Saturday, November 23, 2024

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿಸುಬ್ರಹ್ಮಣ್ಯ

ಮಹಾ ಶಿವರಾತ್ರಿ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದಿಂದ ಸ್ವಚ್ಛತಾ ಪಾಠ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಹಾ ಶಿವರಾತ್ರಿ ಹಬ್ಬ ಎಂದ ಕೂಡಲೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳು ಪಾದಯಾತ್ರೆ ಮೂಲಕ ಆಗಮಿಸಲು ಆರಂಭಿಸುತ್ತಾರೆ. ಹೀಗೆ ಬರುವ ಪಾದಯಾತ್ರಾರ್ಥಿಗಳಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸಲು ಶೌರ್ಯ ವಿಪತ್ತು ನಿರ್ವಹಣ ತಂಡ ಕೆಲಸ ಮಾಡುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾ ಶಿವರಾತ್ರಿ ಅಂಗವಾಗಿ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಹಾಗೂ ಚಾರ್ಮಾಡಿ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಾರೆ. ಈ ರೀತಿ ಬರುವ ಪಾದಯಾತ್ರಿಗಳು ಅಲ್ಲಲ್ಲಿ ವಿಶ್ರಾಂತಿ ಪಡೆದು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ನಾಳೆ ಶಿವರಾತ್ರಿ ಜಾಗರಣೆ : ಧರ್ಮಸ್ಥಳಕ್ಕೆ ಬರುತ್ತಿದ್ದಾರೆ 50ಸಾವಿರ ಪಾದಯಾತ್ರಿಗಳು – ಕಹಳೆ ನ್ಯೂಸ್

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ. 18ರಂದು ನಡೆಯುವ ಶಿವರಾತ್ರಿ ಆಚರಣೆಗೆ ನಾಡಿನ ವಿವಿಧೆಡೆಯಿಂದ 50 ಸಾವಿರಕ್ಕೂ ಅಧಿಕ ಪಾದಯಾತ್ರಿಗಳ ಸಹಿತ ಲಕ್ಷಕ್ಕೂ ಅಧಿಕ ಭಕ್ತರು ಸೇರುವುದರಿಂದ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಸಹಿತ ನಾನಾ ಊರುಗಳಿಂದ ಪ್ರತೀ ವರ್ಷದಂತೆ ಅನೇಕ ಪಾದಯಾತ್ರಿಗಳ ಸಂಘಟನೆಗಳ ಮೂಲಕ ಭಕ್ತರು ಶಿವನಾಮ ಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಆಗಮಿಸುತ್ತಿದ್ದಾರೆ. 50 ಸಾವಿರ ಪಾದಯಾತ್ರಿಗಳು ಈಗಾಗಲೇ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ; ಮಂಜುನಾಥ ಸ್ವಾಮಿ ದರ್ಶನ ಪಡೆದು, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ರಾಜ್ಯಪಾಲರು – ಕಹಳೆ ನ್ಯೂಸ್

