Friday, November 22, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಆಯ್ಕೆಯಾದ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ – ಕಹಳೆ ನ್ಯೂಸ್

ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಪ್ರವರ್ಗ ‘ಎ’ ಗೆ ಸೇರಿದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ರಾಜ್ಯ ಧಾರ್ಮಿಕ ಪರಿಷತ್ ನಿರ್ಣಯಗಳಾನುಸಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ರವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಯತಿರಾಜ ನೇಮಿಸಿದ್ದಾರೆ.  ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

‘ಚಾರ್ಮಾಡಿ ಘಾಟ್ ರಸ್ತೆ 343.74 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ’ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ; ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು ಬೆಳ್ತಂಗಡಿ, ಫೆ 06 : ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು- ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಚಾರ್ಮಾಡಿ ಘಾಟ್ ರಸ್ತೆ 343.74 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : 70ಸಾವಿರ ಮೌಲ್ಯದ ನಗ-ನಗದು ದೋಚಿ ಪರಾರಿ – ಕಹಳೆ ನ್ಯೂಸ್

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗದ ಚಿಲಕವನ್ನು ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಜ.31ರಂದು ಮಧ್ಯಾಹ್ನ ಸಂಭವಿಸಿದೆ. ರಾಮನಗರ ಶ್ರೀ ದುರ್ಗಾ ನಿವಾಸಿ ರಾಘವೇಂದ್ರ ಆಚಾರ್ಯ ಅವರ ಮನೆಯಿಂದ ಈ ಕಳ್ಳತನ ನಡೆದಿದೆ. ರಾಘವೇಂದ್ರ ಆಚಾರ್ಯ ಅವರು ಬೆಳ್ತಂಗಡಿಯಲ್ಲಿ ಚಿನ್ನಾಭರಣ ತಯಾರಿ ಕೆಲಸವನ್ನು ಮಾಡುತ್ತಿದ್ದು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಅನಾರೋಗ್ಯ ಪೀಡಿತನ ಮನೆಗೆ ಬಂದ ಅಪರಿಚಿತರಿಂದ ಚಿಕಿತ್ಸೆ ನೆಪದಲ್ಲಿ ವಂಚನೆ – ಕಹಳೆ ನ್ಯೂಸ್

ಬೆಳ್ತಂಗಡಿ: ಅನಾರೋಗ್ಯ ಪೀಡಿತ ವ್ಯಕ್ತಿಯ ಮನೆಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮಲಗಿದ್ದಲ್ಲಿಯೇ ಇದ್ದ ವ್ಯಕ್ತಿಯನ್ನು ಗುಣ ಪಡಿಸುವುದಾಗಿ ಹೇಳಿ 30 ಸಾವಿರ ರೂ. ಪಡೆದುಕೊಂಡು ಪರಾರಿಯಾದ ಘಟನೆ ಮುಂಡಾಜೆ ಗ್ರಾಮದಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ದಯಾನಂದ ಎಂಬವರು ವಂಚನೆಗೆ ಒಳಗಾದ ವ್ಯಕ್ತಿ. ಇವರ ತಂದೆ ಕಟ್ಟಡದಿಂದ ಬಿದ್ದು ಸೊಂಟದ ಬಲ ಕಳೆದುಕೊಂಡು ಮಲಗಿದಲ್ಲಿಯೇ ಇದ್ದರು. ಜ.27ರಂದು ಇವರ ಮನೆಗೆ ಬೈಕ್‍ನಲ್ಲಿ ಬಂದ ಇಬ್ಬರು ಅಪರಿಚಿತರು ತಾವು ಆಯುರ್ವೇದ ಪಂಡಿತರಾಗಿದ್ದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವೇಣೂರಿನಲ್ಲಿ ಪಟಾಕಿ ಘಟಕ ಸ್ಪೋಟ : ದ.ಕ. ಜಿಲ್ಲೆಯಲ್ಲಿ ಸುಡುಮದ್ದು ತಯಾರಿಕಾ ಘಟಕಗಳ ಪರವಾನಿಗೆ ತಾತ್ಕಾಲಿಕ ಅಮಾನತು – ಕಹಳೆ ನ್ಯೂಸ್

ಮಂಗಳೂರು : ವೇಣೂರಿನಲ್ಲಿ ಪಟಾಕಿ ಘಟಕ ಸ್ಪೋಟದಿಂದ ಮೂವರ ಸಾವು ಘಟನೆ ನಡೆದ ನಂತರ ಸರ್ಕಾರ ಎಚ್ಚೆತ್ತುಕೊಂಡಿದೆ.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿಬರ್ಂಧ ವಿಧಿಸಿ ದ.ಕ ಜಿಲ್ಲಾಧಿಕಾರಿ (ಪ್ರಭಾರ) ಡಾ.ಆನಂದ ಕೆ. ಆದೇಶ ಮಾಡಿದ್ದಾರೆ. ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ನಿಬರ್ಂಧಿಸಿ ಅಮಾನತ್ತಿನಲಿಡಲು ಆದೇಶ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ, ಸರ್ಕಾರದ ಮಾರ್ಗಸೂಚಿ ಪಾಲನೆಯ ಮರುಪರಿಶೀಲನೆಗಾಗಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರುಪರಿಶೀಲನೆಗೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ. 01ರಂದು 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1ರಂದು 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು 12,777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಮೇ. 01ರಂದು ಸಂಜೆ 6.45ಕ್ಕೆ ಗೋಧೋಳಿ ಲಗ್ನದಲ್ಲಿ ಸಾಮೂಹಿಕ ವಿವಾಹ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಗೋಳಿಯಂಗಡಿ ಜಮೀನಿನಲ್ಲಿನ ಸುಡುಮದ್ದು ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟ : ಪರಾರಿಯಾಗಲು ಯತ್ನಿಸಿದ ಮಾಲಕ ಪೊಲೀಸರ ವಶಕ್ಕೆ..? – ಕಹಳೆ ನ್ಯೂಸ್

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್‌ತ್ಯಾರು ಸಮೀಪ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ಕೆಲವರಿಗೆ ಗಾಯಗಳಾಗಿವೆ. ತಡರಾತ್ರಿ ತನಕ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.ಸ್ಫೋಟದ ತೀವ್ರತೆ ಗೆ ದೇಹಗಳು ಛಿದ್ರ ಛಿದ್ರವಾಗಿದ್ದು ಅಡಿಕೆ ಗಿಡದ ಬುಡದಲ್ಲಿ ದೇಹಗಳು ಪತ್ತೆಯಾಗಿವೆ. ತೋಟದ ವಿವಿಧ ಭಾಗಗಳಲ್ಲಿ ಪಾದ, ಕೈ, ಕಾಲು, ಮೆದುಳು ಬಿದ್ದಿರುವ ದೃಶ್ಯಗಳು ತೀವ್ರತೆಯನ್ನು ಸಾರಿ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ಗೋಳಿಯಂಗಡಿ ಬಶೀರ್ ರ ಜಮೀನಿನಲ್ಲಿನ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ; ಮೂವರು ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ, ಜ 28 : ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಕೇರಳದ ಸ್ವಾಮಿ(55) , ಕೇರಳದ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದು, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಗಾಯಗೊಂಡವರು. ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದು, ಇಲ್ಲಿ...
1 11 12 13 14 15 58
Page 13 of 58