Wednesday, March 26, 2025

ಕುಂದಾಪುರ

ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಇಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಣ್ಯ(ಲಿಟ್ಲ್ ಸ್ಟಾರ್)ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ - ಮತ್ಯಾಡಿ ಯ ಮಹಮ್ಮದ್ ಶಯೀಪ್ (ಅರೇಬಿಕ್ ಧಾರ್ಮಿಕ ಪಠಣ) ಮತ್ತು ರಿಹಾನಿ ಶೆಟ್ಟಿ(ಛದ್ಮ ವೇಷ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ...
ಉಡುಪಿಕುಂದಾಪುರಸುದ್ದಿ

ಅಬಕಾರಿ ಹಗರಣದ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಗ್ಯಾರಂಟಿ ಮನೆ ಮನೆಗೆ ಬಾರ್ ಭಾಗ್ಯವೇ? : ಕಿಶೋರ್ ಕುಮಾರ್ ಕುಂದಾಪುರ -ಕಹಳೆ ನ್ಯೂಸ್

ಕುಂದಾಪು: ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಜನಪರ ಆಡಳಿತದ ಮೂಲಕ ದೇಶವನ್ನು ವಿಶ್ವದ ಮುಂಚೂಣಿ ಸ್ಥಾನಕ್ಕೇರಿಸಲು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೆತ್ತಲೂ ನೈತಿಕತೆ ಇಲ್ಲದ ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಗ್ಯಾರಂಟಿ 'ಮನೆ ಮನೆಗೆ ಬಾರ್ ಭಾಗ್ಯವೇ' ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಶ್ನಿಸಿದ್ದಾರೆ. ಹಗರಣಗಳ ಸರಮಾಲೆಯನ್ನೇ ಧರಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ 700 ಕೋಟಿ ರೂಪಾಯಿ ಮೌಲ್ಯದ ಅಬಕಾರಿ...
ಕುಂದಾಪುರಸುದ್ದಿ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ- ಕಹಳೆ ನ್ಯೂಸ್

ಉಡುಪಿ: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಸಂಘದ ಅಧ್ಯಕ್ಷ ರಾಜೇಶ್...
ಕುಂದಾಪುರಸುದ್ದಿ

ಕುಂದಾಪುರ ತಾಲೂಕು ಭಜನಾ ಮಂಡಳಿಗಳ ಒಕ್ಕೂಟದಿಂದ ಬ್ರಹತ್ ಪ್ರತಿಭಟನೆ-ಕಹಳೆ ನ್ಯೂಸ್

ಕುಂದಾಪುರ ತಾಲೂಕು ಭಜನ ಮಂಡಳಿಗಳ ಒಕ್ಕೂಟ (ರಿ) ಕುಂದಾಪುರ ಇದರ ನೇತೃತ್ವದಲ್ಲಿ ಭಜನಾ ಮಂಡಳಿಯ ಬಗ್ಗೆ ಭಜಕರ ಬಗ್ಗೆ ನಿಂದನೆ ಮಾಡಿದವರ ವಿರುದ್ಧ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರೊಂದಿಗೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು. ಇನ್ನು ಮುಂದೆ ಯಾವುದೇ ವ್ಯಕ್ತಿಯು ಈ ರೀತಿಯ ನಿಂದನೆ ಆಗಲಿ ಹೇಳಿಕೆಯಾಗಲಿ ನೀಡಬಾರದೆಂದು, ಅದಕ್ಕೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು.ಮನವಿ ನೀಡಲು ಆಗಮಿಸಿದಂತ ಎಲ್ಲಾ ಭಜಕರಿಗೆ, ಪದಾಧಿಕಾರಿಗಳಿಗೆ ಹಾಗೂ ವಿವಿಧ...
ಕುಂದಾಪುರಸುದ್ದಿ

ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಕುಂದಾಪುರ:ಕರ್ನಾಟಕ ಸರಕಾರ ರಾಜ್ಯ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ವಿದ್ಯಾರಣ್ಯ ಶಾಲೆಯ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ಕುಂದಾಪುರ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಈ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಈಶಾನ್ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ...
ಕುಂದಾಪುರಶಿಕ್ಷಣಸುದ್ದಿ

