Recent Posts

Tuesday, November 26, 2024

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದವನೊಂದಿಗೆ ಪ್ರೀತಿ…!! ಬಳಿಕ ಅಸಲಿ ವಿಷಯ ತಿಳಿದು ಯುವತಿಗೆ ಶಾಕ್- ಕಹಳೆ ನ್ಯೂಸ್

ವಿಟ್ಲ: ಯುವತಿಯೋರ್ವರಿಗೆ ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯೊರ್ವರ ಜಾಡುಹಿಡಿಯ ಹೊರಟ ಮನೆಯವರಿಗೆ, ಮಗಳೊಂದಿಗೆ ಸ್ನೇಹಚಾರ ಮಾಡಿರುವುದು ಮಂಗಳಮುಖಿ ಎನ್ನುವ ಆಘಾತಕಾರಿ ವಿಚಾರ ಬೆಳಕಿಗೆ ಬಂದ ಬಗ್ಗೆ ವರದಿಯಾಗಿದೆ. ಇಂತದೊಂದು ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಗ್ರಾಮ ಒಂದರಲ್ಲಿ ನಡೆದಿದ್ದು, ಗ್ರಾಮದ ಯುವತಿ ತನಗೆ ಫೇಸ್ಬುಕ್ ನಲ್ಲಿ ನಾಲ್ಕು ವರ್ಷದ ಹಿಂದೆ ಪರಿಚಯವಾಗಿದ್ದ ಪ್ರದೀಪ್ ಎಂಬಾತನ ಪ್ರೀತಿಯ ಬಲೆಗೆ ಬಿದ್ದಿದ್ದಳು. ಪರಸ್ಪರ ಫೋನ್ ಮೂಲಕ ಮಾತನಾಡುತ್ತಿದ್ದು, ಆತ ತನ್ನನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮ ಗೋಸಾಗಾಟ: ‘ಆರೋಪಿಗಳ ಆಸ್ತಿ ಮುಟ್ಟುಗೋಲು ಸಹಿತ ಸರಕಾರ ಜಾರಿ ಮಾಡಿದ ಕಾನೂನು ಸರಿಯಾಗಿ ಪಾಲನೆ ಮಾಡಬೇಕು’ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ರಾಜ್ಯ ಸರಕಾರ ಗೋಹತ್ಯೆ ನಿಷೇಧ ಪ್ರತಿಬಂಧಕ ನಿಷೇದಾಜ್ಞೆ ಕಾನೂನು ಜಾರಿ ಮಾಡಿದ್ದು, ಆಸ್ತಿ ಮುಟ್ಟುಗೋಲು ಸಹಿತ ಸರಕಾರ ಜಾರಿ ಮಾಡಿದ ಕಾನೂನು ಸರಿಯಾಗಿ ಪಾಲನೆ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪೋಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬಿಸಿರೋಡಿನ ಶಾಸಕರ ಕಚೇರಿಯಲ್ಲಿ ಕಾನೂನು ಸುವ್ಯವಸ್ಥೆಯ ಹಿನ್ನೆಯಲ್ಲಿ ಕರೆದ ಪೋಲಿಸ್ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು, ಕ್ರಿಮಿನಲ್ ಚಟುವಟಿಕೆಗಳು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಟ್ಟಡ ಕಾಮಗಾರಿ ಸಂದರ್ಭದಲ್ಲಿ ಮೃತಪಟ್ಟ ಅಮ್ಮುಂಜೆ ನರಂಗಬೆಟ್ಟು ನಿವಾಸಿ ದೀಪಕ್ ಅವರ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ಸಂದರ್ಭದಲ್ಲಿ ಅವಘಡದಲ್ಲಿ ಮೃತಪಟ್ಟ ಅಮ್ಮುಂಜೆ ನರಂಗಬೆಟ್ಟು ನಿವಾಸಿ ದೀಪಕ್ ಇವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಸಾಂತ್ವಾನ ಹೇಳಿ,ಸರಕಾರದಿಂದ ದೊರಕುವ ಪರಿಹಾರವನ್ನು ದೀಪಕ್ ಕುಟುಂಬಕ್ಕೆ ಒದಗಿಸುವ ಭರವಸೆ ನೀಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ವಾಮನ ಆಚಾರ್ಯ,ಪಂ.ಉಪಾಧ್ಯಕ್ಷರಾದ ಪ್ರಮೀಳ,ಪಂ.ಸದಸ್ಯರಾದ ಕಾರ್ತಿಕ್ ಬಲ್ಲಾಳ್,ರವೀಂದ್ರ ಸುವರ್ಣ ,ರೊನಾಲ್ಡ್ ಡಿಸೋಜ, ರಾಧಾಕೃಷ್ಣ ತಂತ್ರಿ,ಭಾಗೀರಥಿ,ಲೀಲಾ,ಲಕ್ಷ್ಮೀ, ಪಂ.ಅಭಿವೃದ್ಧಿ ಅಧಿಕಾರಿ ನಯನ,ಪ್ರಮುಖರಾದ ಕಿಶೋರ್ ಪಲ್ಲಿಪಾಡಿ,ಪ್ರಕಾಶ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಪದವಿಯಲ್ಲಿ 9ನೇ ರ್ಯಾಂಕ್ ಪಡೆದಿದ್ದ ವಿಕಲಚೇತನ ವಿದ್ಯಾರ್ಥಿ ಆದಿತ್ಯ ಭಟ್ ನಿಧನ – ಕಹಳೆ ನ್ಯೂಸ್

