Sunday, November 24, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಿನ್ನದ ಬ್ರಾಸ್ಲೆಟ್ ಕಳೆದುಹೋಗಿರುತ್ತದೆ : ಸಂಪರ್ಕಿಸಿ 9901233839, 9845236403 – ಕಹಳೆ ನ್ಯೂಸ್

ಪುತ್ತೂರಿನ ಪಡೀಲ್ ನಿಂದ ಉಪ್ಪಿನಂಗಡಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕೈಯಲ್ಲಿದ್ದ ಚಿನ್ನದ ಬ್ರಾಸ್ಲೆಟ್ ಕಳೆದುಹೋಗಿರುತ್ತದೆ. ಸಿಕ್ಕಿದವರು ದಯವಿಟ್ಟು ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸಿ.. 9901233839, 9845236403 ವಿಳಾಸ : ವಿನೋದ್ ಪೂಜಾರಿ ಕೇಪು ಕುಕ್ಕೆಬೆಟ್ಟು ಮನೆ, ವಿಟ್ಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾಜಪಾ ಯುವ ಮೋರ್ಚಾ ಸುಳ್ಯಮಂಡಲದ ವತಿಯಿಂದ ‘ಅಗ್ನಿವೀರ್’ ಗೆ ಆಯ್ಕೆಯಾದ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಪುನೀತ್ ಗೆ ಅಭಿನಂದನೆ – ಕಹಳೆ ನ್ಯೂಸ್

ಪುತ್ತೂರು: 'ಅಗ್ನಿವೀರ್' ಗೆ ಆಯ್ಕೆಯಾಗಿರುವ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಕೊಂಬಾರು ಗ್ರಾಮದ ಪುನೀತ್ ಅವರಿಗೆ ಭಾಜಪಾ ಯುವ ಮೋರ್ಚಾ ಸುಳ್ಯಮಂಡಲದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಕೃಷ್ಣ ಎಂ ಆರ್ ಪ್ರ ಕಾರ್ಯದರ್ಶಿ ದಿವಾಕರ ಕುಂಬಾರ ,ಪ್ರದೀಪ್ ಕೊಲ್ಲರಮೂಲೆ,ದಿಲೀಪ್ ಉಪ್ಪಳಿಕೆ ,ಮನೀಶ್ ಪದೇಲ ,ಆಶಿಶ್ ರಾವ್ ಪ್ರಣೀತ್, ಸುಪ್ರೀತ್ ಅಮೈ ಮತ್ತಿತರ ಪದಾಧಿಕಾರಿಗಳು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

” ಶಾಂತ ಶ್ರೀ” ಪ್ರಶಸ್ತಿಗೆ ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗ ಇದರ ರೂವಾರಿ ಕೆ ರಮೇಶ್ ಕಲ್ಲಡ್ಕ ಆಯ್ಕೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಶಾರದಾ ಸೇವಾ ಪ್ರತಿಷ್ಠಾನ ರಿಜಿಸ್ಟರ್ ಕಲ್ಲಡ್ಕ ಇದರ ಆಶ್ರಯದಲ್ಲಿ ನಡೆಯುತ್ತಿರುವಂತಹ 47 ನೇ ವರ್ಷದ ಶ್ರೀ ಶಾರದಾ ಪೂಜಾ ಉತ್ಸವದ ಸಂದರ್ಭದಲ್ಲಿ ದಿವಂಗತ ಶಾಂತರಾಮ ಆಚಾರ್ಯ ಕಲ್ಲಡ್ಕ ಇವರ ಸವಿ ನೆನಪಿಗಾಗಿ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ವರ್ಷಂ ಪ್ರತಿ ನೀಡುವ "ಶಾಂತ ಶ್ರೀ " ಪ್ರಶಸ್ತಿಗೆ ಜಾನಪದ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಅದ್ಭುತ ಕಲಾವಿದರಾದ ಶಿಲ್ಪಾ ಗೊಂಬೆ ಬಳಗ ಕಲ್ಲಡ್ಕ ಇದರ ರೂವಾರಿಗಳಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಶ್ರೀಶಾರದಾ ಭಜನಾ ಮಂದಿರ ವೀರಕಂಭದಲ್ಲ 40ನೇ ವರ್ಷದ ಶ್ರೀ ಶಾರದಾ ಮಹೋತ್ಸವ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಶ್ರೀ ಶಾರದಾ ಭಜನಾ ಮಂದಿರ ವಿರ ಕಂಬದಲ್ಲಿ 40ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಅ.3ರಿಂದ ಆರಂಭಗೊಂಡಿದ್ದು, ಅ.13 ನೇ ತಾರೀಖಿನ ತನಕ ನಡೆಯಲಿದೆ. ಅ. 11ರ ಬೆಳಿಗ್ಗೆ ಗಣಹೋಮದ ನಂತರ ಶ್ರೀ ಶಾರದ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಲಿದ್ದು, ರಾತ್ರಿ 8 ಗಂಟೆ ತನಕ ಅರ್ಥ ಏಕಹ ಭಜನಾ ಕಾರ್ಯಕ್ರಮ ನೆರವೇರಲಿದೆ. ಅ.12ರ ಸಂಜೆ 5 ಗಂಟೆಗೆ ದುರ್ಗನಮಸ್ಕಾರ ಪೂಜೆ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಣೆಮಂಗಳೂರು ಸೇತುವೆಯಲ್ಲಿ ತಾಂತ್ರಿಕ ದೋಷದಿಂದ ಕೆಟ್ಟು ನಿಂತ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ : ಅರ್ಧ ತಾಸಿಗಿಂತಲೂ ಹೆಚ್ಚು ಹೊತ್ತು ಉಂಟಾದ ಟ್ರಾಫಿಕ್ ಜಾಮ್ – ಕಹಳೆನ್ಯೂಸ್

