Sunday, November 24, 2024

ಬೆಳ್ತಂಗಡಿ

ಬೆಳ್ತಂಗಡಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೇಡಿಕೆಗೆ ಸ್ಪಂಧಿಸಿ ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಒದಗಿಸಿದ ಸಿ.ಎಂ ಯಡಿಯೂರಪ್ಪ -ಕಹಳೆ ನ್ಯೂಸ್

ಬೆಳ್ತಂಗಡಿ : ಐತಿಹಾಸಿಕ ಇತಿಹಾಸವುಳ್ಳ ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ ಹಾಲಿ ಶಾಸಕರಾದ ಹರೀಶ್ ಪೂಂಜಾ ಹಾಗೂ ಮಾಜಿ ಶಾಸಕರಾದ ವಸಂತ ಬಂಗೇರ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂಧಿಸಿದ ಮುಖ್ಯಮಂತ್ರಿ ಅವರು 50 ಲಕ್ಷ ಮಂಜೂರುಗೊಳಿಸುವಂತೆ ಆದೇಶಿಸಿರುತ್ತಾರೆ....
ಬೆಳ್ತಂಗಡಿ

ಫೆಬ್ರವರಿ 7 ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ-ಕಹಳೆ ನ್ಯೂಸ್

ಬೆಳ್ತಂಗಡಿ : ಫೆಬ್ರವರಿ 7 ರಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ ಅವರು ಬೆಳ್ತಂಗಡಿಗೆ ಆಗಮಿಸಲಿದ್ದಾರೆ.   ಇವರು ಬೆಳಗ್ಗೆ ವಿಮಾನ ಮೂಲಕ ಮಂಗಳೂರಿಗೆ ಆಗಮಿಸಿ, 10-30ಕ್ಕೆ ಧರ್ಮಸ್ಥಳದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿಮೀಸಲಾದ ಚತುಷ್ಟದ ರಸ್ತೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ 11-30ಕ್ಕೆ ಬೆಳ್ತಂಗಡಿಯಲ್ಲಿ ನಿರ್ಮಾವಾಗಲಿರುವ ಪರಿವೀಕ್ಷಣಾ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೇರವೇರಿಸಲಿದ್ದು, ನಂತರ ಧರ್ಮಸ್ಥಳಕ್ಕೆ ಭೇಟಿ ನೀಡಿ ಸಂಜೆ ಬೆಂಗಳೂರಿಗೆ ಹಿಂದಿರುಗಲಿರುವರು ಎಂದು ತಿಳಿದು ಬಂದಿದೆ....
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಹೆತ್ತ ತಾಯಿಯನ್ನು ಬೀದಿಯಲ್ಲಿ ಬಿಟ್ಟ ಪಾಪಿ ಮಕ್ಕಳು-ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಪಾಪಿ ಮಕ್ಕಳು ಹೆತ್ತ ತಾಯಿಯನ್ನು ಬೀದಿಯಲ್ಲಿ ಬಿಟ್ಟ ಅಮಾನವೀಯ ಘಟನೆ ನಡೆದಿದೆ. ಮೂಲತಃ ಕಳಿಯ ಗ್ರಾಮದ ಜನತಾ ಕಾಲೋನಿ ನಿವಾಸಿಯಾದ ವೃದ್ಧೆಯೊಬ್ಬರಿಗೆ ಐವರು ಮಕ್ಕಳಿದ್ದರೂ ಅನಾಥ ಪರಿಸ್ಥಿತಿ ಎದುರಾಗಿದ್ದು, ಅವರಿಗೆ ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರಿದ್ದು, ಎಲ್ಲರಿಗೂ ವಿವಾಹವಾಗಿದೆ. ಈ ವೃದ್ಧೆ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಆರೈಕೆ ಮಾಡುವವರು ಯಾರು ಎಂಬ...
ಬೆಳ್ತಂಗಡಿ

ಬೆಳ್ತಂಗಡಿಯ ಕುಕ್ಕೇಡಿ ಎಂಬಲ್ಲಿ ನೀರಿನಲ್ಲಿ ಮುಳುಗಿ ಯುವಕ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ : ಮಾಲಾಡಿ ಬಳಿಯ ಕುಕ್ಕೇಡಿ ಎಂಬಲ್ಲಿ ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಾಲಾಡಿ ಗ್ರಾಮದ ನಿವಾಸಿ 26 ವರ್ಷದ ರವೀಂದ್ರ ಎಂದು ಗುರುತಿಸಲಾಗಿದೆ. ಈ ಘಟನೆ ಕುಕ್ಕೇಡಿಯ ಉಮಿಲಾಯಿ ಡ್ಯಾಮ್ ಬಳಿ ನದಿ ನೀರಿನಲ್ಲಿ ಯುವಕನು ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಳ್ತಂಗಡಿ

