ಇಂದಿನಿಂದ ಕಾಸರಗೋಡು ಜಿಲ್ಲೆಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ; ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ಆದೇಶ – ಕಹಳೆ ನ್ಯೂಸ್
ಕಾಸರಗೋಡು, ಜು.17 : ಸಂಪರ್ಕದಿಂದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 17ರಿಂದ ಜುಲೈ 31 ರ ತನಕ ವಾಹನ ಸಂಚಾರಕ್ಕೆ ನಿಯಂತ್ರಣ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ. ಖಾಸಗಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಗಳಿಗೂ ನಿಯಂತ್ರಣ ಅನ್ವಯವಾಗಲಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಅನಗತ್ಯವಾಗಿ ವಾಹನಗಳನ್ನು ರಸ್ತೆಗಿಳಿಸಿದ್ದಲ್ಲಿ ಕ್ರಮ...