ಮೂಡುಬಿದಿರೆ : ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪುರಸಭಾ ಅಧಿಕಾರಿಗೆ ಚಾಟಿ ಬೀಸಿದ ಲೋಕಾಯುಕ್ತ ಅಧಿಕಾರಿಗಳು– ಕಹಳೆ ನ್ಯೂಸ್
ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಅಕ್ರಮವಾಗಿ ಗ್ಯಾರೇಜ್ ನಡೆಯುತ್ತಿದ್ದು ಇದರಿಂದ ಹೊರ ಬರುತ್ತಿರುವ ಕೊಳಚೆ ನೀರಿನಿಂದ ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಬಗ್ಗೆ ಪುರಸಭೆಗೆ ದೂರು ನೀಡಿದಾಗ ಕ್ರಮಕೈಗೊಂಡಿಲ್ಲ ನಂತರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಅವರು ಪುರಸಭೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಆದರೆ ಮತ್ತೂ ಪುರಸಭೆ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯರಾದ ಸದಾನಂದ ನಾರಾವಿ ಅವರು ಗುರುವಾರ ಆಡಳಿತ ಸೌಧದಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಾಯುಕ್ತಕ್ಕೆ ಲಿಖಿತ ದೂರು...