ಕುಂದಾಪುರ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆದ ಕುಂದಾಪುರ ತಾಲೂಕು ಪ್ರೌಢಶಾಲಾ ಮಕ್ಕಳ ಮತ್ತು ಚಿತ್ರಕಲಾ ಶಿಕ್ಷಕರ ಚಿತ್ರಕಲಾ ಪ್ರದರ್ಶನ ಮತ್ತು ಕಾರ್ಯಗಾರ -ಕಹಳೆ ನ್ಯೂಸ್

ಕುಂದಾಪುರ : ಇವತ್ತಿನ ದಿನಗಳಲ್ಲಿ ಚಿತ್ರಕಲೆಗೆ ತನ್ನದೇ ಆದಂತಹ ವಿಶಿಷ್ಟ ರೀತಿಯ ಸ್ಥಾನಮಾನಗಳಿವೆ. ಇಂತಹ ಒಂದು ಚಿತ್ರಕಲೆಗೆ ಕುಂದಾಪುರ ಭಾಗದ ಹಲವಾರು ಗಣ್ಯರು ಚಿತ್ರಕಲೆಗೆ ಕೊಟ್ಟಂತಹ ಕೊಡುಗೆಗಳು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಿದೆ. ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಬೀಜಾಡಿ ಹೇಳಿದ್ದಾರೆ. ಕುಂದಾಪುರ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆದ ಕುಂದಾಪುರ ತಾಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಮತ್ತು ಸರ್ಕಾರಿ ಪದವಿ...
ಉಡುಪಿಕುಂದಾಪುರಕ್ರೀಡೆಶಿಕ್ಷಣಸುದ್ದಿ

ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮಾಸ್ಟರ್ ತನ್ಮಯ್ ರಾವ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ ತರಗತಿಯಿಂದಲೇ ಐ.ಟಿ.ವಿಷಯಕ್ಕೆ ಸಂಬಂಧಿಸಿದ ವಿಶೇಷ ಬೋಧನೆಯು ಮಕ್ಕಳ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿನ ವಿವಿಧ ರೀತಿಯ ಪಠ್ಯೇತರ ಚಟುವಟಿಕೆಗಳು ಮಕ್ಕಳು ಕಲಿಕೆಯಲ್ಲಿ ಸ್ರಜನಶೀಲವಾಗಿ ಮತ್ತು...
ಉಡುಪಿಕುಂದಾಪುರಸುದ್ದಿ

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ದಸರಾ ಸಂಭ್ರಮದ ಆಚರಣೆ-ಕಹಳೆ ನ್ಯೂಸ್

ಕುಂದಾಪುರ : ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ (ರಿ) ಕುಂದಾಪುರ, ಸುಜ್ಞಾನ ಪದವಿ ಪೂರ್ವ ಕಾಲೇಜು, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿAದ ಆಚರಿಸಲಾಯಿತು. ಕರಾವಳಿ ಕರ್ನಾಟಕದಾದ್ಯಂತ ನವರಾತ್ರಿಯ ಉತ್ಸವವು ವಿಜ್ರಂಬಿಸುತ್ತಿದೆ ಮತ್ತು ಹುಲಿ ವೇಷ ಅಥವಾ ಹುಲಿ ನೃತ್ಯವು ಜನಮನ ಸೆಳೆಯುವ ಒಂದು ಸಾಂಸ್ಕೃತಿಕ ದೃಶ್ಯವಾಗಿದೆ. ಹುಲಿ ವೇಷ ಸಂಪ್ರದಾಯವು ಭಕ್ತಿಯಲ್ಲಿ ಆಳವಾಗಿ ಬೇರೂರಿದೆ. ಇದು ಪ್ರತಿಜ್ಞೆಯನ್ನು ಪೂರೈಸಲು ಅಥವಾ ದೈವಿಕ ರಕ್ಷಣೆಗಾಗಿ ದೇವಿಗೆ...
1 2 3 4 5 14
Page 3 of 14
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