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಸಾಲಿನಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯ ಬಿ.ಕಾಂ.ನಲ್ಲಿ 93.8 ಶೇ.ಅಂಕಗಳಿಸಿ 9ನೇ ರ‍್ಯಾಂಕ್ ಪಡೆದಿದ್ದ ವಿಕಲಚೇತನ ವಿದ್ಯಾರ್ಥಿ ಆದಿತ್ಯ ಭಟ್ ಸಾವನ್ನಪ್ಪಿದ್ದಾರೆ. ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ ಆದಿತ್ಯ ಭಟ್ (21) ಮಾಂಸಖಂಡಗಳ ಕ್ಷೀಣತೆಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದರ ಪರಿಣಾಮ ದೈಹಿಕ ಅಂಗವಿಕಲತೆಯಿಂದ ಬಳಲಿ ನಡೆಯಲಾಗದ ಸ್ಥಿತಿಯಲ್ಲಿದ್ದ ಆತನನ್ನು ತಂದೆ ಗಣೇಶ ಭಟ್ ಅವರೇ ಪ್ರತಿದಿನ ಕಾಲೇಜಿಗೆ ಕರೆದುಕೊಂಡು ಬರುತ್ತಿದ್ದರು. ಆತ ವೀಲ್‌ಚೇರ್‌ನಲ್ಲೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಿದ್ದೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಕಾರು: ಪವಾಡಸದೃಶವಾಗಿ ಪಾರಾದ ಚಾಲಕ – ಕಹಳೆ ನ್ಯೂಸ್

