಿಗೊಳಿಸಿದರು....
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಬಾರೆಬೆಟ್ಟುವಿನ ಶ್ರೀಮಲರಾಯಿ ಮಂಟಮೆ ಕಾಲಾವಧಿ ಜಾತ್ರೆ ಪ್ರಯುಕ್ತ ಪುತ್ತೂರು ಸಾಯಿ ಕಲಾ ಯಕ್ಷ ಬಳಗದವರಿಂದ ನಡೆದ “ಕೊಲ್ಲೂರು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕೊಳ್ನಾಡು ಬಾರೆಬೆಟ್ಟುವಿನ ಶ್ರೀಮಲರಾಯಿ ಮಂಟಮೆ ದೈವಸ್ಥಾನದ ಕಾಲಾವಧಿ ಜಾತ್ರೆ ಫೆ.02ರಿಂದ ಫೆ.03ರವೆರೆಗೆ ನಡೆಯಿತು. ಕಾಲಾವಧಿ ಜಾತ್ರೆ ಪ್ರಯುಕ್ತ ಫೆ.03ರಂದು ಪುತ್ತೂರು ಸಾಯಿ ಕಲಾ ಯಕ್ಷ ಬಳಗ ಬಾಲವನ ಇವರಿಂದ ಗುರುಗಳಾದ ಬಾಲಸುಬ್ರಹ್ಮಣ್ಯ ಭಟ್ ಗುತ್ತಿಗಾರು ಇವರ ನಿರ್ದೇಶನದ “ಕೊಲ್ಲೂರು ಕ್ಷೇತ್ರ ಮಹಾತ್ಮೆ” ಎಂಬ ಯಕ್ಷಗಾನ ಬಯಲಾಟ ನಡೆಯಿತು. ಬಳಿಕ ಗುರುಗಳಾದ ಬಾಲಸುಬ್ರಹ್ಮಣ್ಯ ಭಟ್ ಗುತ್ತಿಗಾರು ಇವರ ಹಾಗೂ ಪ್ರೇಮಾ ಕಿಶೋರ್ ಅವರಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇಷ್ಟಾರ್ಥ ಸಿದ್ಧಿಗಾಗಿ ಶ್ರೀ ಕ್ಷೇತ್ರ ಪಣೋಲಿಬೈಲ್‌ನಲ್ಲಿ ಹರಕೆ ಕೋಲ ನೇರವೇರಿಸಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ : ವಿರೋಧ ವ್ಯಕ್ತಪಡಿಸಿದ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ –ಕಹಳೆ ನ್ಯೂಸ್

ಮಂಗಳೂರು : ಇಷ್ಟಾರ್ಥ ಸಿದ್ಧಿಗಾಗಿ ಬಂಟ್ವಾಳದ ಶ್ರೀ ಕ್ಷೇತ್ರ ಪಣೋಲಿಬೈಲ್‌ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದ ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ‘ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಕಾರು – ಕಹಳೆ ನ್ಯೂಸ್

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿಗೆ ಪಲ್ಟಿಯಾದ ಘಟನೆ ಇಂದು ಮುಂಜಾನೆ ವೇಳೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಚರಂಡಿಗೆ ಪಲ್ಟಿಯಾಗಿ ನಿಂತಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಸಹಿತ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರು ಯಾರು ಎಲ್ಲಿಯವರು ಎಂಬ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಪೋಲೀಸ್ ಠಾಣೆಗೆ ಕೂಡ ಯಾವ ಮಾಹಿತಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಬಿಸಿರೋಡು ಸಮೀಪದ ಮಾರ್ನಬೈಲು ಎಂಬಲ್ಲಿ ನಡೆದಿದೆ. ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಮಾರ್ನಬೈಲು ದಾಸರ ಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹರಿಶ್ಚಂದ್ರ (37) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾಗಿರುವ ಹರಿಶ್ಚಂದ್ರ ಅವರು ಇಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ರೈಲ್ವೆ ಹಳಿಯನ್ನು ದಾಟುವ ಉದ್ದೇಶದಿಂದ ನಿಂತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿರಬೇಕು ಎಂದು...
1 68 69 70 71 72 147
Page 70 of 147