ನಿಧಿ ಸಮರ್ಪಣಾ ಅಭಿಯಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾವೂರು: ದೇಶದಲ್ಲೆಡೆ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನ ನಡೆಯುತ್ತಿದ್ದು, ಭಗವಂತ ಶ್ರೀ ರಾಮಚಂದ್ರನ ಜನ್ಮಸ್ಥಾನವಾಗಿರುವ ಅಯೋಧ್ಯೆಯನ್ನು ಕಣ್ತುಂಬಿಕೊಳ್ಳಲು ದೇಶದ ಜನರು ಕಾತುರರಾಗಿದ್ದರೆ. ಪರಿವಾರದ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರ ಮಾರ್ಗದರ್ಶನದಂತೆ ನಿಧಿ ಸಮರ್ಪಣಾ ಅಭಿಯಾನದಲ್ಲಿ ಭಾಗವಹಿಸುತ್ತಿದ್ದಾರೆ. ಆದಿತ್ಯವಾರ ಪಚ್ಚನಾಡಿ,ಕಾವೂರು ಭಾಗದ ವಿವಿಧ ಕಡೆ ಮನೆಮನೆಗಳಿಗೆ ತೆರಳಿ ನಿಧಿ ಸಮರ್ಪಣಾ ಅಭಿಯಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗಿಯಾಗಿದ್ದರು. ಶಾಸಕರ ಜೊತೆಗೆ ಮಂಡಲ ಪ್ರಧಾನ...
ಬೆಳ್ತಂಗಡಿ

ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ಮಂಡಲದ ವತಿಯಿಂದ ಜನವರಿ 31 ರಂದು ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ. ಈ ಕುರಿತಾಗಿ ಪೂರ್ವಭಾವಿ ಸಭೆಯಲ್ಲಿ ಇಂದು ನಡೆಸಲಾಯಿತು. ಸಭೆಯಲ್ಲಿ ಧರ್ಮಸ್ಥಳ ಮಹಾ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು....
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಇದರ ಅಶ್ರಯದಲ್ಲಿ ರಬ್ಬರ್ ಟ್ಯಾಪಿಂಗ್ ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮ -ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಇದರ ಅಶ್ರಯದಲ್ಲಿ ರಬ್ಬರ್ ಟ್ಯಾಪಿಂಗ್ ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮ ಮಾಚಾರು ಶಶಿಧರ ಭಟ್ ಅವರ ವಠಾರದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ರಬ್ಬರ್ ಮಂಡಳಿ ಪ್ರಾದೇಶಿಕ ಕಛೇರಿಯ ಸಹಾಯಕ ಅಯುಕ್ತರಾದ ಶ್ರೀ ಬಾಲಕೃಷ್ಣ ಅವರು 8 ದಿನ ತರಬೇತಿ ಪಡೆದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ರಬ್ಬರ್ ಮರಗಳ ಕಾಳಜಿಯ ಕುರಿತು ಮತ್ತು ತರಬೇತಿ ಅವಶ್ಯಕತೆ ಕುರಿತು ಮಾತಾಡಿದರು. ಹಾಗೂ ರಬ್ಬರ್ ಮಂಡಳಿಯಲ್ಲಿ ಕಾರ್ಮಿಕರಿಗಿರುವ ಕೆಲವು ಸೌಲಭ್ಯಗಳ...
ಬೆಳ್ತಂಗಡಿ

ಇಂದು ಮೈರೋಳ್ತಡ್ಕದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ- ಕಹಳೆ ನ್ಯೂಸ್

ಮೈರೋಳ್ತಡ್ಕ: ಬೆಳ್ತಂಗಡಿ ತಾಲೂಕಿನ ಫ್ರೆಂಡ್ಸ್ ಮೈರೋಳ್ತಡ್ಕ ಇದರ ವತಿಯಿಂದ ಇಂದು 7ಗಂಟೆಗೆ ದ್ವಿತೀಯ ವರ್ಷದ MVL-2021 ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದ ಕ್ರೀಡಾಂಗಣದಲ್ಲಿ ವಲಯ ಮಟ್ಟದ 8ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನೆರವೇರಲಿದೆ. ಈ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಆಗಮಿಸಲಿದ್ದಾರೆ. ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದಪ್ಪ ಪೂಜಾರಿ ಬೊಲೋಡಿ, ಅಧ್ಯಕ್ಷತೆಯಲ್ಲಿ...
1 47 48 49 50 51 58
Page 49 of 58