ಬಂಟ್ವಾಳ: ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದ್ದು, ಚಾಲಕ ಯಾವುದೇ ಗಾಯವಿಲ್ಲದೆ ಪವಾಡಸದೃಶವಾಗಿ ಪಾರಾಗಿದ್ದಾನೆ. ನರಿಕೊಂಬು ನಿವಾಸಿ ಕುಶಾಂತ್ ಅವರು ಪವಾಡಸದೃಶವಾಗಿ ಪಾರಾದ ವ್ಯಕ್ತಿ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಪಾಣೆಮಂಗಳೂರು ಎಂಬಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಕೆಳಗೆ ಸುಮಾರು 30 ಅಡಿ ಅಳಕ್ಕೆ ಕಾರು ಉರುಳಿ ಬಿದ್ದಿದೆ. ಕುಶಾಂತ್ ಅವರು ಜನರೇಟರ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಶ್ರೀರಾಮ ಮಂದಿರ ಕಲ್ಲಡ್ಕ ಶಾಖೆ ಹಾಗೂ ನೇತಾಜಿ ಕಲ್ಲಡ್ಕ ಶಾಖೆಯ ಜಂಟಿ ಆಶ್ರಯದಲ್ಲಿ ಮಾತೃಧ್ಯಾನ, ಮಾತೃಪೂಜನ, ಮಾತೃವಂದನಾ, ಮಾತೃಭೋಜನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಶ್ರೀರಾಮ ಮಂದಿರ ಕಲ್ಲಡ್ಕ ಶಾಖೆ ಹಾಗೂ ನೇತಾಜಿ ಕಲ್ಲಡ್ಕ ಶಾಖೆಯ ಜಂಟಿ ಆಶ್ರಯದಲ್ಲಿ ಮಾತೃಧ್ಯಾನ, ಮಾತೃಪೂಜನ, ಮಾತೃವಂದನಾ, ಮಾತೃಭೋಜನ ಕಾರ್ಯಕ್ರಮವು ಕಲ್ಲಡ್ಕ ಶ್ರೀ ರಾಮ ಮಂದಿರದ ಮಾಧವ ಸಭಾಭವನದಲ್ಲಿ ಬಹಳ ಸಂಭ್ರಮಯುತವಾಗಿ ನಡೆಯಿತು. ಈ ಪ್ರಯುಕ್ತ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ಶಾಖೆಯ ಪ್ರಮುಖ ಶಿಕ್ಷಕರಾದ ಶ್ರಿ ದಿನೇಶ್ ರಾಮನಗರ ಇವರು ವಹಿಸಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರುದ್ರಗಿರಿಯ ರಣಕಹಳೆ | ಜಗದೀಶ್ ಕಾರಂತ್ ಭಾಷಣ ವಿರುದ್ದ ಜಿಲ್ಲಾಧಿಕಾರಿ ಹಾಕಿದ ಕೇಸಿನ ಚಾರ್ಜ್ ಶೀಟ್ ಗೆ ಹೈಕೋರ್ಟ್ ತಡೆಯಾಜ್ಞೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜ ಕ್ಷೇತ್ರದ ಪಾವಿತ್ರತೆ ಧಕ್ಕೆ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ನಡೆದ ಪ್ರತಿಭಟನೆ " ರುದ್ರಗಿರಿಯ ರಣಕಹಳೆ " ಕಾರ್ಯಕ್ರಮದಲ್ಲಿ ಜಗದೀಶ್ ಕಾರಂತ್ ಭಾಷಣ ಮಾಡಿದ್ದರು. ಕಾರಂತ್ ಭಾಷಣದ ವಿರುದ್ದ ಜಿಲ್ಲಾಧಿಕಾರಿ ದೂರು ನೀಡಿ, ಕೇಸು ದಾಖಲಿಸಿದ್ದರು ಹಾಗೂ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈಗ ಆ ಚಾರ್ಜ್ ಶೀಟ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಅಧಿಕಾರಿಗಳು ಸಂಚರಿಸುತ್ತಿದ್ದ ಕಾರಿನ ಗಾಜು ಪುಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪೊಲೀಸರು – ಕಹಳೆ ನ್ಯೂಸ್

ಬಂಟ್ವಾಳ: ತುಂಬೆ ಬಳಿ ಸರಕಾರಿ ಅಧಿಕಾರಿಗಳು ಸಂಚರಿಸುತ್ತಿದ್ದ ಕಾರಿನ ಗಾಜು ಪುಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಸಜೀಪ ಕೊಣೆಮಾರ್ ನಿವಾಸಿ ಸಂಶುದ್ದೀನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಗಳೂರು ಜಿ.ಪಂ ಕಚೇರಿಯ ವಾಹನವೊಂದರ ಚಾಲಕ ದೇವದಾಸ್ ಅವರು, ಪುತ್ತೂರಿನಲ್ಲಿ ನಡೆಯುವ ಅಗತ್ಯ ಮೀಟಿಂಗ್ ನಲ್ಲಿ ಭಾಗವಹಿಸಲು ಜಿಲ್ಲಾ ಪಂಚಾಯತ್ ನ ಮೂವರು ಅಧಿಕಾರಿಗಳನ್ನು ಕಾರಿನಲ್ಲಿ ಮಂಗಳೂರಿನಿಂದ ಪುತ್ತೂರಿಗೆ ಕರೆದುಕೊಂಡು ಹೋಗುವ ವೇಳೆ ಈ ಘಟನೆ...
1 92 93 94 95 96 147
Page 94 of 147