ಬೆಳ್ತಂಗಡಿ: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಇಂದು ಮುಂಜಾನೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅವರನ್ನು ಕ್ಷೇತ್ರದ ವತಿಯಿಂದ ಹೆಗ್ಗಡೆಯವರು ಗೌರವಿಸಿದರು. ಬಳಿಕ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡ ನವಜೀವನ ಸಮಾವೇಶ,...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ರಬ್ಬರ್‌ ಬೆಳೆಗೆ ಬಜೆಟ್‌ನಲ್ಲಿ ಬೆಂಬಲ ಬೆಲೆ – ಕೇರಳ ಮಾದರಿ ಪರಿಹಾರಕ್ಕೆ ಆಗ್ರಹ ; ಉಜಿರೆ ರಬ್ಬರ್‌ ಸೊಸೈಟಿ ನೇತೃತ್ವದಲ್ಲಿ ಶಾಸಕ ಹರೀಶ್‌ ಪೂಂಜ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ರಬ್ಬರ್‌ ಕೃಷಿಕರ ಸಮಸ್ಯೆ ಕುರಿತು ಮನವರಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ: ವರ್ಷದ ಎಲ್ಲ ದಿನಗಳಲ್ಲೂ ಆದಾಯ ತರುವಂತಹ ಬೆಳೆ ರಬ್ಬರ್‌. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಿಕೆಯ ಜತೆಗೆ ಮುಖ್ಯ ವಾಣಿಜ್ಯ ಬೆಳೆಯಾಗಿ ರಬ್ಬರನ್ನು ಅವಲಂಬಿ ಸಿದ್ದರೂ ಐದು ವರ್ಷಗಳಿಂದ ಉತ್ತಮ ಧಾರಣೆ ಕಾಣದಿರುವ ಹಿನ್ನೆಲೆಯಲ್ಲಿ ಮಕ್ಕಳಂತೆ ಸಲಹಿದ ರಬ್ಬರ್‌ ಮರಗಳ ಬುಡಕ್ಕೆ ಕೊಡಲಿ ಏಟು ಹಾಕಬೇಕಾದ ಅನಿವಾರ್ಯ ಪರಿಸ್ಥಿತಿ ಒದಗಿದೆ. ರಾಜ್ಯದಲ್ಲಿ 60 ಸಾವಿರ ಹೆಕ್ಟೇರ್‌ಗೂ ಮೇಲ್ಪಟ್ಟು ಪ್ರದೇಶದಲ್ಲಿ ರಬ್ಬರ್‌ ಬೆಳೆಯಲಾಗುತ್ತಿದೆ. ದ.ಕ., ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿಯಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ ; ಶೀಘ್ರ ಲೋಕಾರ್ಪಣೆ ಮಾಡಲಾಗುವುದು ಎಂದ ಶಾಸಕ ಹರೀಶ್‌ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ: ಮಾನವನ ನೇರ ನಿರ್ಲಕ್ಷ್ಯ ಹಾಗೂ ದುರಾಸೆಯಿಂದ ಭವಿಷ್ಯದ ಪರಿಸರ ಅಕ್ಷರಶಃ ಮಾಲಿನ್ಯಕರವಾಗಲಿದೆ. ಇದನ್ನು ಇಂದೇ ಸರಿಪಡಿಸಿ ಸುಸ್ಥಿತಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ.ಪಂ. ಮುಂದಡಿಯಿಟ್ಟಿದ್ದು, ಪಟ್ಟಣ ವ್ಯಾಪ್ತಿಯ ಶೌಚಾಲಯದ ದ್ರವ ತ್ಯಾಜ್ಯವನ್ನು ಶುದ್ಧೀಕರಿಸಿ ಮರುಬಳಕೆಗೆ ಯೋಗ್ಯವಾಗಿಸುವ ಘಟಕ ಸ್ಥಾಪಿಸಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆ.ಯು. ಎಸ್‌. ಮತ್ತು ಡಿ.ಬಿ.)ಯಿಂದ ಯೋಜನೆ ಅನುಷ್ಠಾನಗೊಳಿಸಿದ್ದು 6.7 ಕೋ.ರೂ. ಘಟಕ ವೆಚ್ಚ, 5 ವರ್ಷಗಳ ನಿರ್ವಹಣೆ, ಸಕ್ಕಿಂಗ್‌ಯಂತ್ರ ಸಹಿತ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮ್ಯೂಸಿಯಂಗೆ ಉದ್ಯಮಿಯಿಂದ 1984 ಮಾಡೆಲ್ ನ ಸ್ಕೂಟರ್ ಕೊಡುಗೆ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಂಗಳೂರಿನಲ್ಲಿ ಚಿನ್ನದ ಉದ್ಯಮ‌ ಮಾಡುತ್ತಿರುವ ಕುಟುಂಬ ಧರ್ಮಸ್ಥಳಕ್ಕೆ ಅಗಮಿಸಿ ಧರ್ಮಾಧಿಕಾರಿಗೆ (ಶ್ರೀ ಕ್ಷೇತ್ರ ಧರ್ಮಸ್ಥಳ ಮ್ಯೂಸಿಯಂಗೆ) 1984 ಮಾಡೆಲ್ ನ ಸ್ಕೂಟರ್ ಮತ್ತು ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡಿದರು. ಬೆಂಗಳೂರು ನಗರತ್ ಪೇಟೆಯಲ್ಲಿ ಜ್ಯುವೆಲರಿ ಮಳಿಗೆ ನಡೆಸುತ್ತಿರುವ ಗುಜರಾತ್ ನಿವಾಸಿ ಬಾಬು ಲಾಲ್ ಜೀ ಮತ್ತು ಕುಟುಂಬ ಸಮೇತ ಜ.29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆಗೆ ಹೆದರಿ ಪ್ರಾಣ ಕಳೆದುಕೊಂಡ ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ – ಕಹಳೆ ನ್ಯೂಸ್

ಬೆಳ್ತಂಗಡಿ: ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವನ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿದ ಬೆದರಿಕೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19 ವರ್ಷ) ಮೃತಪಟ್ಟ ವಿದ್ಯಾರ್ಥಿ. ಹರ್ಷಿತ್ ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಮೇ 3: ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಕಹಳೆ ನ್ಯೂಸ್

ಬೆಳ್ತಂಗಡಿ : ಧರ್ಮಸ್ಥಳದಲ್ಲಿ 2023ರ ಮೇ 3ರಂದು ಸಂಜೆ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸಿರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇಲ್ಲ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದ ಭರಿಸಲಾಗುವುದು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು 1972ರಿಂದ ಉಚಿತ ಸಾಮೂಹಿಕ ವಿವಾಹವನ್ನು ಪ್ರತೀ ವರ್ಷ ನಡೆಸುತ್ತಿದ್ದು, ಈ ತನಕ...
1 21 22 23 24 25 58
Page 23 of 58