ಬೆಳ್ತಂಗಡಿಯಲ್ಲಿ ಬೈಕ್‌ಗಳ ಕಳವು ಪ್ರಕರಣ ; ಐವರು ಆರೋಪಿಗಳ ಹೆಡೆಮುರಿಕಟ್ಟಿದ ಎಸ್.ಐ. ನಂದಕುಮಾರ್ – ಕಹಳೆ ನ್ಯೂಸ್
ಬೆಳ್ತಂಗಡಿ, ಜು. 05 : ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಯವರು ಐವರು ಆರೋಪಿಗಳನ್ನು ವಶಕ್ಕೆ ಪಡೆದು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುರತ್ಕಲ್‌ನ ವಿಜಯ ಯಾನೆ ಆಂಜನೇಯ (23), ಉಳಾಯಿಬೆಟ್ಟು ನಿವಾಸಿ ಪ್ರದೀಪ್ ಯಾನೆ ಚೇತನ್ ಯಾನೆ ಪ್ರದಿ ( 27), ಬಂಟ್ವಾಳದ...