ಬಂಟ್ವಾಳ: ತಾಂತ್ರಿಕ ದೋಷದಿಂದ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿಯೊಂದು ಪಾಣೆಮಂಗಳೂರು ಸೇತುವೆಯಲ್ಲಿ ಕೆಟ್ಟು ನಿಂತ ಪರಿಣಾಮ ಸುಮಾರು ಅರ್ಧ ತಾಸಿಗಿಂತಲೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ಉಂಟಾದ ಘಟನೆ ನಡೆಯಿತು. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಮಾಡುತ್ತಿದ್ದ ಈ ಲಾರಿ ಬಿಸಿರೋಡಿನ ಪಾಣೆಮಂಗಳೂರು ನೇತ್ರಾವತಿ ಸೇತುವೆಯ ಮಧ್ಯ ಭಾಗದಲ್ಲಿ ಕೆಟ್ಟು ನಿಂತಿತ್ತು. ಸಂಜೆ ಸುಮಾರು 6.30...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾರತೀಯ ಸಾಂಪ್ರದಾಯಿಕ ಯುದ್ಧ ಕಲೆ ಥಾಂಗ್ – ತಾ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕಂಚು ಗೆದ್ದ ಗ್ರಾಮೀಣ ಪ್ರತಿಭೆ- ಕಹಳೆ ನ್ಯೂಸ್

ಬಂಟ್ವಾಳ: ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ‌ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ     (ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವಿಭಾಗದ ಪ್ರಥಮ‌ ವರ್ಷದ ಡಿಪ್ಲೋಮ ವಿದ್ಯಾರ್ಥಿ ಸತೀಶ್ ಎಸ್. ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅ.5 ರಿಂದ ಅ.7 ರವರೆಗೆ ತಾಂಗ್- ತಾ ಫೆಡರೇಷನ್ ಆಫ್ ಇಂಡಿಯದ ಸಹಕಾರದೊಂದಿಗೆ ನಡೆದ ಈ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ-ಕಹಳೆ ನ್ಯೂಸ್

ಬಂಟ್ವಾಳ: ದೇಶದ ಮಾನವ ಸಂಪನ್ಮೂಲ ಹಾಳಾಗಲು ಅಮಲು ಪದಾರ್ಥ ಸೇವನೆಯೊಂದೇ ಸಾಕು, ಬೇರಾವುದೇ ಕ್ಷಿಪಣಿ, ಬಾಂಬಿನ ಅಗತ್ಯವಿಲ್ಲ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ ಬಿ.ಸಿ. ಟ್ರಸ್ಟ್ ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮ ಸಹಯೋಗದೊಂದಿಗೆ ಬಂಟ್ವಾಳದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಾದೇವ ಮಿತ್ರ ಮಂಡಳಿ(ರಿ.) ಕಂಚಿಲ ಮಂಚಿ ಮಹಾ ಸಭೆ : ನೂತನ ಅಧ್ಯಕ್ಷರಾಗಿ ಉದಯ ಕುಮಾರ್ ಕಂಚಿಲ, ಕಾರ್ಯದರ್ಶಿಯಾಗಿ ಲೋಹಿತ್ ಕುಮಾರ್ ಕಂಚಿಲ ಆಯ್ಕೆ- ಕಹಳೆ ನ್ಯೂಸ್

ಮಹಾದೇವ ಮಿತ್ರ ಮಂಡಳಿ(ರಿ.) ಕಂಚಿಲ ಮಂಚಿ ಇದರ ಮಹಾ ಸಭೆಯು ಇಂದು ಶಾಂತಿನಗರದಲ್ಲಿ ನಡೆಯಿತು.. ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಗಿದ್ದು, ಸದಸ್ಯರ ಒಮ್ಮತದ ನಿರ್ಧಾರದಿಂದ ಅಧ್ಯಕ್ಷರಾಗಿ ಉದಯ ಕುಮಾರ್ ಕಂಚಿಲ, ಕಾರ್ಯದರ್ಶೀಯಾಗಿ ಲೋಹಿತ್ ಕುಮಾರ್ ಕಂಚಿಲ ಆಯ್ಕೆಯಾದರು. ಪದಾಧಿಕಾರಿಗಳ ಆಯ್ಕೆ ಬಳಿಕ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆದಿದೆ....
1 7 8 9 10 11 147
Page 9 of 147