ಬೆಳ್ತಂಗಡಿಯಲ್ಲಿ ‘ ಡೆಂಗ್ಯೂ ನಿಯಂತ್ರಣಕ್ಕಾಗಿ ಆಂದೋಲನ, ಸ್ವಚ್ಚ ಮನೆ ಪ್ರಶಸ್ತಿ’ ; ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಘೋಷಣೆ – ಕಹಳೆ ನ್ಯೂಸ್
ಬೆಳ್ತಂಗಡಿ, ಜು. 09 : ಸ್ವಚ್ಛತೆಯ ಕೊರತೆಯಿಂದಾಗಿ ಡೆಂಗ್ಯೂ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಹರಡುತ್ತಿದೆ. ಹಾಗಾಗಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸ್ವಚ್ಚತೆ ಅತೀ ಮುಖ್ಯವಾಗಿದ್ದು, ಸಾರ್ವಜನಿಕರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಸ್ವಚ್ಚ ಮನೆ ಆಂದೋಲನ ನಡೆಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆರೋಗ್ಯ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ. ಜುಲೈ ೮ರಂದು ಬೆಳ್ತಂಗಡಿ ತಾಲೂಕು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಾಲೂಕಿನಲ್ಲಿರುವ 248 ಆಶಾಕಾರ್ಯಕರ್ತೆಯರು ತಮ್ಮ...